Home Bibles 2 ದಿನವೃತ್ತಾಂತ 21:19 · ಕನ್ನಡ ಬೈಬಲ್
2 ದಿನವೃತ್ತಾಂತ 21:19 · ಕನ್ನಡ ಬೈಬಲ್

ಎರಡು ವರುಷವಾದ ತರುವಾಯ ಏನಾಯಿತಂದರೆ, ರೋಗದಿಂದ ಅವನ ಕರುಳುಗಳು ಹೊರಕ್ಕೆ ಬಂದವು. ಹೀಗೆಯೇ ಅವನು ಕೆಟ್ಟ ರೋಗಗಳಿಂದ ಸತ್ತನು. ಅವನ ಜನರು ಅವನ ಪಿತೃಗಳಿಗೋಸ್ಕರ ಸುಟ್ಟ ಹಾಗೆ ಅವನಿಗೋಸ್ಕರ ಸುಡಲಿಲ್ಲ.ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿ ಯಾರಿಗೂ ಇಷ್ಪವಿಲ್ಲದವನಾಗಿ ಹೋದನು. ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿ ಗಳಲ್ಲಿ ಅಲ್ಲ.

Cross references

2 ದಿನವೃತ್ತಾಂತ 16:14

ಅವನು ತನಗೋಸ್ಕರ ದಾವೀ ದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವರು ತೈಲಗಾರರ ವಿದ್ಯೆ ಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಲ್ಪಟ್ಟ ಹಾಸಿ ಗೆಯ ಮೇಲೆ ಅವನನ್ನು ಮಲಗಿಸಿ ಅವನಿಗೋಸ್ಕರ ಬಹಳ ಹೆಚ್ಚಾಗಿ (ಧೂಪವನ್ನು) ಸುಟ್ಟರು.

2 ದಿನವೃತ್ತಾಂತ 24:25

ಅವರು ಅವನನ್ನು ಬಿಟ್ಟತರುವಾಯ ಯಾಜಕನಾದ ಯೆಹೋ ಯಾದನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಅವನ ಸ್ವಂತ ಸೇವಕರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಅವನು ಸಾಯುವ ಹಾಗೆ ಅವನ ಮಂಚದ ಮೇಲೆ ಅವನನ್ನು ಕೊಂದುಹಾಕಿದರು. ಅವರು ಅವ ನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿಗಳ ಬಳಿಯಲ್ಲಿ ಅವನನ್ನು ಹೂಣಿ ಡಲಿಲ್ಲ.

ಯೆರೆಮಿಯ 34:5

ಹಾನಾನನ ಕುಮಾರರ ಕೊಠಡಿಗೆ ತಂದು ರೇಕಾಬ್ಯರ ಮನೆಯ ಕುಮಾರರ ಮುಂದೆ ದ್ರಾಕ್ಷಾರಸ ತುಂಬಿದ ಕೂಜೆಗಳನ್ನೂ ಪಂಚಪಾತ್ರೆಗಳನ್ನೂ ಇಟ್ಟು ಅವರಿಗೆ--ದ್ರಾಕ್ಷಾರಸ ಕುಡಿಯಿರಿ ಅಂದನು.

Interlinear

Choose Theme