ಆಗ ಕೆಲವರು ಬಂದು ಯೆಹೋಷಾಫಾಟನಿಗೆ--ಸಮು ದ್ರದ ಆಚೆಯಿಂದ ನಿನಗೆ ವಿರೋಧವಾಗಿ ಅರಾಮಿನ ಬಹುಗುಂಪು ಈ ಕಡೆ ಬರುತ್ತದೆ; ಇಗೋ, ಅವರು ಏಂಗೆದಿ ಎಂಬ ಹಚೆಚೋನ್ ತಾಮಾರಿನಲ್ಲಿ ಇದ್ದಾ ರೆಂದು ತಿಳಿಸಿದರು.
Cross references
ಇವರೆಲ್ಲರು ಉಪ್ಪಿನ ಸಮುದ್ರ ವಾಗಿರುವ ಸಿದ್ದೀಮ್ ತಗ್ಗಿನಲ್ಲಿ ಒಟ್ಟಾಗಿ ಕೂಡಿ ಬಂದರು.
ಅವರು ಹಿಂತಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು ಅಮಾಲೆಕ್ಯರ ಎಲ್ಲಾ ಬೈಲನ್ನು ಹಚಚೋನ್‌ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಸಂಹರಿಸಿದರು.
ಅಲ್ಲಿಂದ ಮೇರೆಯು ಯೊರ್ದನ್ ನದಿಗೆ ಅನುಸಾರ ವಾಗಿ ಇಳಿದು ಉಪ್ಪಿನ ಸಮುದ್ರದಲ್ಲಿ ಮುಗಿಯುವದು; ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು.
ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
ನಿಬ್ಷಾನ್, ಉಪ್ಪಿನಪಟ್ಟಣವು, ಏಂಗೆದೀ ಎಂಬ ಆರು ಪಟ್ಟಣಗಳು; ಮತ್ತು ಅವು ಗಳ ಗ್ರಾಮಗಳು.ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.
ದಾವೀದನು ಆ ಸ್ಥಳವನ್ನು ಬಿಟ್ಟುಹೋಗಿ ಏಂಗೆದಿ ಯಲ್ಲಿರುವ ಬಲವಾದ ಗವಿಗಳಲ್ಲಿ ವಾಸಿಸಿದನು.
ಏನ್ಗೆದಿಯ ದ್ರಾಕ್ಷೇ ತೋಟ ಗಳಲ್ಲಿರುವ ಗೋರಂಟೆಯ ಪೂಗೊಂಚಲಿನಂತೆ ನನ್ನ ಪ್ರಿಯನು ನನಗೆ ಇರುವನು.
ಏನ್‌ಗೆದಿ ಮೊದಲುಗೊಂಡು ಏನ್‌ಎಗ್ಲಯಿಮಿನ ವರೆಗೂ ವಿಾನುಗಾರರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವವು. ಅದರ ವಿಾನು ಗಳು ಮಹಾಸಮುದ್ರದ ವಿಾನುಗಳಾಗಿ ಜಾತ್ಯಾನುಸಾರ ವಾಗಿ ಬಹಳವಾಗಿರುವವು,
ದಕ್ಷಿಣದ ಕಡೆಗಿರುವ ದಕ್ಷಿಣದ ಮೇರೆಯೂ ತಾಮಾರ್ ಮೊದಲುಗೊಂಡು ಕಾದೇಶಿನ ವಾಗ್ವಾದದ ನೀರಿನ ವರೆಗೂ ನದಿ ಮೊದಲುಗೊಂಡು ಮಹಾಸಮು ದ್ರದ ವರೆಗೂ ಇರುವದು. ಇದೇ ದಕ್ಷಿಣ ಭಾಗದ ದಕ್ಷಿಣದ ಮೇರೆ.