ಅದಕ್ಕೆ ವಿಾಕಾಯೆಹುವುನೀನು ಸಮಾಧಾನದಿಂದ ಬಂದೇ ಬರುವದಾದರೆ ಕರ್ತನು ನನ್ನ ಮುಖಾಂತರ ಮಾತನಾಡಲಿಲ್ಲ ಎಂದು ಹೇಳಿ--ಜನರೇ, ನೀವೆಲ್ಲರು ಕೇಳಿರಿ ಅಂದನು.
Cross references
ಇವರು ಎಲ್ಲಾ ಮನುಷ್ಯರ ಹಾಗೆ ಸತ್ತರೆ ಇಲ್ಲವೆ ಎಲ್ಲಾ ಮನುಷ್ಯರ ಹಾಗೆ ಶಿಕ್ಷೆ ಇವರಿಗೆ ಪ್ರಾಪ್ತವಾದರೆ ಕರ್ತನು ನನ್ನನ್ನು ಕಳುಹಿಸಲಿಲ್ಲ.
ಕೇಡು ನಮ್ಮನ್ನು ಹಿಂದಟ್ಟದು, ನಮ್ಮನ್ನು ತಡೆಯುವದಿಲ್ಲ ಎನ್ನುವ ನನ್ನ ಜನರಲ್ಲಿರುವ ಪಾಪಿಷ್ಠರು ಕತ್ತಿಯಿಂದ ಸಾಯುವರು.
ಎಲ್ಲಾ ಜನಗಳೇ, ಕೇಳಿರಿ, ಭೂಮಿಯೇ, ಅದರ ಪರಿಪೂರ್ಣತೆಯೇ, ಕಿವಿಗೊಡಿರಿ; ಕರ್ತನಾದ ದೇವರು ತನ್ನ ಪರಿಶುದ್ಧ ಮಂದಿರದೊಳಗಿಂದ ಕರ್ತನು ನಿಮಗೆ ವಿರೋಧವಾಗಿ ಸಾಕ್ಷಿಯಾಗಿರಲಿ.
ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
ಆತನುಜನ ಸಮೂಹಗಳನ್ನು ಕರೆದು ಅವರಿಗೆ--ಕೇಳಿ ತಿಳುಕೊಳ್ಳಿರಿ;
ಆಮೇಲೆ ಆತನು ಜನರನ್ನೆಲ್ಲಾ ತನ್ನ ಬಳಿಗೆ ಕರೆದು ಅವರಿಗೆ--ನಿಮ್ಮಲ್ಲಿ ಪ್ರತಿಯೊಬ್ಬನು ನಾನು ಹೇಳುವದನ್ನು ಕೇಳಿ ಗ್ರಹಿಸಿರಿ;
ಅಮೇಲೆ ಜನರೆಲ್ಲರೂ ಕೇಳುತ್ತಿದ್ದಾಗ ಆತನು ತನ್ನ ಶಿಷ್ಯರಿಗೆ--
ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನ ದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕು ಮಾಡುವದನ್ನು ಬಿಡುವದಿಲ್ಲವೋ?