ಯೆಹೋಷಾಫಾಟನು ಬಾಳೀಮ್ ನನ್ನು ಹುಡುಕದೆ ತನ್ನ ತಂದೆಯಾದ ದಾವೀದನ ಮೊದಲಿನ ಮಾರ್ಗಗಳಲ್ಲಿ ನಡೆದದ್ದರಿಂದ ಕರ್ತನು ಅವನ ಸಂಗಡ ಇದ್ದನು.
Cross references
ಕರ್ತನು ಯೋಸೇಫನ ಸಂಗಡ ಇದದ್ದರಿಂದ ಅವನು ಏಳಿಗೆಯಾಗಿ ಐಗುಪ್ತದವನಾದ ತನ್ನ ಯಜಮಾನನ ಮನೆಯಲ್ಲಿ ಇದ್ದನು.
ಆದರೆ ಕರ್ತನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯಿಟ್ಟು ಸೆರೆಮನೆಯ ಯಜಮಾನನು ಅವನ ಮೇಲೆ ದಯೆತೋರಿಸುವಂತೆ ಮಾಡಿದನು.
ಆಗ ಆತನು--ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು; ನಾನು ನಿನ್ನನ್ನು ಕಳುಹಿಸುತ್ತೇನೆಂಬದಕ್ಕೆ ಇದೇ ನಿನಗೆ ಗುರುತು. ನೀನು ಜನರನ್ನು ಐಗುಪ್ತದೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದಮೇಲೆ ದೇವರನ್ನು ಆರಾಧಿಸುವಿರಿ ಅಂದನು.
ಹಾಗಾದರೆ ಈಗ ಹೋಗು, ನಾನೇ ನಿನ್ನ ಬಾಯಿ ಯಾಗಿದ್ದು ನೀನು ಮಾತನಾಡತಕ್ಕದ್ದನ್ನು ನಿನಗೆ ಬೋಧಿಸುವೆನು ಅಂದನು.
ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ.
ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.
ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ಬಾಳನನ್ನು ಸೇವಿಸಿ
ಕರ್ತನು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿ ಆತನು ನ್ಯಾಯಾಧಿಪತಿಯ ಸಂಗಡ ಇದ್ದು ಆ ನ್ಯಾಯಾಧಿಪತಿಯ ದಿನಗಳೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ರಕ್ಷಿಸುತ್ತಿದ್ದನು. ಯಾಕಂದರೆ ಅವರು ತಮ್ಮನ್ನು ಬಾಧಿಸಿ ಶ್ರಮೆಪಡಿಸುವವರ ನಿಮಿತ್ತ ಗೋಳಾಡುವದರಿಂದ ಕರ್ತನು ಪಶ್ಚಾತ್ತಾಪಪಟ್ಟನು.
ಆಗ ಕರ್ತನ ದೂತನು ಅವ ನಿಗೆ ಪ್ರತ್ಯಕ್ಷನಾಗಿ ಅವನಿಗೆ--ಬಲಿಷ್ಠನಾದ ಪರಾಕ್ರಮ ಶಾಲಿಯೇ, ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.
ಗಿದ್ಯೋನನು ಸತ್ತತರುವಾಯ ಆದದ್ದೇನಂದರೆ, ಇಸ್ರಾಯೇಲ್ ಮಕ್ಕಳು ತಿರುಗಿಕೊಂಡು ಬಾಳನ ಹಿಂದೆ ಜಾರರಾಗಿ ಹೋಗಿ ಬಾಳ್‌ಬೆರೀತನನ್ನು ತಮಗೆ ದೇವರಾಗಿ ಮಾಡಿಕೊಂಡರು.
ಸೌಲನು ದಾವೀದನನ್ನು ಎಲ್ಲಿಗೆ ಕಳುಹಿಸಿದರೂ ಅಲ್ಲಿಗೆ ಹೋಗಿ ಅವನು ಬುದ್ಧಿ ಯಿಂದ ಕಾರ್ಯವನ್ನು ನಡಿಸುತ್ತಿದ್ದನು. ಆದದರಿಂದ ಸೌಲನು ಅವನನ್ನು ಯುದ್ಧಸ್ಥರ ಮೇಲೆ ಅಧಿಕಾರಿಯಾಗ ಮಾಡಿದನು. ಅವನು ಸಮಸ್ತ ಜನರ ದೃಷ್ಟಿಯಲ್ಲಿಯೂ ಸೌಲನ ಎಲ್ಲಾ ಸೇವಕರ ದೃಷ್ಟಿಯಲ್ಲಿಯೂ ಒಪ್ಪಿಗೆಯಾಗಿದ್ದನು.
ಸೌಲನು ದಾವೀದನಿಗೆ ಭಯಪಟ್ಟನು; ಕರ್ತನು ಅವನ ಸಂಗಡ ಇದ್ದನು. ಕರ್ತನು ಸೌಲನ ಕಡೆಯಿಂದ ಹೊರಟು ಹೋಗಿದ್ದನು;
ದಾವೀದನು ತನ್ನ ಸಕಲ ಮಾರ್ಗಗಳಲ್ಲಿ ಬುದ್ಧಿಯುಳ್ಳವನಾಗಿ ವರ್ತಿಸಿದನು.
ಹೀಗೆ ಯೇ ದಾವೀದನು ದಿನದಿನಕ್ಕೆ ದೊಡ್ಡವನಾಗುತ್ತಾ ಇದ್ದನು; ಸೈನ್ಯಗಳ ದೇವರಾದ ಕರ್ತನು ಅವನ ಸಂಗಡ ಇದ್ದನು.
ಹೀಗೆಯೇ ದಾವೀದನು ಎಲ್ಲಾ ಇಸ್ರಾಯೇಲಿನ ಮೇಲೆ ಆಳಿ ತನ್ನ ಎಲ್ಲಾ ಜನರಿಗೂ ನೀತಿ ನ್ಯಾಯಗಳನ್ನು ನಡಿಸುತ್ತಾ ಬಂದನು.
ಸೊಲೊ ಮೋನನು ಕರ್ತನನ್ನು ಪ್ರೀತಿಮಾಡಿ ತನ್ನ ತಂದೆ ಯಾದ ದಾವೀದನ ಕಟ್ಟಳೆಗಳಲ್ಲಿ ನಡೆಯುತ್ತಾ ಇದ್ದರೂ ತಾನು ಎತ್ತರ ಸ್ಥಳಗಳಲ್ಲಿ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದನು.
ಹೀಗೆಯೇ ಸೊಲೊಮೋನನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸದೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.
ಆದರೆ ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ ತನ್ನ ಹೃದಯವು ತನ್ನ ದೇವರಾದ ಕರ್ತನ ಮುಂದೆ ಪೂರ್ಣವಾಗಿರದೆ ತನಗೆ ಮುಂಚಿದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು.
ಅವನು ಕರ್ತನ ದೃಷ್ಟಿಗೆ ಒಳ್ಳೇದನ್ನು ಮಾಡಿ ದನು; ಆದರೆ ತನ್ನ ಪಿತೃವಾದ ದಾವೀದನ ಹಾಗಲ್ಲ; ತನ್ನ ತಂದೆಯಾದ ಯೆಹೋವಾಷನು ಮಾಡಿದ ಹಾಗೆ ಎಲ್ಲವನ್ನು ಮಾಡಿದನು.
ಆಹಾಜನು ಆಳಲು ಆರಂಭಿ ಸಿದಾಗ ಇಪ್ಪತ್ತು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹದಿನಾರು ವರುಷ ಆಳಿದನು.
ಅವನು ತನ್ನ ತಂದೆಯಾದ ದಾವೀದನು ಮಾಡಿದ ಹಾಗೆ ಕರ್ತನ ದೃಷ್ಟಿಗೆ ಒಳ್ಳೆಯದನ್ನು ಮಾಡಿದನು.
ಅವನು ಕರ್ತನ ದೃಷ್ಟಿಗೆ ಒಳ್ಳೆಯದ್ದನ್ನು ಮಾಡಿ ತನ್ನ ತಂದೆಯಾದ ದಾವೀದನ ಎಲ್ಲಾ ಮಾರ್ಗಗಳಲ್ಲಿ ಬಲ, ಎಡ ಪಾರ್ಶ್ವವಾಗಿ ತಿರುಗದೆ ನಡೆದನು.
ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಇಲ್ಲವೋ? ಎಲ್ಲಾ ಕಡೆಯಲ್ಲಿ ನಿಮಗೆ ವಿಶ್ರಾಂತಿ ಕೊಟ್ಟಿದ್ದಾನ ಲ್ಲವೋ? ನಿಶ್ಚಯವಾಗಿ ಆತನು ದೇಶನಿವಾಸಿಗಳನ್ನು ನನ್ನ ಕೈಯಲ್ಲಿ ಒಪ್ಪಿಸಿದ್ದರಿಂದ ದೇಶವು ಕರ್ತನ ಮುಂದೆಯೂ ತನ್ನ ಜನರ ಮುಂದೆಯೂ ಸ್ವಾಧೀನ ವಾಯಿತು.ನಿಮ್ಮ ದೇವರಾದ ಕರ್ತನನ್ನು ಹುಡು ಕಲು ನಿಮ್ಮ ಹೃದಯವನ್ನೂ ಪ್ರಾಣವನ್ನೂ ಒಪ್ಪಿಸಿ ಕರ್ತನ ಒಡಂಬಡಿಕೆಯ ಮಂಜೂಷದ ದೇವರ ಪರಿ ಶುದ್ಧ ಪಾತ್ರೆಗಳನ್ನು ಕರ್ತನ ನಾಮಕ್ಕೆ ಕಟ್ಟಿಸಲ್ಪಡುವ ಮನೆಯೊಳಗೆ ತರುವ ಹಾಗೆ ಎದ್ದು ಕರ್ತನಾದ ದೇವ ರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ ಅಂದನು.
ಆಸನು ತನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡಿದನು.
ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.
ಆಸನೇ, ಯೆಹೂದ ಬೆನ್ಯಾವಿಾನನ ಸಮಸ್ತರೇ, ನನ್ನ ಮಾತನ್ನು ಕೇಳಿರಿ. ನೀವು ಕರ್ತನ ಸಂಗಡ ಇರುವ ವರೆಗೂ ಆತನು ನಿಮ್ಮ ಸಂಗಡ ಇರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು;
ಆಸನು ಈ ಮಾತುಗಳನ್ನೂ ಪ್ರವಾದಿಯಾದ ಓದೇದನ ಪ್ರವಾದನೆಯನ್ನೂ ಕೇಳಿದಾಗ ಅವನು ಬಲಗೊಂಡು ಯೆಹೂದ ಬೆನ್ಯಾವಿಾನನ ಸಮಸ್ತ ದೇಶದೊಳಗಿಂದಲೂ ಎಫ್ರಾಯಾಮಿನ ಬೆಟ್ಟದಲ್ಲಿ ತಾನು ಹಿಡಿದ ಪಟ್ಟಣಗಳೊಳಗಿಂದಲೂ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ ಕರ್ತನ ದ್ವಾರಾಂಗಳದ ಮುಂದೆ ಇದ್ದ ಕರ್ತನ ಬಲಿಪೀಠವನ್ನು ನೂತನ ಪಡಿಸಿದನು.
ಅವನು ತನ್ನ ತಂದೆಯಾದ ಆಸನ ಮಾರ್ಗ ದಲ್ಲಿ ನಡೆದು ಅದನ್ನು ಬಿಟ್ಟುಬಿಡದೆ ಕರ್ತನ ಸಮ್ಮುಖ ದಲ್ಲಿ ಸರಿಯಾದದ್ದನ್ನು ಮಾಡಿದನು.
ಆದಕಾರಣ ಪ್ರವಾದಿಯಾದ ಎಲೀಯನಿಂದ ಅವನಿಗೆ ಒಂದು ಬರಹವು ಬಂತು. ಏನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗ ಗಳಲ್ಲಿಯೂ ಯೆಹೂದದ ಅರಸನಾದ ಆಸನ ಮಾರ್ಗ ಗಳಲ್ಲಿಯೂ ನಡೆಯದೆ
ಇದಲ್ಲದೆ ಅವನು ಅಹಜ್ಯನನ್ನು ಹುಡುಕಿದನು; ಅವನು ಸಮಾರ್ಯದಲ್ಲಿ ಬಚ್ಚಿಟ್ಟು ಕೊಂಡದ್ದರಿಂದ ಅವನನ್ನು ಹಿಡಿದು ಯೇಹು ವಿನ ಬಳಿಗೆ ಅವನನ್ನು ತಕ್ಕೊಂಡು ಬಂದು ಅವನನ್ನು ಕೊಂದುಹಾಕಿ ಹೂಣಿಟ್ಟರು; ಯಾಕಂದರೆ ಇವನು ತನ್ನ ಪೂರ್ಣಹೃದಯದಿಂದ ಕರ್ತನನ್ನು ಹುಡುಕಿದ ಯೆಹೋಷಾಫಾಟನ ಮಗನು ಅಂದರು. ಹೀಗೆ ರಾಜ್ಯ ವನ್ನು ಸ್ಥಿರಪಡಿಸಲು ಅಹಜ್ಯನ ಮನೆಗೆ ಶಕ್ತಿ ಇಲ್ಲದೆ ಹೋಯಿತು.
ಹೀಗೆಯೇ ಯೋತಾಮನು ತನ್ನ ದೇವ ರಾದ ಕರ್ತನ ಮುಂದೆ ತನ್ನ ಮಾರ್ಗಗಳನ್ನು ಸರಿಪಡಿಸಿ ದ್ದರಿಂದ ಇವನು ಬಲಗೊಂಡನು.
ಅವನು ತನ್ನ ಪಿತೃವಾದ ದಾವೀದನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು.
ಅವನು ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು; ಎಡಗಡೆಗಾದರೂ ಬಲಗಡೆಗಾದರೂ ತೊಲಗದೆ ತನ್ನ ಪಿತೃವಾದ ದಾವೀದನ ಮಾರ್ಗ ಗಳಲ್ಲಿ ನಡೆದನು.
ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ಕರ್ತನೇ, ದಾವೀದನನ್ನೂ ಅವನ ಎಲ್ಲಾ ಶ್ರಮೆಗಳನ್ನೂ ಜ್ಞಾಪಕ ಮಾಡಿಕೋ.
ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ ಎಂದು ನೀನು ಹೇಳುವದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು; ನೀನು ಮಾಡಿದ್ದನ್ನು ತಿಳುಕೋ; ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ;
ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.