2 ದಿನವೃತ್ತಾಂತ 21:14 · ಕನ್ನಡ ಬೈಬಲ್
ಇಗೋ, ಕರ್ತನು ದೊಡ್ಡ ಬಾಧೆಯಿಂದ ನಿನ್ನ ಜನರನ್ನೂ ಮಕ್ಕಳನ್ನೂ ಹೆಂಡತಿಯರನ್ನೂ ಸಮಸ್ತ ಸ್ಥಿತಿಯನ್ನೂ ಬಾಧಿಸುತ್ತಾನೆ.
Cross references
ನಿರ್ಗಮಕಾಂಡ 20:5
ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
ಲೇವ್ಯಕಾಂಡ 26:21
ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧ ವಾಗಿ ನಡೆದರೆ ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ನಿಮ್ಮ ಮೇಲೆ ವ್ಯಾಧಿಗಳನ್ನು ಬರಮಾಡುವೆನು.
ಹೊಶೇಯ 5:11
ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು.
ಮೀಕ 6:16
ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.