ಅವನು ಶತಾಧಿಪತಿಗಳನ್ನೂ ಗೌರವಸ್ಥರನ್ನೂ ಜನರ ಅಧಿಪತಿಗಳನ್ನೂ ದೇಶದ ಜನರೆಲ್ಲರನ್ನೂ ಕರ ಕೊಂಡು ಅರಸನನ್ನು ಕರ್ತನ ಆಲಯದಿಂದ ಕರ ತಂದನು. ಅವರು ಎತ್ತರವಾದ ಬಾಗಲಿನಿಂದ ಅರಸನ ಮನೆಗೆ ಬಂದು ಅರಸನನ್ನು ರಾಜ್ಯದ ಸಿಂಹಾಸನದ ಮೇಲೆ ಕೂಡ್ರಿಸಿದರು.ಅವರು ಅತಲ್ಯಳನ್ನು ಕತ್ತಿ ಯಿಂದ ಕೊಂದ ತರುವಾಯ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.
Cross references
ಹಾಗೆಯೇ ನೂರಕ್ಕೆ ಅಧಿಪತಿಯಾದವರು ಯಾಜಕನಾದ ಯೆಹೋಯಾದಾ ವನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್ ದಿವಸದಲ್ಲಿ ಪ್ರವೇಶಿಸಬೇಕಾದ ತನ್ನ ಜನರನ್ನೂ ಸಬ್ಬತ್ ದಿವಸದಲ್ಲಿ ಹೊರಗೆ ಹೋಗಲು ಬೇಕಾದವರನ್ನೂ ಯಾಜಕನಾದ ಯೆಹೋ ಯಾದಾವನ ಬಳಿಗೆ ಕರಕೊಂಡು ಬಂದರು.
ಆಗ ಅವನು ನೂರಕ್ಕೆ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಕಾವಲುಗಾರರನ್ನೂ ದೇಶದ ಜನ ರೆಲ್ಲರನ್ನೂ ತನ್ನ ಬಳಿಗೆ ಕರಕೊಂಡ ಮೇಲೆ ಅವರು ಅರಸನನ್ನು ಕರ್ತನ ಮನೆಯಿಂದ ಕಾವಲುಗಾರರ ಬಾಗಲ ಮಾರ್ಗವಾಗಿ ಅರಮನೆಗೆ ಕರಕೊಂಡು ಬಂದು ಅರಸುಗಳ ಸಿಂಹಾಸನದ ಮೇಲೆ ಕೂಡ್ರಿಸಿದರು.
ಇವನು ಕರ್ತನ ಮನೆಗೆ ಎತ್ತರವಾದ ಬಾಗಲನ್ನು ಕಟ್ಟಿಸಿದನು. ಆದರೆ ಉನ್ನತ ಸ್ಥಳಗಳು ತೆಗೆಯಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪವನ್ನೂ ಅರ್ಪಿಸುತ್ತಿದ್ದರು.
ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ, ಕರ್ತನ ಸಿಂಹಾಸನದ ಮೇಲೆ ಕುಳಿತುಕೊಂಡು ಸಫಲ ಹೊಂದಿದನು. ಸಮಸ್ತ ಇಸ್ರಾಯೇಲ್ಯರು ಅವನಿಗೆ ವಿಧೇಯರಾದರು.