Home Bibles 2 ದಿನವೃತ್ತಾಂತ 14:13 · ಕನ್ನಡ ಬೈಬಲ್
2 ದಿನವೃತ್ತಾಂತ 14:13 · ಕನ್ನಡ ಬೈಬಲ್

ಆಗ ಆಸನೂ ಅವನ ಸಂಗಡ ಇದ್ದ ಜನರೂ ಅವರನ್ನು ಗೆರಾರಿನ ವರೆಗೂ ಹಿಂದಟ್ಟಿದರು. ಕೂಷಿಯರು ತಮಗೆ ತ್ರಾಣವಿಲ್ಲದ ಹಾಗೆ ಸೋತುಹೋದರು. ಅವರು ಕರ್ತನ ಮುಂದೆಯೂ ಆತನ ಸೈನ್ಯದ ಮುಂದೆಯೂ ನಾಶ ವಾದರು. ಯೆಹೂದದವರು ಬಹು ಕೊಳ್ಳೆಯನ್ನು ಒಯ್ದರು.

Cross references

ಆದಿಕಾಂಡ 10:1

ನೋಹನ ಕುಮಾರರಾದ ಶೇಮ್‌ ಹಾಮ್‌ ಯೆಫೆತರ ವಂಶಾವಳಿಗಳು ಇವೇ. ಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು.

ಆದಿಕಾಂಡ 10:19

ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್‌ ಗೊಮೋರ ಅದ್ಮಾ ಚೆಬೋಯಿಮ್‌ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.

ಆದಿಕಾಂಡ 20:1

ಅಬ್ರಹಾಮನು ಅಲ್ಲಿಂದ ದಕ್ಷಿಣ ದೇಶದ ಕಾದೇಶಿಗೆ ಪ್ರಯಾಣಮಾಡಿ, ಶೂರಿಗೆ ಮಧ್ಯದಲ್ಲಿ ವಾಸಿಸಿ ಗೆರಾರಿನಲ್ಲಿ ಪ್ರವಾಸಿಯಾಗಿದ್ದನು.

ಆದಿಕಾಂಡ 26:1

ಅಬ್ರಹಾಮನ ದಿನಗಳಲ್ಲಿ ಬಂದ ಮೊದಲನೆಯ ಬರವಲ್ಲದೆ ದೇಶದಲ್ಲಿ ಮತ್ತೊಂದು ಬರ ಬಂದಿತು. ಆಗ ಇಸಾಕನು ಗೆರಾರಿನಲ್ಲಿದ್ದ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಹೋದನು.

ಆದಿಕಾಂಡ 35:5

ತರುವಾಯ ಅವರು ಪ್ರಯಾಣ ವಾಗಿ ಹೊರಟರು. ಆಗ ದೇವರ ಭಯವು ಸುತ್ತಲಿರುವ ಪಟ್ಟಣಗಳವರ ಮೇಲೆ ಇದ್ದದರಿಂದ ಅವರು ಯಾಕೋ ಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.

ಯೆಹೋಶುವ 5:14

ಅದಕ್ಕೆ ಅವನು--ಅಲ್ಲ; ನಾನು ಈಗ ಕರ್ತನ ಸೈನ್ಯದ ಅಧಿಪತಿ ಯಾಗಿ ಬಂದಿದ್ದೇನೆ ಅಂದನು; ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ ಆತನಿಗೆನನ್ನ ಒಡೆಯನು ತನ್ನ ಸೇವಕನಿಗೆ ಏನು ಹೇಳುತ್ತಾನೆ ಅಂದನು.ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು.

1 ಸಮುವೇಲ 25:28

ನೀನು ದಯಮಾಡಿ ನಿನ್ನ ದಾಸಿಯದ್ರೋಹವನ್ನು ಮನ್ನಿಸಬೇಕು; ನನ್ನ ಒಡೆಯನು ಕರ್ತನ ಯುದ್ಧಗಳನ್ನು ನಡೆಸುತ್ತಾನೆ; ನಿನ್ನ ದಿನಗಳಲ್ಲಿ ನಿನ್ನ ಬಳಿಯಲ್ಲಿ ಕೆಟ್ಟತನವು ಕಂಡುಹಿಡಿ ಯಲ್ಪಟ್ಟದ್ದಿಲ್ಲ; ಆದದರಿಂದ ಕರ್ತನು ನನ್ನ ಒಡೆಯನಿಗೆ ಸ್ಥಿರವಾದ ಮನೆಯನ್ನು ಖಂಡಿತವಾಗಿ ಮಾಡುವನು.

1 ದಿನವೃತ್ತಾಂತ 12:22

ಅದೇ ಕಾಲದಲ್ಲಿ ಪ್ರತಿದಿನ ದೊಡ್ಡ ಸೈನ್ಯವು ದೇವರ ಸೈನ್ಯದ ಹಾಗೆ ಆಗುವ ವರೆಗೆ ದಾವೀದನಿಗೆ ಸಹಾಯ ಮಾಡುವದಕ್ಕೆ ಅವನ ಕಡೆಗೆ ಬರುತ್ತಿದ್ದರು.

2 ದಿನವೃತ್ತಾಂತ 14:14

ಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ಹೊಡೆದರು. ಕರ್ತನ ಭಯವು ಅವರ ಮೇಲೆ ಬಂತು. ಆ ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದದ್ದರಿಂದ ಇವುಗಳನ್ನೆಲ್ಲಾ ಕೊಳ್ಳೆಮಾಡಿದರು.ಪಶುಗಳಿದ್ದ ಡೇರೆಗಳನ್ನು ಹೊಡೆದು ಕುರಿಗಳನ್ನೂ ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂ ಸಲೇಮಿಗೆ ತಿರುಗಿದರು.

2 ದಿನವೃತ್ತಾಂತ 17:10

ಕರ್ತನ ಭಯವು ಯೆಹೂದದ ಸುತ್ತಲಿರುವ ದೇಶಗಳ ಸಮಸ್ತ ರಾಜ್ಯಗಳ ಮೇಲೆ ಇದ್ದದ್ದರಿಂದ ಅವರು ಯೆಹೋಷಾಫಾಟನ ಮೇಲೆ ಯುದ್ಧಮಾಡ ಲಿಲ್ಲ.

2 ದಿನವೃತ್ತಾಂತ 20:29

ಕರ್ತನು ಇಸ್ರಾಯೇಲಿನ ಶತ್ರುಗಳ ಮೇಲೆ ಯುದ್ಧಮಾಡಿದನೆಂದು ಅವರು ಕೇಳಿದಾಗ ದೇವರ ಭಯವು ಆ ದೇಶಗಳ ಸಕಲ ರಾಜ್ಯಗಳ ಮೇಲೆ ಬಿತ್ತು.

ಯೋಬ 6:9

ನಾನು ನಾಶವಾಗುವದು ದೇವರಿಗೆ ಮೆಚ್ಚಿಕೆಯಾಗುವದಾದರೆ ತನ್ನ ಕೈಚಾಚಿ ನನ್ನನ್ನು ಸಾಯಿಸಿದರೆ ಒಳ್ಳೆದು.

ಯೋಬ 9:4

ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?

ಕೀರ್ತನೆಗಳು 108:11

ದೇವರೇ, ನಮ್ಮನ್ನು ತೊರೆದು ಬಿಟ್ಟವನು ನೀನೇ ಅಲ್ಲವೋ? ನಮ್ಮ ಸೈನ್ಯಗಳ ಸಂಗಡ ಹೊರಟು ಹೋಗದೆ ಇದ್ದ ದೇವರು ನೀನಲ್ಲವೋ?

2 ತೆಸಲೋನಿಕದವರಿಗೆ 1:9

ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.

Interlinear

Choose Theme