ಕರ್ತನ ಭಯವು ಯೆಹೂದದ ಸುತ್ತಲಿರುವ ದೇಶಗಳ ಸಮಸ್ತ ರಾಜ್ಯಗಳ ಮೇಲೆ ಇದ್ದದ್ದರಿಂದ ಅವರು ಯೆಹೋಷಾಫಾಟನ ಮೇಲೆ ಯುದ್ಧಮಾಡ ಲಿಲ್ಲ.
Cross references
ತರುವಾಯ ಅವರು ಪ್ರಯಾಣ ವಾಗಿ ಹೊರಟರು. ಆಗ ದೇವರ ಭಯವು ಸುತ್ತಲಿರುವ ಪಟ್ಟಣಗಳವರ ಮೇಲೆ ಇದ್ದದರಿಂದ ಅವರು ಯಾಕೋ ಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.
ಜನರು ಇದನ್ನು ಕೇಳಿ ಭಯಪಡುವರು; ದುಃಖವು ಫಿಲಿಷ್ಟಿಯದಲ್ಲಿ ವಾಸಿಸುವವರನ್ನು ಹಿಡಿಯುವದು.
ನಾನು ಜನಾಂಗಗಳನ್ನು ನಿಮ್ಮ ಎದುರಿನಿಂದ ಹೊರ ಡಿಸಿಬಿಟ್ಟು ನಿಮ್ಮ ಮೇರೆಗಳನ್ನು ವಿಸ್ತಾರಮಾಡುವೆನು. ವರುಷಕ್ಕೆ ಮೂರು ಸಾರಿ ನೀವು ನಿಮ್ಮ ದೇವರಾದ ಕರ್ತನ ಸನ್ನಿಧಿಗೆ ಹೋಗುವ ಸಮಯದಲ್ಲಿ ಯಾರೂ ನಿಮ್ಮ ದೇಶವನ್ನು ಆಶಿಸರು.
ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.
ಆಗ ಆಸನೂ ಅವನ ಸಂಗಡ ಇದ್ದ ಜನರೂ ಅವರನ್ನು ಗೆರಾರಿನ ವರೆಗೂ ಹಿಂದಟ್ಟಿದರು. ಕೂಷಿಯರು ತಮಗೆ ತ್ರಾಣವಿಲ್ಲದ ಹಾಗೆ ಸೋತುಹೋದರು. ಅವರು ಕರ್ತನ ಮುಂದೆಯೂ ಆತನ ಸೈನ್ಯದ ಮುಂದೆಯೂ ನಾಶ ವಾದರು. ಯೆಹೂದದವರು ಬಹು ಕೊಳ್ಳೆಯನ್ನು ಒಯ್ದರು.
ಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ಹೊಡೆದರು. ಕರ್ತನ ಭಯವು ಅವರ ಮೇಲೆ ಬಂತು. ಆ ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದದ್ದರಿಂದ ಇವುಗಳನ್ನೆಲ್ಲಾ ಕೊಳ್ಳೆಮಾಡಿದರು.ಪಶುಗಳಿದ್ದ ಡೇರೆಗಳನ್ನು ಹೊಡೆದು ಕುರಿಗಳನ್ನೂ ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂ ಸಲೇಮಿಗೆ ತಿರುಗಿದರು.
ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.
ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.
ಅವರು ಸರ್ಪದಂತೆ ಧೂಳನ್ನು ನೆಕ್ಕುವರು; ಭೂಮಿಯ ಕ್ರಿಮಿಗಳಂತೆ ತಾವು ರಂಧ್ರಗಳಿಂದ ಹೊರಗೆ ಬರುವರು; ನಮ್ಮ ದೇವರಾದ ಕರ್ತನಿಗೆ ಅವರು ಹೆದರುವರು; ನಿನಗೆ ಭಯಪಡುವರು.