Home Bibles 2 ದಿನವೃತ್ತಾಂತ 20:15 · ಕನ್ನಡ ಬೈಬಲ್
2 ದಿನವೃತ್ತಾಂತ 20:15 · ಕನ್ನಡ ಬೈಬಲ್

ಆಗ ಅವನುಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿ ಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಕರ್ತನು ನಿಮಗೆ ಹೀಗೆ ಹೇಳುತ್ತಾನೆ--ಈ ಮಹಾಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರ ಬೇಡಿರಿ. ಯಾಕಂದರೆ ಯುದ್ಧವು ನಿಮ್ಮದಲ್ಲ, ದೇವ ರದೇ.

Cross references

ನಿರ್ಗಮಕಾಂಡ 14:13

ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.

ನಿರ್ಗಮಕಾಂಡ 14:14

ಕರ್ತನು ನಿಮ ಗೋಸ್ಕರ ಯುದ್ಧಮಾಡುವನು; ಆದರೆ ನೀವು ಸಮಾಧಾನವಾಗಿರ್ರಿ ಅಂದನು.

ದ್ವಿತೀಯೋಪದೇಶಕಾಂಡ 1:29

ಆಗ ನಾನು ನಿಮಗೆ--ಅಂಜಬೇಡಿರಿ; ಅವರಿಗೆ ಭಯಪಡಬೇಡಿರಿ.

ದ್ವಿತೀಯೋಪದೇಶಕಾಂಡ 20:1

ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಕುದುರೆಗಳನ್ನೂ ರಥ ಗಳನ್ನೂ ನಿನಗಿಂತ ಹೆಚ್ಚಾದ ಜನರನ್ನೂ ನೋಡಿದರೆ ಅವರಿಗೆ ಭಯಪಡಬೇಡ; ಐಗುಪ್ತದೇಶದೊಳಗಿಂದ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ.

ದ್ವಿತೀಯೋಪದೇಶಕಾಂಡ 20:4

ಯಾಕಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ ನಿಮ್ಮನ್ನು ರಕ್ಷಿಸುವದಕ್ಕೆ ನಿಮ್ಮ ದೇವರಾದ ಕರ್ತನೇ ನಿಮ್ಮ ಸಂಗಡ ಹೋಗುತ್ತಾನೆ ಎಂದು ಹೇಳಬೇಕು.

ದ್ವಿತೀಯೋಪದೇಶಕಾಂಡ 31:6

ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು.

ದ್ವಿತೀಯೋಪದೇಶಕಾಂಡ 31:8

ಇದಲ್ಲದೆ ಕರ್ತನು ತಾನೇ ನಿನ್ನ ಮುಂದೆ ಹೋಗುತ್ತಾನೆ; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ತೊರೆಯುವದಿಲ್ಲ, ವಿಸರ್ಜಿಸುವದಿಲ್ಲ; ನೀನು ಭಯಪಡಬೇಡ; ಅಂಜಿಕೊಳ್ಳಬೇಡ ಎಂದು ಹೇಳಿದನು.

ಯೆಹೋಶುವ 11:6

ಆಗ ಕರ್ತನು ಯೆಹೋಶುವನಿಗೆಅವರಿಗೆ ಭಯಪಡಬೇಡ; ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರನ್ನು ಇಸ್ರಾಯೇಲಿನ ಮುಂದೆ ಕೊಲ್ಲಲ್ಪ ಡುವಂತೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು ಅಂದನು.

ನ್ಯಾಯಾಧಿಪತಿಗಳು 7:21

ಆಗ ದಂಡೆಲ್ಲಾ ಕಿರಿಚಿಕೊಂಡು ಓಡಿ ಹೋದರು.

1 ಸಮುವೇಲ 17:47

ಈ ದಿನ ಇಸ್ರಾಯೇಲ್ಯರೊಳಗೆ ದೇವರು ಇದ್ದಾನೆಂದು ಭೂಲೋಕದವರೆಲ್ಲರೂ ತಿಳಿ ಯುವರು. ಕರ್ತನು ಕತ್ತಿಯಿಂದಲೂ ಈಟಿಯಿಂದಲೂ ರಕ್ಷಿಸುವದಿಲ್ಲ ಎಂದು ಈ ಸಭೆಯೆಲ್ಲಾ ತಿಳಿದುಕೊಳ್ಳು ವದು; ಯಾಕಂದರೆ ಯುದ್ಧವು ಕರ್ತನದು; ಆತನು ನಿಮ್ಮನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.

1 ಅರಸುಗಳು 20:13

ಆಗ ಇಗೋ, ಒಬ್ಬ ಪ್ರವಾದಿಯು ಇಸ್ರಾಯೇ ಲಿನ ಅರಸನಾದ ಅಹಾಬನ ಬಳಿಗೆ ಬಂದು--ಈ ದೊಡ್ಡ ಗುಂಪನ್ನು ನೋಡಿದಿಯೋ? ಇಗೋ, ನಾನೇ ಕರ್ತನೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ಹೇಳುತ್ತಾನೆ ಅಂದನು.

2 ದಿನವೃತ್ತಾಂತ 32:7

ಬಲಗೊಳ್ಳಿರಿ; ಧೈರ್ಯ ವಾಗಿರ್ರಿ; ಅಶ್ಶೂರಿನ ಅರಸನ ನಿಮಿತ್ತವೂ ಅವನ ಸಂಗಡ ಕೂಡಿರುವ ಮಹಾಗುಂಪಿನ ನಿಮಿತ್ತವೂ ಭಯ ಪಡಬೇಡಿರಿ; ಹೆದರಬೇಡಿರಿ. ಯಾಕಂದರೆ ಅವನ ಸಂಗಡ ಇರುವವರಿಗಿಂತ ನಮ್ಮ ಸಂಗಡ ಅನೇಕರು ಇದ್ದಾರೆ.

ನೆಹೆಮ್ಯ 4:14

ನಾನು ನೋಡಿದ ತರುವಾಯ ಎದ್ದು ಶ್ರೇಷ್ಠರಿಗೂ ಅಧಿಕಾರ ಸ್ಥರಿಗೂ ಇತರ ಜನರಿಗೂ--ನೀವು ಅವರಿಗೋಸ್ಕರ ಭಯಪಡಬೇಡಿರಿ; ದೊಡ್ಡವನಾಗಿಯೂ ಭಯಂಕರ ನಾಗಿಯೂ ಇರುವ ಕರ್ತನನ್ನು ಜ್ಞಾಪಕಮಾಡಿ ಕೊಂಡು ನಿಮ್ಮ ಸಹೋದರರಿಗೋಸ್ಕರ, ಕುಮಾರ, ಕುಮಾರ್ತೆಯರಿಗೋಸ್ಕರ, ಹೆಂಡತಿಯರಿಗೋಸ್ಕರ, ನಿಮ್ಮ ಮನೆಗಳಿಗೋಸ್ಕರ ಯುದ್ಧಮಾಡಿರಿ ಅಂದೆನು.

ಕೀರ್ತನೆಗಳು 17:1

ಓ ಕರ್ತನೇ, ನ್ಯಾಯವನ್ನು ಕೇಳು; ನನ್ನ ಮೊರೆಯನ್ನು ಆಲೈಸು; ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಮೋಸದ ತುಟಿಗಳಿಂದ ಬಂದ ದ್ದಲ್ಲ.

ಯೆಶಾಯ 37:6

ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ನೀನು ಕೇಳಿದ್ದೀ; ಆದರೆ ನೀನು ಅವುಗಳಿಗೆ ಹೆದರಬೇಡ.

ಯೆಶಾಯ 41:10

ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.

ಯೆಶಾಯ 43:1

ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.

Interlinear

Choose Theme