Home Bibles 2 ದಿನವೃತ್ತಾಂತ 22:7 · ಕನ್ನಡ ಬೈಬಲ್
2 ದಿನವೃತ್ತಾಂತ 22:7 · ಕನ್ನಡ ಬೈಬಲ್

ಯೆಹೋರಾಮನ ಬಳಿಗೆ ಅವನು ಬಂದದ್ದರಿಂದ ಅಹಜ್ಯನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗಂದರೆ ಅವನು ಬಂದ ತರುವಾಯ ಕರ್ತನು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗನಾದ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟನು.

Cross references

ದ್ವಿತೀಯೋಪದೇಶಕಾಂಡ 32:35

ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.

ಯೆಹೋಶುವ 11:20

ಅವರು ಯುದ್ಧಮಾಡಲು ಇಸ್ರಾಯೇಲಿಗೆ ಎದುರಾಗಿ ಬರುವ ಹಾಗೆ ಅವರ ಹೃದಯವನ್ನು ಕಠಿಣಮಾಡಿ ಅವರನ್ನು ಸಂಪೂರ್ಣ ನಾಶಮಾಡುವ ಹಾಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರಿಗೆ ದಯೆತೋರಿಸದೆ ಅವರನ್ನು ನಾಶಮಾಡುವ ಹಾಗೆ ಕರ್ತನಿಂದ ಅಪ್ಪಣೆ ಆಗಿತ್ತು.

ನ್ಯಾಯಾಧಿಪತಿಗಳು 14:4

ಇದು ಕರ್ತನಿಂದ ಉಂಟಾಯಿತೆಂದು ಅವನ ತಂದೆ ತಾಯಂದಿರು ಅರಿ ಯದೆ ಇದ್ದರು. ಏನಂದರೆ ಫಿಲಿಷ್ಟಿಯರಿಗೆ ವಿರೋಧ ವಾಗಿ ಅವನು ಕಾರಣವನ್ನು ಹುಡುಕಿದನು. ಆ ಕಾಲ ದಲ್ಲಿ ಫಿಲಿಷ್ಟಿಯರು ಇಸ್ರಾಯೇಲ್ಯರನ್ನೂ ಆಳುತ್ತಿದ್ದರು.

1 ಅರಸುಗಳು 12:15

ಹೀಗೆಯೇ ಅರಸನು ಜನರ ಮಾತು ಕೇಳದೆ ಹೋದನು. ಯಾಕಂದರೆ ಕರ್ತನು ನೆಬಾಟನ ಮಗ ನಾದ ಯೆರೊಬ್ಬಾಮನಿಗೆ ಶಿಲೋನ್ಯನಾದ ಅಹೀಯನ ಮುಖಾಂತರವಾಗಿ ಹೇಳಿದ ಮಾತು ಈಡೇರುವದಕ್ಕೆ ಕಾರಣವು ಕರ್ತನಿಂದ ಉಂಟಾಯಿತು.

1 ಅರಸುಗಳು 12:24

ಆದದರಿಂದ ಅವರು ಕರ್ತನ ವಾಕ್ಯವನ್ನು ಕೇಳಿ ಆ ವಾಕ್ಯದ ಪ್ರಕಾರವೇ ಹಿಂತಿರುಗಿ ಹೋದರು.

1 ಅರಸುಗಳು 19:16

ಹಜಾಯೇಲನ ಕತ್ತಿಗೆ ತಪ್ಪಿದವನನ್ನು ಯೇಹುವ ಕೊಂದುಹಾಕುವನು;

1 ಅರಸುಗಳು 22:20

ಆಗ ಕರ್ತನು--ಅಹಾಬನು ಹೋಗಿ ಗಿಲ್ಯಾದಿನ ರಾಮೋ ತಿನ ಬಳಿಯಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು.

2 ಅರಸುಗಳು 9:1

ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಕ್ಕಳಲ್ಲಿ ಒಬ್ಬನನ್ನು ಕರೆದು ಅವನಿಗೆ--ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗು.

2 ಅರಸುಗಳು 9:21

ಯೋರಾಮನು ರಥಹೂಡಬೇಕೆಂದು ಹೇಳಿದನು. ಅವನ ರಥವು ಸಿದ್ಧವಾಯಿತು. ಆಗ ಇಸ್ರಾಯೇಲಿನ ಅರಸನಾದ ಯೋರಾಮನೂ ಯೆಹೂ ದದ ಅರಸನಾದ ಅಹಜ್ಯನೂ ಹೊರಟು ಅವನವನು ತನ್ನ ತನ್ನ ರಥದಲ್ಲಿ ಏರಿ ಯೇಹುವಿಗೆ ಎದುರಾಗಿ ಹೊರಟು ಇಜ್ರೇಲ್ಯನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.

2 ಅರಸುಗಳು 10:11

ಈ ಪ್ರಕಾರ ಯೇಹುವು ಅಹಾಬನಿಗೆ ಯಾರನ್ನೂ ಉಳಿಯಗೊಡಿಸದೆ ಇರುವ ವರೆಗೂ ಇಜ್ರೇಲಿನಲ್ಲಿ ಅವನಿಗೆ ಉಳಿದ ಎಲ್ಲಾ ಮನೆಯವರನ್ನೂ ಅವನ ಎಲ್ಲಾ ಹಿರಿಯರನ್ನೂ ನೆಂಟರನ್ನೂ ಯಾಜಕರನ್ನೂ ಸಂಹರಿಸಿದನು.

2 ದಿನವೃತ್ತಾಂತ 10:15

ಹೀಗೆ ಅರ ಸನು ಜನರ ಮಾತನ್ನು ಕೇಳದೆ ಹೋದನು. ಕರ್ತನು ನೆಬಾಟನ ಮಗನಾದ ಯಾರೊಬ್ಬಾಮನಿಗೆ ಶಿಲೋವಿ ನವನಾದ ಅಹೀಯನ ಮುಖಾಂತರ ಹೇಳಿದ ವಾಕ್ಯವು ಈಡೇರುವದಕ್ಕೆ ಈ ಕಾರಣ ದೇವರಿಂದ ಉಂಟಾ ಯಿತು.

ಕೀರ್ತನೆಗಳು 9:16

ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್‌. ಸೆಲಾ.

ಸಾಮೇತಿಗಳು 16:9

ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ; ಆದರೆ ಕರ್ತನು ಅವನ ಹೆಜ್ಜೆಗಳನ್ನು ನಡಿಸುತ್ತಾನೆ.

ಯೆಶಾಯ 46:10

ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.

ಹೊಶೇಯ 14:9

ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.

ಮಲಾಕಿ 4:3

ದುಷ್ಟರನ್ನು ತುಳಿದುಬಿಡುವಿರಿ; ಯಾಕಂದರೆ ನಾನು ಕಾರ್ಯ ಸಾಧಿಸುವ ದಿನದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

Interlinear

Choose Theme