Home Bibles 2 ದಿನವೃತ್ತಾಂತ 21:2 · ಕನ್ನಡ ಬೈಬಲ್
2 ದಿನವೃತ್ತಾಂತ 21:2 · ಕನ್ನಡ ಬೈಬಲ್

ಇವನ ಸಹೋದರರಾಗಿರುವ ಯೆಹೋ ಷಾಫಾಟನ ಕುಮಾರರಾದ ಅಜರ್ಯನೂ ಯೆಹೀ ಯೇಲನೂ ಜೆಕರ್ಯನೂ ಅಜರ್ಯನೂ ವಿಾಕಾಯೇ ಲನೂ ಶೆಫಟ್ಯನೂ ಇದ್ದರು. ಇವರೆಲ್ಲರು ಇಸ್ರಾ ಯೇಲಿನ ಅರಸನಾದ ಯೆಹೋಷಾಫಾಟನ ಕುಮಾ ರರು.

Cross references

2 ದಿನವೃತ್ತಾಂತ 12:6

ಆದದರಿಂದ ಇಸ್ರಾಯೇಲಿನ ಪ್ರಧಾನರೂ ಅರಸನೂ ತಮ್ಮನ್ನು ತಗ್ಗಿಸಿಕೊಂಡುಕರ್ತನು ನೀತಿವಂತನು ಅಂದರು.

2 ದಿನವೃತ್ತಾಂತ 21:4

ಯೆಹೋ ರಾಮನು ತನ್ನ ತಂದೆಯ ರಾಜ್ಯಕ್ಕೆ ಬಂದ ತರುವಾಯ ಅವನು ತನ್ನನ್ನು ಬಲಪಡಿಸಿಕೊಂಡು ತನ್ನ ಸಮಸ್ತ ಸಹೋದರರನ್ನೂ ಇಸ್ರಾಯೇಲಿನ ಪ್ರಧಾನರಲ್ಲಿ ಕೆಲ ವರನ್ನೂ ಕತ್ತಿಯಿಂದ ಕೊಂದುಹಾಕಿದನು.

2 ದಿನವೃತ್ತಾಂತ 23:2

ಇವರು ಯೆಹೂದವನ್ನು ಸಂಚರಿಸಿ ಯೆಹೂದದ ಸಮಸ್ತ ಪಟ್ಟಣಗಳಿಂದ ಲೇವಿ ಯರನ್ನೂ ಇಸ್ರಾಯೇಲಿನ ಮುಖ್ಯಸ್ಥರಾದ ಪಿತೃಗಳನ್ನೂ ಕೂಡಿಸಿಕೊಂಡು ಯೆರೂಸಲೇಮಿಗೆ ಬಂದರು.

2 ದಿನವೃತ್ತಾಂತ 24:5

ಆದದರಿಂದ ಅವನು ಯಾಜ ಕರನ್ನೂ ಲೇವಿಯರನ್ನೂ ಕೂಡಿಸಿಕೊಂಡು ಅವರಿಗೆನೀವು ಯೆಹೂದ ಪಟ್ಟಣಗಳಿಗೆ ಹೊರಟು ಹೋಗಿ ವರುಷ ವರುಷಕ್ಕೆ ನಿಮ್ಮ ದೇವರ ಆಲಯವನ್ನು ದುರಸ್ತು ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರಿಂದ ಹಣವನ್ನು ಕೂಡಿಸಿರಿ. ಕೆಲಸವನ್ನು ಶೀಘ್ರವಾಗಿ ನಡಿಸಿರಿ ಅಂದನು. ಆದಾಗ್ಯೂ ಲೇವಿಯರು ಅವಸರ ಮಾಡದೆ ಇದ್ದರು.

2 ದಿನವೃತ್ತಾಂತ 24:16

ಅವನು ದೇವರಿಗೋಸ್ಕರವಾಗಿಯೂ ಆತನ ಆಲಯಕ್ಕೋಸ್ಕರ ವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೇದನ್ನು ಮಾಡಿ ದ್ದದ್ದರಿಂದ ಅವರು ಅವನನ್ನು ದಾವೀದನ ಪಟ್ಟಣ ದಲ್ಲಿ ಅರಸುಗಳ ಬಳಿಯಲ್ಲಿ ಹೂಣಿಟ್ಟರು.

2 ದಿನವೃತ್ತಾಂತ 28:19

ಯಾಕಂದರೆ ಇಸ್ರಾಯೇಲಿನ ಅರಸನಾದ ಆಹಾ ಜನ ನಿಮಿತ್ತ ಕರ್ತನು ಯೆಹೂದವನ್ನು ತಗ್ಗಿಸಿದನು. ಅವನು ಯೆಹೂದವನ್ನು ಬೆತ್ತಲೆಯಾಗಿ ಮಾಡಿ ಕರ್ತ ನಿಗೆ ವಿರೋಧವಾಗಿ ಬಹಳ ಅಪರಾಧ ಮಾಡಿದನು.

2 ದಿನವೃತ್ತಾಂತ 28:23

ಏನಂದರೆ, ಅವನು ಅರಾಮಿನ ಅರಸುಗಳ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ--ಅವು ನನಗೆ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ ಎಂದು ಅಂದುಕೊಂಡು ತನ್ನನ್ನು ಹೊಡೆದ ದಮಸ್ಕ ದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಅವು ಅವನನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಬೀಳುವಂತೆ ಮಾಡಿದವು.

2 ದಿನವೃತ್ತಾಂತ 28:27

ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ಯೆರೂಸಲೇಮ್‌ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಇಸ್ರಾಯೇಲಿನ ಅರಸುಗಳ ಸಮಾಧಿಯ ಸ್ಥಳದಲ್ಲಿ ಅವನನ್ನು ತರಲಿಲ್ಲ. ಅವನ ಮಗನಾದ ಹಿಜ್ಕೀಯನು ಅವನಿಗೆ ಬದಲಾಗಿ ಆಳಿದನು.

2 ದಿನವೃತ್ತಾಂತ 33:18

ಮನಸ್ಸೆಯ ಇತರ ಕ್ರಿಯೆಗಳೂ ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ ಇಸ್ರಾಯೇಲಿನ ದೇವರಾದ ಕರ್ತನ ನಾಮದಲ್ಲಿ ಅವನ ಸಂಗಡ ಮಾತನಾಡಿದ ಪ್ರವಾದಿಗಳ ಮಾತುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.

2 ದಿನವೃತ್ತಾಂತ 35:18

ಪ್ರವಾದಿಯಾದ ಸಮುವೇಲನ ದಿವಸಗಳು ಮೊದಲುಗೊಂಡು ಇಸ್ರಾಯೇಲಿನಲ್ಲಿ ಇಂಥಾ ಪಸ್ಕವನ್ನು ಆಚರಿಸಿದ್ದಿಲ್ಲ. ಇಸ್ರಾಯೇಲಿನ ಸಮಸ್ತ ಅರಸುಗಳಲ್ಲಿ ಯೋಷೀಯನೂ ಯಾಜಕರೂ ಲೇವಿಯರೂ ಸಿದ್ಧವಾಗಿದ್ದ ಯೆಹೂದ ಇಸ್ರಾಯೇಲ್ಯ ರೆಲ್ಲರೂ ಯೆರೂಸಲೇಮಿನ ನಿವಾಸಿಗಳೂ ಆಚರಿಸಿದ ಪಸ್ಕದ ಹಾಗೆ ಯಾರೂ ಆಚರಿಸಲಿಲ್ಲ.

Interlinear

Choose Theme