Home Bibles 2 ದಿನವೃತ್ತಾಂತ 18:26 · ಕನ್ನಡ ಬೈಬಲ್
2 ದಿನವೃತ್ತಾಂತ 18:26 · ಕನ್ನಡ ಬೈಬಲ್

ಅರಸನು ಹೇಳು ವದೇನಂದರೆ--ನೀವು ಇವನನ್ನು ಸೆರೆಮನೆಯಲ್ಲಿಟ್ಟು ನಾನು ಸಮಾಧಾನವಾಗಿ ಬರುವ ಮಟ್ಟಿಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ತಿನ್ನಲು ಕೊಡಿರಿ ಅಂದನು.

Cross references

ದ್ವಿತೀಯೋಪದೇಶಕಾಂಡ 29:19

ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ

1 ಸಮುವೇಲ 25:21

ಆದರೆ ದಾವೀದನು--ಅಡವಿ ಯಲ್ಲಿದ್ದ ಇವನ ಎಲ್ಲಾದರಲ್ಲಿ ಒಂದಾದರೂ ಕಳಕೊಳ್ಳದ ಹಾಗೆ ನಾನು ಕಾಪಾಡಿದ್ದು ವ್ಯರ್ಥವಾಯಿತು. ಆದರೆ ನಾನು ಮಾಡಿದ ಉಪಕಾರಕ್ಕೆ ಬದಲಾಗಿ ಈಗ ಅವನು ನನಗೆ ಅಪಕಾರ ಮಾಡಿದ್ದಾನೆ.

1 ಅರಸುಗಳು 22:26

ಆಗ ಇಸ್ರಾಯೇಲಿನ ಅರಸನು ಹೇಳಿದ್ದೇ ನಂದರೆ -- ವಿಾಕಾಯೆಹುನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗ ನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ತಕ್ಕೊಂಡುಹೋಗಿ

2 ದಿನವೃತ್ತಾಂತ 16:10

ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.

2 ದಿನವೃತ್ತಾಂತ 18:15

ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯ ವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟುಸಾರಿ ನಿನಗೆ ಆಣೆ ಇಡಬೇಕು ಅಂದನು.

ಕೀರ್ತನೆಗಳು 10:5

ಅವನ ಮಾರ್ಗಗಳು ಯಾವಾಗಲೂ ವ್ಯಸನಕರವಾಗಿವೆ; ನಿನ್ನ ನ್ಯಾಯತೀರ್ಪುಗಳು ಅವನ ದೃಷ್ಟಿಗೆ ನಿಲುಕದಷ್ಟು ಉನ್ನತವಾಗಿವೆ; ತನ್ನ ವೈರಿಗಳೆ ಲ್ಲರ ಮುಂದೆ ಉಬ್ಬಿಕೊಳ್ಳುತ್ತಾನೆ.

ಕೀರ್ತನೆಗಳು 80:5

ಕಣ್ಣೀರಿನ ರೊಟ್ಟಿಯನ್ನು ಅವರಿಗೆ ತಿನ್ನಿಸಿ, ದೊಡ್ಡ ಅಳತೆಯಿಂದ ಕಣ್ಣೀರನ್ನು ಕುಡಿಯಲು ಕೊಡುತ್ತೀ.

ಕೀರ್ತನೆಗಳು 102:9

ನಿನ್ನ ರೋಷದ ಮತ್ತು ನಿನ್ನ ರೌದ್ರದ ನಿಮಿತ್ತವೇ ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ; ನನ್ನ ಪಾನವನ್ನು ಕಣ್ಣೀರಿನಿಂದ ಬೆರೆಸಿ ದ್ದೇನೆ.

ಸಾಮೇತಿಗಳು 14:16

ಜ್ಞಾನಿ ಯು ಭಯಪಟ್ಟು ಕೆಟ್ಟತನದಿಂದ ಹೊರಟುಹೋಗು ವನು; ಬುದ್ಧಿಹೀನನು ಕೋಪಿಸಿಕೊಂಡು ಧೈರ್ಯದಿಂದ ಇರುತ್ತಾನೆ.

ಯೆಶಾಯ 30:20

ಕರ್ತನು ನಿಮಗೆ ಕಷ್ಟವನ್ನು, ಶ್ರಮೆಯನ್ನು, ಅನ್ನಪಾನಗಳನ್ನಾಗಿ ಕೊಟ್ಟರೂ ಇನ್ನೂ ನಿಮ್ಮ ಬೋಧಕರು ತಮ್ಮನ್ನು ಮರೆಮಾಡಿಕೊಳ್ಳುವದಿಲ್ಲ. ಆದರೆ ನಿಮ್ಮ ಕಣ್ಣುಗಳು ನಿಮ್ಮ ಬೋಧಕನನ್ನು ನೋಡು ತ್ತಿರುವವು.

ಯೆರೆಮಿಯ 20:2

ಅವನ ಬಳಿಗೆ ಕಳುಹಿಸಿ--ನಮಗೋಸ್ಕರ ಕರ್ತನನ್ನು ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ; ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟುಹೋಗುವ ಹಾಗೆ ಕರ್ತನು ತನ್ನ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುತ್ತಾನೆಂದು ಹೇಳಿಸಿದಾಗ ಯೆರೆವಿಾಯನಿಗೆ ಕರ್ತನ ವಾಕ್ಯವು ಬಂತು.

ಮತ್ತಾಯ 5:12

ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.

ಮತ್ತಾಯ 12:24

ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.

ಲೂಕ 3:19

ಆದರೆ ಚತುರಾಧಿಪತಿಯಾದ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡ ತಿಯಾದ ಹೆರೋದ್ಯಳಿಗಾಗಿಯೂ ಹೆರೋದನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳಿಗಾಗಿಯೂ ಯೋಹಾ ನನು ಅವನನ್ನು ಗದರಿಸಿದ್ದರಿಂದ

ಲೂಕ 23:2

ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.

ಅಪೋಸ್ತಲರ ಕೃತ್ಯಗಳು 5:18

ಅಪೊಸ್ತಲ ರನ್ನು ಹಿಡಿದು ಅವರನ್ನು ಸಾಮಾನ್ಯ ಸೆರೆಯಲ್ಲಿಟ್ಟರು.

ಅಪೋಸ್ತಲರ ಕೃತ್ಯಗಳು 22:22

ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು.

2 ಕೊರಿಂಥದವರಿಗೆ 11:23

ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.

1 ತೆಸಲೋನಿಕದವರಿಗೆ 5:2

ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.

ಪ್ರಕಟನೆ 11:10

ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.

Interlinear

Choose Theme