Home Bibles 2 ದಿನವೃತ್ತಾಂತ 13:9 · ಕನ್ನಡ ಬೈಬಲ್
2 ದಿನವೃತ್ತಾಂತ 13:9 · ಕನ್ನಡ ಬೈಬಲ್

ನೀವು ಆರೋನನ ಮಕ್ಕಳಾದ ಕರ್ತನ ಯಾಜಕರನ್ನೂ ಲೇವಿ ಯರನ್ನೂ ತಳ್ಳಿ ಹಾಕಿ ದೇಶಗಳ ಜನರ ಹಾಗೆ ನಿಮಗೆ ಯಾಜಕರನ್ನು ಮಾಡಲಿಲ್ಲವೋ? ಯಾವನಾದರೂ ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತಕ್ಕೊಂಡು ಬಂದು ತನ್ನನ್ನು ಪ್ರತಿಷ್ಠೆಮಾಡಿದರೆ ಅವನು ದೇವರಲ್ಲದವುಗಳಿಗೆ ಯಾಜಕನಾಗಿರುವನು.

Cross references

ನಿರ್ಗಮಕಾಂಡ 29:1

ಅವರು ನನಗೆ ಯಾಜಕ ಸೇವೆಮಾಡು ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ

ನಿರ್ಗಮಕಾಂಡ 29:35

ಹೀಗೆ ಆರೋನನಿಗೂ ಅವನ ಕುಮಾರರಿಗೂ ನಾನು ನಿನಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರ ನಡಿಸಿ ಏಳು ದಿವಸ ಅವರನ್ನು ಪ್ರತಿಷ್ಠೆಮಾಡಬೇಕು.

ನಿರ್ಗಮಕಾಂಡ 32:29

ಮೋಶೆಯು--ಈ ದಿನ ಆತನು ನಿಮ್ಮ ಮೇಲೆ ತನ್ನ ಆಶೀರ್ವಾದವನ್ನು ಅನುಗ್ರಹಿಸುವಂತೆ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಮಗನಿಗೋಸ್ಕರವೂ ತನ್ನ ಸಹೋದರನಿಗೋಸ್ಕರವೂ ಈ ದಿನ ಕರ್ತನಿಗೆ ಪ್ರತಿಷ್ಠೆ ಮಾಡಿಕೊಳ್ಳಲಿ ಅಂದನು.

ಲೇವ್ಯಕಾಂಡ 8:2

ಆರೋನನನ್ನೂ ಅವನೊಂದಿಗೆ ಅವನ ಕುಮಾರರನ್ನೂ ಕರೆದು ಉಡುಪು ಗಳನ್ನೂ ಅಭಿಷೇಕ ತೈಲವನ್ನೂ ಪಾಪದ ಬಲಿಗಾಗಿ ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನೂ ತೆಗೆದುಕೊಂಡು.

ಲೇವ್ಯಕಾಂಡ 16:32

ಯಾವನು ತನ್ನ ತಂದೆಯ ಬದಲಾಗಿ ಯಾಜಕ ಉದ್ಯೋಗಕ್ಕೋಸ್ಕರ ಅಭಿಷೇಕಿಸಲ್ಪಟ್ಟವನಾಗಿ ಪ್ರತಿಷ್ಠಿಸ ಲ್ಪಟ್ಟಿದ್ದಾನೋ ಆ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು.

ದ್ವಿತೀಯೋಪದೇಶಕಾಂಡ 32:17

ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು.

1 ಅರಸುಗಳು 12:31

ಇದಲ್ಲದೆ ಅವನು ಉನ್ನತ ಸ್ಥಳಗಳ ಒಂದು ಮನೆಯನ್ನು ಕಟ್ಟಿಸಿ ಲೇವಿಯ ಮಕ್ಕಳಲ್ಲದ ಜನರಲ್ಲಿ ಕನಿಷ್ಠ ಜನರೊಳಗಿಂದ ಯಾಜಕರನ್ನು ನೇಮಿಸಿ ದನು.

1 ಅರಸುಗಳು 13:33

ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ ಉನ್ನತ ಸ್ಥಳಗಳಿಗೆ ಕನಿಷ್ಠ ಯಾಜಕರನ್ನಾಗಿ ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ ಉನ್ನತ ಸ್ಥಳಗಳ ಯಾಜಕರಲ್ಲಿ ಒಬ್ಬ ನಾಗುವನು.ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.

2 ಅರಸುಗಳು 19:18

ಅವು ದೇವರುಗಳಲ್ಲ, ಮನುಷ್ಯನ ಕೈಕೆಲಸವಾದ ಕಟ್ಟಿಗೆಯೂ ಕಲ್ಲೂ ಆಗಿದ್ದವು.

1 ದಿನವೃತ್ತಾಂತ 29:5

ಬಂಗಾರವನ್ನು ಬಂಗಾ ರದ ಕೆಲಸಕ್ಕೂ ಬೆಳ್ಳಿಯನ್ನು ಬೆಳ್ಳಿಯ ಕೆಲಸಕ್ಕೂ ಕೈ ಕೆಲಸದವರಿಂದ ಮಾಡುವ ಎಲ್ಲಾ ಕೆಲಸಕ್ಕೂ ಕೊಟ್ಟಿ ದ್ದೇನೆ. ಇದಲ್ಲದೆ ಇಂದು ತನ್ನ ಸೇವೆಯನ್ನು ಕರ್ತನಿಗೆ ಒಪ್ಪಿಸುವವನು ಯಾರು ಅಂದನು.

2 ದಿನವೃತ್ತಾಂತ 11:14

ಲೇವಿಯರು ಕರ್ತ ನಿಗೆ ಯಾಜಕ ಸೇವೆಮಾಡದ ಹಾಗೆ ಯಾರೊಬ್ಬಾ ಮನೂ ಅವನ ಮಕ್ಕಳೂ ಅವರನ್ನು ತೆಗೆದುಹಾಕಿ ಉನ್ನತ ಸ್ಥಳಗಳಿಗೋಸ್ಕರವೂ

ಯೆರೆಮಿಯ 2:11

ಜನಾಂ ಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದಾಗ್ಯೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.

ಯೆರೆಮಿಯ 5:7

ಬುಗ್ಗೆಯು ತನ್ನ ನೀರನ್ನು ಹರಿಯ ಮಾಡುವ ಹಾಗೆ ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ; ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳಬರುತ್ತವೆ. ದುಃಖವೂ ಗಾಯಗಳೂ ಯಾವಾ ಗಲೂ ನನ್ನ ಮುಂದೆ ಅವೆ.

ಹೊಶೇಯ 8:6

ಅದು ಇಸ್ರಾಯೇಲ್ಯರಿಂದಲೂ ಆಗಿದೆ; ಕೆಲಸಗಾರನು ಅದನ್ನು ಮಾಡಿದನು, ಆದ್ದರಿಂದ ಅದು ದೇವರಲ್ಲ; ಆದರೆ ಸಮಾರ್ಯದ ಕರುವು ಪುಡಿಪುಡಿಯಾಗಿ ಮುರಿಯಲ್ಪಡುವದು.

ಅಪೋಸ್ತಲರ ಕೃತ್ಯಗಳು 19:26

ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ

ಗಲಾತ್ಯದವರಿಗೆ 4:8

ಪೂರ್ವಕಾಲದಲ್ಲಿ ನೀವು ದೇವರನ್ನರಿಯದವರಾಗಿ ಸ್ವಾಭಾವಿಕವಾಗಿ ದೇವರಲ್ಲದವುಗಳನ್ನು ಸೇವಿಸಿದಿರಿ.

Interlinear

Choose Theme