ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯ ವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟುಸಾರಿ ನಿನಗೆ ಆಣೆ ಇಡಬೇಕು ಅಂದನು.
Cross references
ಆದರೆ ಇಸ್ರಾಯೇಲ್ಯರು ಆ ದಿವಸದಲ್ಲಿ ಬಹಳ ಬಳಲಿಹೋದರು. ಯಾಕಂದರೆ ಸೌಲನು--ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾ ಲದ ವರೆಗೆ ಯಾವನು ಆಹಾರ ತಿನ್ನುತ್ತಾನೋ ಅವನು ಶಪಿಸಲ್ಪಡಲಿ ಎಂದು ಆಣೆ ಇಟ್ಟದ್ದರಿಂದ ಜನರೆಲ್ಲರೂ ಆಹಾರದ ರುಚಿ ನೋಡದೆ ಇದ್ದರು.
ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು ಅಂದನು.
ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು.
ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.
ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ--ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು.