2 ದಿನವೃತ್ತಾಂತ 24:26 · ಕನ್ನಡ ಬೈಬಲ್
ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ದವರಾರಂದರೆ, ಅಮ್ಮೋನ್ಯಳಾಗಿರುವ ಶಿಮ್ಗಾಳ ಮಗ ನಾದ ಜಾಬಾದನು, ಮೋವಾಬ್ಯಳಾಗಿರುವ ಶಿವ್ರೆಾ ತಳ ಮಗನಾದ ಯೆಹೋಜಾಬಾದನು.ಆದರೆ ಅವನ ಕುಮಾರರನ್ನು ಕುರಿತೂ ಅವನ ಮೇಲೆ ಹಾಕಿದ ಭಾರಗಳನ್ನು ಕುರಿತೂ ದೇವರ ಆಲಯ ದುರಸ್ತು ಮಾಡುವದನ್ನು ಕುರಿತೂ ಇಗೋ, ಅವು ಅರಸುಗಳ ಚರಿತ್ರೆಯ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನ ಮಗ ನಾದ ಅಮಚ್ಯನು ಅವನಿಗೆ ಬದಲಾಗಿ ಆಳಿದನು.
Cross references
2 ಅರಸುಗಳು 12:21
ಅವನ ಸೇವಕರಾದ ಶಿಮೆಯಾತನ ಮಗನಾದ ಯೊಜಾಕಾರನೂ, ಶೋಮೇರನ ಮಗನಾದ ಯೆಹೋ ಜಾಬಾದನೂ ಅವನನ್ನು ಹೊಡೆದದ್ದರಿಂದ ಅವನು ಸತ್ತುಹೋದನು. ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.
2 ದಿನವೃತ್ತಾಂತ 25:3
ರಾಜ್ಯವು ಅವನಿಗೆ ಸ್ಥಿರಮಾಡಲ್ಪಟ್ಟ ತರುವಾಯ ಅವನು ಅರಸನಾದ ತನ್ನ ತಂದೆಯನ್ನು ಸಂಹರಿಸಿದ ತನ್ನ ಸೇವಕರನ್ನು ಕೊಂದುಹಾಕಿದನು.