Home Bibles 2 ದಿನವೃತ್ತಾಂತ 14:12 · ಕನ್ನಡ ಬೈಬಲ್
2 ದಿನವೃತ್ತಾಂತ 14:12 · ಕನ್ನಡ ಬೈಬಲ್

ಆಗ ಕರ್ತನು ಕೂಷಿಯರನ್ನು ಆಸನ ಮುಂದೆಯೂ ಯೆಹೂ ದದವರ ಮುಂದೆಯೂ ಹೊಡೆದನು. ಆದದರಿಂದ ಕೂಷಿಯರು ಓಡಿಹೋದರು.

Cross references

ಆದಿಕಾಂಡ 10:19

ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್‌ ಗೊಮೋರ ಅದ್ಮಾ ಚೆಬೋಯಿಮ್‌ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.

ನಿರ್ಗಮಕಾಂಡ 12:41

ನಾನೂರ ಮೂವತ್ತು ವರುಷ ಗಳು ತೀರಿದ ತರುವಾಯ ಅದೇ ದಿನದಲ್ಲಿ ಕರ್ತನ ಸೈನ್ಯಗಳೆಲ್ಲಾ ಐಗುಪ್ತದೇಶವನ್ನು ಬಿಟ್ಟು ಹೊರಗೆ ಹೋದವು.

ನಿರ್ಗಮಕಾಂಡ 12:51

ಅದೇ ದಿನದಲ್ಲಿ ಕರ್ತನು ಇಸ್ರಾಯೇಲ್‌ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೇಶದೊಳಗಿಂದ ಹೊರಗೆ ತಂದನು.

ನಿರ್ಗಮಕಾಂಡ 14:25

ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಕಷ್ಟದಿಂದ ಹೋಗು ವಂತೆ ಮಾಡಿದನು. ಆಗ--ಇಸ್ರಾಯೇಲಿನ ಎದುರಿ ನಿಂದ ಓಡಿಹೋಗೋಣ. ಯಾಕಂದರೆ ಕರ್ತನು ಐಗುಪ್ತ್ಯರಿಗೆ ವಿರೋಧವಾಗಿ ಅವರಿಗೋಸ್ಕರ ಯುದ್ಧ ಮಾಡುತ್ತಾನೆಂದು ಹೇಳಿಕೊಂಡರು.

ದ್ವಿತೀಯೋಪದೇಶಕಾಂಡ 28:7

ನಿನಗೆ ವಿರೋಧವಾಗಿ ಏಳುವ ನಿನ್ನ ಶತ್ರುಗಳನ್ನು ಕರ್ತನು ನಿನ್ನ ಮುಂದೆ ಹೊಡೆದು ಬಿಡುವನು; ಅವರು ಒಂದೇ ಮಾರ್ಗದಲ್ಲಿ ನಿನಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ನಿನ್ನ ಮುಂದೆ ಓಡಿಹೋಗುವರು.

ದ್ವಿತೀಯೋಪದೇಶಕಾಂಡ 32:39

ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.

ಯೆಹೋಶುವ 10:10

ಆಗ ಕರ್ತನು ಅವರನ್ನು ಇಸ್ರಾಯೇಲಿನ ಮುಂದೆ ಗಲಿಬಿಲಿಮಾಡಿ ಅವರನ್ನು ಗಿಬ್ಯೋನಿನಲ್ಲಿ ದೊಡ್ಡ ಸಂಹಾರದಿಂದ ಸಂಹರಿಸಿ ಬೇತ್‌ಹೋರೋನಿಗೆ ಹೋಗುವ ಮಾರ್ಗದಲ್ಲಿ ಹಿಂದಟ್ಟಿ ಅಜೇಕ ಮಕ್ಕೇದದ ವರೆಗೂ ಹೊಡೆದನು.

1 ದಿನವೃತ್ತಾಂತ 5:21

ಅವರು ಸುಲುಕೊಂಡ ಪಶುಗಳುಅವರ ಒಂಟೆಗಳು ಐವತ್ತು ಸಾವಿರ, ಕುರಿಗಳು ಎರಡು ವರೆ ಲಕ್ಷ, ಕತ್ತೆಗಳು ಎರಡು ಸಾವಿರ, ಮನುಷ್ಯರು ಒಂದುಲಕ್ಷ ಮಂದಿ.

2 ದಿನವೃತ್ತಾಂತ 13:15

ಇದಲ್ಲದೆ ಯೆಹೂದದ ಮನುಷ್ಯರು ಆರ್ಭಟಿಸಿದರು; ಯೆಹೂದದ ಮನುಷ್ಯರು ಆರ್ಭಟಿ ಸಿದಾಗ ಏನಾಯಿತಂದರೆ, ದೇವರು ಅಬೀಯನ ಮತ್ತು ಯೆಹೂದದವರ ಮುಂದೆ ಯಾರೊಬ್ಬಾಮ ನನ್ನೂ ಸಮಸ್ತ ಇಸ್ರಾಯೇಲನ್ನೂ ಹೊಡೆದನು.

2 ದಿನವೃತ್ತಾಂತ 15:11

ಅದೇ ಕಾಲದಲ್ಲಿ ತಾವು ತಂದ ಕೊಳ್ಳೆಯಿಂದ ಏಳುನೂರು ಎತ್ತುಗಳನ್ನೂ ಏಳು ಸಾವಿರ ಕುರಿಗಳನ್ನೂ ಕರ್ತನಿಗೆ ಬಲಿಅರ್ಪಿಸಿದರು.

2 ದಿನವೃತ್ತಾಂತ 20:22

ಅವರು ಹಾಡುವದಕ್ಕೂ ಸ್ತುತಿಸುವದಕ್ಕೂ ಆರಂಭಿಸಿದಾಗಲೇ ಕರ್ತನು ಯೆಹೂದದ ಮೇಲೆ ಬಂದ ಅಮ್ಮೋನ್‌, ಮೋವಾಬ್‌, ಸೇಯಾರ್‌ ಪರ್ವತಗಳ ಮಕ್ಕಳಿಗೆ ವಿರೋಧವಾಗಿ ಹೊಂಚಿಕೊಳ್ಳುವವರನ್ನು ಇಟ್ಟಿದ್ದ ರಿಂದ ಅವರು ಹೊಡೆಯಲ್ಪಟ್ಟಿದ್ದರು.

ಕೀರ್ತನೆಗಳು 60:12

ದೇವ ರಿಂದ ಪರಾಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.

ಕೀರ್ತನೆಗಳು 136:17

ದೊಡ್ಡ ಅರಸುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

1 ಕೊರಿಂಥದವರಿಗೆ 9:26

ಹೀಗಿರಲಾಗಿ ನಾನು ಸಹ ಗುರಿಗೊತ್ತಿಲ್ಲದವನಾಗಿ ಓಡದೆ ಗೆಲ್ಲಬೇಕೆಂದು ಅವರಂತೆಯೇ ಓಡುತ್ತೇನೆ; ನಾನು ಗಾಳಿಯನ್ನು ಗುದ್ದುವವನಾಗಿರದೆ ಗೆಲ್ಲಬೇಕೆಂದು ಹೋರಾಡುತ್ತೇನೆ.ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.

1 ಕೊರಿಂಥದವರಿಗೆ 15:57

ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.

Interlinear

Choose Theme