ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿ ಬಹಳ ಕೆಲಸಗಳನ್ನು ನಡಿಸುತ್ತಾ ಇದ್ದನು. ಪರಾಕ್ರಮಶಾಲಿಗಳಾದ ಯುದ್ಧದ ಮನುಷ್ಯರು ಯೆರೂ ಸಲೇಮಿನಲ್ಲಿದ್ದರು.
Cross references
ಇವರೆ ಲ್ಲರು ಯೆದೀಯಯೇಲನ ಕುಮಾರರು. ಅವರು ತಮ್ಮ ಪಿತೃಗಳಲ್ಲಿ ಯಜಮಾನರಾಗಿಯೂ ಯುದ್ಧದ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡ ತಕ್ಕವರು ಹದಿನೇಳು ಸಾವಿರದ ಇನ್ನೂರು ಮಂದಿ ಯಾಗಿದ್ದರು.
ಅರಸನ ಬೊಕ್ಕಸಗಳ ಮೇಲೆ ಅಡಿಯೇಲನ ಮಗನಾದ ಅಜ್ಮಾವೆತನು ಇದ್ದನು. ಹೊಲಗಳಲ್ಲಿಯೂ ಪಟ್ಟಣಗಳಲ್ಲಿಯೂ ಗ್ರಾಮಗಳಲ್ಲಿಯೂ ಗಡೀ ಸ್ಥಳ ಗಳಲ್ಲಿಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀ ಯನ ಮಗನಾದ ಯೋನಾತಾನನು ಇದ್ದನು.
ಅವನು ಯೆಹೂದದವರಿಗೆ--ದೇಶವು ನಮ್ಮ ಮುಂದೆ ಇರು ವಾಗ ಈ ಪಟ್ಟಣಗಳನ್ನು ಕಟ್ಟಿಸಿ ಅವುಗಳ ಸುತ್ತಲೂ ಗೋಡೆಗಳನ್ನೂ ಗೋಪುರಗಳನ್ನೂ ಬಾಗಲುಗಳನ್ನೂ ಅಗುಳಿಗಳನ್ನೂ ಮಾಡೋಣ; ಯಾಕಂದರೆ ನಾವು ನಮ್ಮ ದೇವರಾದ ಕರ್ತನನ್ನು ಹುಡುಕಿದೆವು; ನಾವು ಆತನನ್ನು ಹುಡುಕಿದ್ದರಿಂದ ಆತನು ಎಲ್ಲಾ ಕಡೆಯಲ್ಲಿ ನಮಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಅಂದನು.
ಅವನು ಅರಣ್ಯದಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿ ದನು; ತಗ್ಗಿನ ದೇಶದಲ್ಲಿಯೂ ಬೈಲು ದೇಶದಲ್ಲಿಯೂ ಅವನಿಗೆ ಬಹು ಕುರಿದನಗಳಿದ್ದವು. ಹಾಗೆಯೇ ಪರ್ವತ ಗಳಲ್ಲಿಯೂ ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿ ಗರೂ ದ್ರಾಕ್ಷೇ ವ್ಯವಸಾಯದವರೂ ಇದ್ದರು. ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.