ಇದಲ್ಲದೆ ತಾರ್ಷಿ ಷಿಗೆ ಹೋಗುವ ನಿಮಿತ್ತ ಹಡಗುಗಳನ್ನು ಮಾಡಿಸಲು ಅವನ ಸಂಗಡ ಸೇರಿಕೊಂಡನು. ಅವರು ಎಚ್ಯೋನ್ಗೆಬೆ ರಿನಲ್ಲಿ ಹಡಗುಗಳನ್ನು ಮಾಡಿಸಿದನು.ಆಗ ಮಾರೇ ಷಾದವನಾಗಿರುವ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರೋಧ ವಾಗಿ ಪ್ರವಾದಿಸಿ--ನೀನು ಅಹಜ್ಯನ ಸಂಗಡ ಸೇರಿ ಕೊಂಡಿದ್ದರಿಂದ ಕರ್ತನು ನಿನ್ನ ಕ್ರಿಯೆಗಳನ್ನು ಹಾಳು ಮಾಡಿಬಿಟ್ಟನೆಂದು ಹೇಳಿದನು. ಹಡಗುಗಳು ತಾರ್ಷಿ ಷಿಗೆ ಹೋಗ ಕೂಡದ ಹಾಗೆ ಒಡೆಯಲ್ಪಟ್ಟವು.
Cross references
ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದ ಕೆಂಪುಸಮುದ್ರ ತೀರದ ಎಲೋ ತಿನ ಬಳಿಯಲ್ಲಿರುವ ಎಚ್ಯೊನ್ಗೇಬರಿನಲ್ಲಿ ಹಡಗು ಗಳನ್ನು ಮಾಡಿಸಿದನು.
ಅರಸನಿಗೆ ತಾರ್ಷೀ ಷಿನ ಹಡಗುಗಳು ಹೀರಾಮನ ಹಡಗುಗಳ ಸಂಗಡ ಸಮುದ್ರದಲ್ಲಿ ಇದ್ದವು. ಮೂರು ವರುಷಕ್ಕೆ ಒಂದು ಸಾರಿ ತಾರ್ಷೀಷಿನ ಹಡಗುಗಳು ಬೆಳ್ಳಿಬಂಗಾರ ವನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.
ಆಗ ಸೊಲೊಮೋನನು ಎದೋಮ್ ದೇಶದ ಸಮುದ್ರ ತೀರದಲ್ಲಿರುವ ಎಚ್ಯೋನ್ಗೆಬೆರಿಗೂ ಏಲೋ ತಿಗೂ ಹೊರಟುಹೋದನು.ಹೂರಾಮನು ತನ್ನ ಸೇವಕರ ಕೈಯಿಂದ ಹಡಗುಗಳನ್ನೂ ಸಮುದ್ರ ತಿಳಿದ ವರಾದ ಸೇವಕರನ್ನೂ ಅವನ ಬಳಿಗೆ ಕಳುಹಿಸಿದನು. ಅವರು ಸೊಲೊಮೋನನ ಸೇವಕರ ಸಂಗಡ ಓಫೀರಿಗೆ ಹೋಗಿ ಅಲ್ಲಿಂದ ಸೊಲೊಮೋನನಿಗೆ ನಾನೂರೈವತ್ತು ತಲಾಂತು ತೂಕ ಬಂಗಾರವನ್ನು ತೆಗೆದುಕೊಂಡು ಬಂದರು.
ಯಾಕಂದರೆ ಹೂರಾಮನ ಸೇವಕರ ಸಂಗಡ ಅರಸನ ಹಡಗುಗಳು ತಾರ್ಷಿಷಿಗೆ ಹೋಗಿ ಮೂರು ವರುಷಕ್ಕೆ ಒಂದುಸಾರಿ ಬಂಗಾರವನ್ನೂ ಬೆಳ್ಳಿ ಯನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.