ಅವರು ಪ್ರತಿ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ಕರ್ತನಿಗೆ ದಹನಬಲಿಗಳನ್ನೂ ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುವದುಂಟು; ಪ್ರತಿ ಸಾಯಂಕಾಲ ದಲ್ಲಿ ಬಂಗಾರದ ದೀಪಸ್ಥಂಭವನ್ನೂ ಅದರ ದೀಪ ಗಳನ್ನೂ ಸಿದ್ಧಮಾಡಿ ಹಚ್ಚುತ್ತಾರೆ. ನಾವು ನಮ್ಮ ದೇವರಾದ ಕರ್ತನ ಕಟ್ಟಳೆಯನ್ನು ಕೈಕೊಳ್ಳುತ್ತೇವೆ; ಆದರೆ ನೀವು ಆತನನ್ನು ಬಿಟ್ಟಿದ್ದೀರಿ. ಇಗೋ, ದೇವರು ತಾನೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾನೆ.
Cross references
ಅಬ್ರಹಾಮನು ನನ್ನ ಮಾತಿಗೆ ವಿಧೇಯನಾಗಿ ನನ್ನ ನೇಮವಿಧಿ ಆಜ್ಞೆ ಕಟ್ಟಳೆಗಳನ್ನು ಕೈಕೊಂಡನು ಅಂದನು.
ಮೇಜಿನ ಮೇಲೆ ಸಮ್ಮುಖದ ರೊಟ್ಟಿಯನ್ನು ಯಾವಾಗಲೂ ನನ್ನ ಮುಂದೆ ಇಡಬೇಕು.
ಇದಲ್ಲದೆ ಬೆಳಕಿಗೋಸ್ಕರ ಯಾವಾಗಲೂ ದೀಪ ವನ್ನು ಉರಿಸುವಂತೆ ಶುದ್ಧವಾದ ಕುಟ್ಟಿದ ಹಿಪ್ಪೆಯ ಎಣ್ಣೆಯನ್ನು ನಿನಗೆ ತರುವ ಹಾಗೆ ಇಸ್ರಾಯೇಲ್ ಮಕ್ಕಳಿಗೆ ಅಪ್ಪಣೆಕೊಡಬೇಕು.ಸಭೆಯ ಗುಡಾರ ದಲ್ಲಿ ಮಂಜೂಷದ ಮುಂದೆ ಇರುವ ತೆರೆಯ ಹೊರಗೆ ಅರೋನನೂ ಅವನ ಮಕ್ಕಳೂ ಅದನ್ನು ಸಾಯಂಕಾಲ ದಿಂದ ಉದಯದ ವರೆಗೂ ಕರ್ತನ ಮುಂದೆ ದೀಪ ವನ್ನು ಸರಿಪಡಿಸುತ್ತಿರಬೇಕು. ಇದು ಇಸ್ರಾಯೇಲ್ ಮಕ್ಕಳ ಪರವಾಗಿ ಅವರ ಸಂತತಿಯವರಿಗೆ ಶಾಶ್ವತವಾದ ಕಟ್ಟಳೆಯಾಗಿರಬೇಕು.
ಇದಲ್ಲದೆ ಯಜ್ಞವೇದಿಯ ಮೇಲೆ ನೀನು ಅರ್ಪಿಸ ಬೇಕಾದದ್ದು ಇದೇ; ಒಂದು ವರುಷದ ಎರಡು ಕುರಿಮರಿಗಳನ್ನು ಪ್ರತಿದಿನ ಬಿಡದೆ ಅರ್ಪಿಸಬೇಕು.
ನೀನು ಧೂಪ ಸುಡುವ ವೇದಿಯನ್ನು ಮಾಡಬೇಕು; ಜಾಲೀ ಮರದಿಂದ ಅದನ್ನು ಮಾಡಬೇಕು.
ಯಾರಾದರೂ ಕರ್ತನಿಗೆ ಆಹಾರ ಸಮರ್ಪಣೆಯನ್ನು ಸಮರ್ಪಿಸುವದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರ ಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಯ ಬೇಕು; ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.
ಬೆಳಕಿ ಗೋಸ್ಕರ ದೀಪಗಳು ಯಾವಾಗಲೂ ಉರಿಯುತ್ತಿ ರುವಂತೆ ಅವರು ಕುಟ್ಟಿದ ಶುದ್ಧವಾದ ಹಿಪ್ಪೇ ಎಣ್ಣೆಯನ್ನು ನಿನ್ನ ಬಳಿಗೆ ತರುವಂತೆ ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕು.
ಪ್ರತಿಯೊಂದು ಸಬ್ಬತ್ತಿನಲ್ಲಿ ಕರ್ತನ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮ ಪಡಿಸಬೇಕು; ಇದು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು.
ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದು ಕೊಳ್ಳಬೇಕು; ಹೀಗೆ ಇಸ್ರಾಯೇಲ್ ಮಕ್ಕಳ ಸಭೆಯ ಮೇಲೆ ಕೋಪಬಾರದಿರುವದು; ಲೇವಿಯರು ಸಾಕ್ಷಿಯ ಗುಡಾರವನ್ನು ಕಾಯುವವರಾಗಿರಬೇಕು.ಇಸ್ರಾಯೇಲ್ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.
ಮೇಘವು ಗುಡಾರದ ಮೇಲೆ ಅನೇಕ ದಿವಸಗಳು ತಡಮಾಡಿದಾಗ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡದೆ ಕರ್ತನ ಅಪ್ಪಣೆಯನ್ನು ಕೈಕೊಳ್ಳುತ್ತಿದ್ದರು.
ಕೋರಹನೂ ಅವನ ಸಮೂಹವೆಲ್ಲವೂ ಧೂಪ ಸುಡುವ ಪಾತ್ರೆಗಳನ್ನು ತೆಗೆದುಕೊಂಡು
ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು.
ಇದ ಲ್ಲದೆ ಸೊಲೊಮೋನನು ತೂರಿನ ಅರಸನಾದ ಹೂರಾಮನಿಗೆ--ವಾಸವಾಗಿರುವ ಮನೆಯನ್ನು ತನಗೆ ಕಟ್ಟಿಸಲು ನೀನು ನನ್ನ ತಂದೆಯಾದ ದಾವೀದನಿಗೆ ದೇವದಾರು ಮರಗಳನ್ನು ಕಳುಹಿಸಿ ಅವನಿಗೋಸ್ಕರ ಹೇಗೆ ಮಾಡಿದಿಯೋ ಹಾಗೆಯೇ ನನಗೂ ಮಾಡು.
ಇಗೋ, ನನ್ನ ದೇವರಾದ ಕರ್ತನಿಗೆ ಅದನ್ನು ಪ್ರತಿಷ್ಠೆ ಮಾಡುವದಕ್ಕೂ ಆತನ ಮುಂದೆ ಪರಿಮಳ ಧೂಪವನ್ನು ಸುಡುವದಕ್ಕೂ ನಿತ್ಯ ಸಮ್ಮುಖದ ರೊಟ್ಟಿ ಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆಗಳ ಲ್ಲಿಯೂ ಇಸ್ರಾಯೇಲಿಗೆ ನಿರಂತರವಾಗಿರಲು ನೇಮಿ ಸಿದ ನಮ್ಮ ದೇವರಾದ ಕರ್ತನ ಹಬ್ಬಗಳಲ್ಲಿಯೂ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋ ಸ್ಕರವೂ ಆತನ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.
ಶುದ್ಧ ಬಂಗಾರವಾದ ದೈವೋಕ್ತಿಯ ಸ್ಥಾನದ ಮುಂದೆ ನ್ಯಾಯದ ಪ್ರಕಾರ ಹತ್ತಿರದ ದೀಪ ಸ್ತಂಭಗಳನ್ನೂ
ನೀವು ನನ್ನ ಪರಿಶುದ್ಧವಾದ ಜವಾಬ್ದಾರಿಯನ್ನು ಕೈಗೊಳ್ಳದೆ ಬೇರೆಯವರನ್ನು ಕಾಯುವದಕ್ಕೆ ನಿಮ್ಮ ಪರಿ ಶುದ್ದ ಸ್ಥಳದಲ್ಲಿ ಇರಿಸಿದ್ದೀರಿ.
ಆದರೆ ಇಸ್ರಾಯೇಲಿನ ಮಕ್ಕಳು ನನ್ನನ್ನು ಬಿಟ್ಟು ಹೋದಾಗ ನನ್ನ ಪರಿಶುದ್ಧ ಸ್ಥಳದ ಕಾಯಿದೆಯನ್ನು ಕೈಕೊಂಡ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವ ಹಾಗೆ ನನ್ನ ಸವಿಾಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ದೇವರಾದ ಕರ್ತನು ಹೇಳುತ್ತಾನೆ.
ಇದು ನನ್ನ ಆಜ್ಞೆಯಂತೆ ನಡಕೊಂಡ ಇಸ್ರಾಯೇಲಿನ ಮಕ್ಕಳು ತಪ್ಪಿಹೋದಾಗ, ಲೇವಿಯರೂ ತಪ್ಪಿಹೋದ ಪ್ರಕಾರ ತಪ್ಪಿಹೋಗದೆ ಇದ್ದಂತ ಚಾದೋ ಕನ ಕುಮಾರರಲ್ಲಿ ಪರಿಶುದ್ಧ ಮಾಡಲ್ಪಟ್ಟ ಯಾಜಕರ ದಾಗಿರಬೇಕು;
ಯಾಜಕೋದ್ಯೋಗದ ಪದ್ಧತಿಯ ಪ್ರಕಾರ ಅವನು ಕರ್ತನ ಆಲಯದಲ್ಲಿ ಪ್ರವೇಶಿಸಿ ಧೂಪವನ್ನು ಸುಡುವದು ಅವನ ಪಾಲಿಗೆ ಬಂತು.
ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.