Home Bibles 2 ದಿನವೃತ್ತಾಂತ 11:23 · ಕನ್ನಡ ಬೈಬಲ್
2 ದಿನವೃತ್ತಾಂತ 11:23 · ಕನ್ನಡ ಬೈಬಲ್

ಅವನು ವಿವೇಕದಿಂದ ನಡೆದು ತನ್ನ ಎಲ್ಲಾ ಮಕ್ಕಳನ್ನು ಯೆಹೂದ ಬೆನ್ಯಾವಿಾ ನಿನ ದೇಶಗಳಲ್ಲಿರುವ ಎಲ್ಲಾ ಬಲವಾದ ಪಟ್ಟಣಗ ಳಲ್ಲಿ ಚದುರಿಸಿ ಅವರಿಗೆ ಬಹಳ ದವಸಧಾನ್ಯಗಳನ್ನು ಕೊಟ್ಟನು. ಆದರೆ ಹೆಂಡತಿಯರ ಸಮೂಹವನ್ನು ಆಶಿಸಿದನು.

Cross references

ಆದಿಕಾಂಡ 25:6

ಅಬ್ರಹಾಮನಿಗೆ ಇದ್ದ ಉಪಪತ್ನಿಗಳ ಮಕ್ಕಳಿಗೆ ಅಬ್ರಹಾಮನು ದಾನಗಳನ್ನು ಕೊಟ್ಟು ತಾನು ಜೀವಿಸುತ್ತಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವದಿಕ್ಕಿನ ಕಡೆಗೆ ಮೂಡಣ ದೇಶಕ್ಕೆ ಕಳುಹಿಸಿದನು.

1 ಅರಸುಗಳು 1:5

ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು--ನಾನೇ ಅರಸನಾಗಿರಬೇಕು ಅಂದುಕೊಂಡು ತನಗೋಸ್ಕರ ರಥಗಳನ್ನೂ ರಾಹುತ ರನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿ ಮನುಷ್ಯರನ್ನೂ ಸಿದ್ಧಮಾಡಿದನು.

2 ದಿನವೃತ್ತಾಂತ 10:8

ಆದರೆ ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಅವನು ಕೇಳಿ ಅವರಿಗೆ--

2 ದಿನವೃತ್ತಾಂತ 21:3

ಅವರ ತಂದೆಯು ಯೆಹೂದದಲ್ಲಿ ಕೋಟೆ ಯುಳ್ಳ ಪಟ್ಟಣಗಳ ಸಂಗಡ ಬೆಳ್ಳಿಬಂಗಾರವನ್ನೂ ಬೆಲೆ ಯುಳ್ಳ ವಸ್ತುಗಳನ್ನೂ ಅವರಿಗೆ ದಾನಗಳಾಗಿ ಕೊಟ್ಟನು. ಆದರೆ ಯೆಹೋರಾಮನು ಚೊಚ್ಚಲು ಮಗನಾದದ ರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.

ಲೂಕ 16:8

ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ.

Interlinear

Choose Theme