ಆಗ ಇಸ್ರಾಯೇಲಿನ ಅರ ಸನು ಯೆಹೋಷಾಫಾಟನಿಗೆ--ನಾನು ನನ್ನನ್ನು ಮರೆ ಮಾಜಿ ಯುದ್ಧದಲ್ಲಿ ಪ್ರವೇಶಿಸುವೆನು; ಆದರೆ ನೀನು ನಿನ್ನ ವಸ್ತ್ರಗಳನ್ನು ಧರಿಸಿಕೊಂಡಿರು ಅಂದನು. ಹಾಗೆಯೇ ಇಸ್ರಾಯೇಲಿನ ಅರಸನು ತನ್ನನ್ನು ಮರೆಮಾಜಿದನು; ಅವರು ಯುದ್ಧಕ್ಕೆ ಹೋದರು.
Cross references
ಆಗ ಸೌಲನು ತನ್ನನ್ನು ಮರೆಮಾಡಿಕೊಳ್ಳುವಂತೆ ಬದಲು ವಸ್ತ್ರಗಳನ್ನು ಧರಿಸಿ ತನ್ನ ಸಂಗಡ ಇಬ್ಬರು ಮನುಷ್ಯರನ್ನು ಕರಕೊಂಡು ರಾತ್ರಿಯಲ್ಲಿ ಆ ಸ್ತ್ರೀಯ ಬಳಿಗೆ ಬಂದು ಅವಳಿಗೆ--ನೀನು ದಯಮಾಡಿ ನಿನ್ನ ಯಕ್ಷಿಣಿ ವಿದ್ಯೆ ಯಿಂದ ಕಣಿಹೇಳು; ನಾನು ನಿನಗೆ ಹೇಳುವವನನ್ನು ನನಗೆ ಏರಿಬರುವಂತೆ ಮಾಡು ಅಂದನು.
ಯಾರೊಬ್ಬಾಮನ ಪತ್ನಿ ಎಂದು ಯಾರೂ ತಿಳಿಯದ ಹಾಗೆ ವೇಷಹಾಕಿಕೊಂಡು ಶೀಲೋವಿಗೆ ಹೋಗು; ಇಗೋ--ಈ ಜನರ ಮೇಲೆ ನೀನು ಅರಸನಾಗಿರುವಿ ಎಂದು ನನಗೆ ಹೇಳಿದ ಪ್ರವಾದಿಯಾದ ಅಹೀಯನು ಅಲ್ಲಿದ್ದಾನೆ.
ಆಗ ಪ್ರವಾದಿಯು ಹೋಗಿ ತನ್ನ ಮುಖದ ಮೇಲೆ ಬೂದಿ ಯನ್ನು ಹಚ್ಚಿಕೊಂಡು ಮುಖ ಮರೆಮಾಡಿ ಅರಸನಿ ಗೋಸ್ಕರ ಮಾರ್ಗದಲ್ಲಿ ಕಾದುಕೊಂಡಿದ್ದನು.
ಆದಾಗ್ಯೂ ಯೋಷೀ ಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ ಅವನ ಸಂಗಡ ಯುದ್ಧಮಾಡಲು ತನ್ನನ್ನು ಮರೆ ಮಾಜಿದನು. ಅವನು ದೇವರ ಬಾಯಿಂದ ಬಂದ ನೆಕೋನನ ಮಾತುಗಳನ್ನು ಕೇಳದೆ ಮೆಗಿದ್ದೋನು ತಗ್ಗಿನಲ್ಲಿ ಯುದ್ಧಮಾಡ ಬಂದನು.
ವ್ಯಭಿಚಾರಿಯ ಕಣ್ಣು ಮುಂಗತ್ತಲೆಗೆ ಕಾದುಕೊಂಡು -- ಯಾವ ಕಣ್ಣೂ ನನ್ನನ್ನು ನೋಡುವದಿಲ್ಲವೆಂದು ಹೇಳುತ್ತದೆ; ಮುಖ ವನ್ನು ಮುಚ್ಚಿಕೊಳ್ಳುತ್ತಾನೆ.
ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ.
ಸವಿ ಮಾತನ್ನಾಡಿದರೆ ಅವನನ್ನು ನಂಬಬೇಡ; ಅವನ ಹೃದಯದಲ್ಲಿ ಏಳು ಅಸಹ್ಯಗಳಿವೆ.