ಯೆಹೋಷಾಫಾಟನೂ ಅವನ ಜನರೂ ಅವರ ವಸ್ತುಗಳನ್ನು ಕೊಳ್ಳೆಮಾಡಲು ಬಂದಾಗ ಅವರು ಹೆಣ ಗಳ ಬಳಿಯಲ್ಲಿ ದ್ರವ್ಯವನ್ನೂ ಪ್ರಿಯವಾದ ಆಭರಣ ಗಳನ್ನೂ ಬಹಳವಾಗಿ ಕಂಡುಕೊಂಡು ತಾವು ಹೊರ ಲಾರದಷ್ಟು ಸುಲುಕೊಂಡರು. ಕೊಳ್ಳೆಯು ಅಷ್ಟು ಅಧಿಕವಾದದರಿಂದ ಅದನ್ನು ಮೂರು ದಿವಸಗಳ ವರೆಗೂ ಸುಲುಕೊಳ್ಳುತ್ತಾ ಇದ್ದರು.
Cross references
ಮನೆಯಲ್ಲಿ ಇಳು ಕೊಂಡಿರುವವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಕೇಳಿ ಕೊಳ್ಳಲಿ. ಅವುಗಳನ್ನು ನಿಮ್ಮ ಕುಮಾರ ಕುಮಾರ್ತೆ ಯರ ಮೇಲೆ ಹಾಕಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲುಕೊಳ್ಳುವಿರಿ ಅಂದನು.
ಮೋಶೆಯು ಹೇಳಿದಂತೆ ಇಸ್ರಾ ಯೇಲ್ ಮಕ್ಕಳು ಮಾಡಿ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಐಗುಪ್ತ್ಯರಿಂದ ಕೇಳಿ ಪಡೆದರು.
ಅವರಿಗೆ--ಹೆಂಗಸರನ್ನೆಲ್ಲಾ ಉಳಿಸಿದಿರೋ?
ಯುದ್ಧದ ಜನರಲ್ಲಿ ಒಬ್ಬೊಬ್ಬನು ತನ್ನ ಸ್ವಂತಕ್ಕಾಗಿ ಸುಲುಕೊಂಡಿ ದ್ದನು.ಆಗ ಮೋಶೆಯೂ ಯಾಜಕನಾದ ಎಲ್ಲಾಜಾ ರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತಕ್ಕೊಂಡು ಕರ್ತನ ಸಮ್ಮುಖದಲ್ಲಿ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಕ್ಕಾಗಿ ಸಭೆಯ ಗುಡಾರದೊಳಗೆ ತಂದರು.
ಆ ಪಟ್ಟಣಗಳ ಕೊಳ್ಳೆಯನ್ನೆಲ್ಲಾ ಪಶು ಗಳನ್ನೆಲ್ಲಾ ಇಸ್ರಾಯೇಲ್ ಮಕ್ಕಳು ತಮಗೋಸ್ಕರ ಸುಲುಕೊಂಡರು; ಆದರೆ ಮನುಷ್ಯರೆಲ್ಲರನ್ನು ಕತ್ತಿಯಿಂದ ನಾಶಮಾಡುವ ವರೆಗೂ ಹೊಡೆದುಬಿಟ್ಟರು. ಶ್ವಾಸವುಳ್ಳ ಒಂದನ್ನೂ ಅವರು ಉಳಿಯಗೊಡಿಸಲಿಲ್ಲ.
ಗಿದ್ಯೋನನು--ಒಂದು ಬಿನ್ನಹವನ್ನು ನಾನು ನಿಮಗೆ ಮಾಡುತ್ತೇನೆ. ಪ್ರತಿ ಯೊಬ್ಬನು ಕೊಳ್ಳೆ ಹೊಡೆದ ವಾಲೆಗಳನ್ನು ನನಗೆ ಕೊಡಿರಿ ಅಂದನು. (ಯಾಕಂದರೆ ಅವರು ಇಷ್ಮಾಯೇ ಲ್ಯರಾಗಿದ್ದದರಿಂದ ಅವರಿಗೆ ಬಂಗಾರದ ಮುರುವು ಗಳಿದ್ದವು).
ಅವರು ತಕ್ಕೊಂಡು ಹೋದ ಕಿರಿಯರ ಹಿರಿಯರಲ್ಲಾದರೂ ಕುಮಾರ ಕುಮಾರ್ತೆಯರಲ್ಲಾದರೂ ಕೊಳ್ಳೆಯಾದ ಯಾವ ವಸ್ತು ಗಳಲ್ಲಾದರೂ ಒಂದೂ ಕೊರತೆ ಇಲ್ಲದ ಹಾಗೆ ದಾವೀ ದನು ಎಲ್ಲವನ್ನೂ ತಿರಿಗಿ ತಕ್ಕೊಂಡನು.
ಆಗ ಅವರು ಒಬ್ಬರಿಗೊಬ್ಬರು -- ನಾವು ಮಾಡಿದ್ದು ಒಳ್ಳೇದಲ್ಲ; ಈ ದಿವಸ ಒಳ್ಳೇ ಸಮಾಚಾರದ ದಿವಸ; ನಾವು ಸುಮ್ಮನೆ ಇದ್ದು ಉದಯವಾಗುವ ವರೆಗೆ ತಡೆದರೆ ಶಿಕ್ಷೆಯನ್ನು ಹೊಂದುವೆವು; ಆದಕಾರಣ ಬನ್ನಿರಿ ನಾವು ಹೋಗಿ ಅರಸನ ಮನೆಯವರಿಗೆ ತಿಳಿಸೋಣ ಎಂದು ಮಾತಾಡಿಕೊಂಡರು.
ಆಗ ಜನರು ಹೊರಟುಹೋಗಿ ಅರಾಮ್ಯರ ಡೇರೆಗಳನ್ನು ಸುಲುಕೊಂಡರು. ಆದದ ರಿಂದ ಕರ್ತನ ವಾಕ್ಯದ ಪ್ರಕಾರವೇ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ಎರಡು ಸೇರು ಜವೆಗೋದಿಯು ಒಂದು ಶೇಕೆಲಿಗೂ ಮಾರಲ್ಪಟ್ಟಿತು.
ಸೈನ್ಯಗಳ ಅರಸರು ತ್ವರೆಯಾಗಿ ಓಡಿಹೋದರು; ಮನೆಯಲ್ಲಿ ವಾಸಿಸುವವಳು ಕೊಳ್ಳೆ ಯನ್ನು ಪಾಲು ಮಾಡಿಕೊಂಡಳು.
ಅದು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯವುಳ್ಳದ್ದಾಗಿದ್ದು ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವದಿಲ್ಲ.
ಇಗೋ, ಇದು ಬಂತು, ಮತ್ತು ಇದು ನೆರವೇರಿತು; ನಾನು ಮುಂತಿಳಿಸಿದ ದಿನವು ಇದೇ ಎಂದು ದೇವರಾದ ಕರ್ತನು ಹೇಳುತ್ತಾನೆ;
ಯೆಹೂದವು ಸಹ ಯೆರೂಸಲೇಮಿನಲ್ಲಿ ಯುದ್ಧ ಮಾಡುವದು; ಸುತ್ತಲಿರುವ ಎಲ್ಲಾ ಅನ್ಯ ಜನಾಂಗಗಳ ಸಂಪತ್ತಾಗಿ ರುವ, ಚಿನ್ನ, ಬೆಳ್ಳಿ, ವಸ್ತ್ರಗಳು ಬಹು ಹೇರಳವಾಗಿ ಕೂಡಿಸಲ್ಪಡುವವು.
ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.