Home Bibles 2 ದಿನವೃತ್ತಾಂತ 24:6 · ಕನ್ನಡ ಬೈಬಲ್
2 ದಿನವೃತ್ತಾಂತ 24:6 · ಕನ್ನಡ ಬೈಬಲ್

ಆಗ ಅರಸನು ಮುಖ್ಯಸ್ಥನಾದ ಯೆಹೋ ಯಾದನನ್ನು ಕರೇಕಳುಹಿಸಿ ಅವನಿಗೆ--ಕರ್ತನ ಸೇವಕ ನಾದ ಮೋಶೆಯೂ ಇಸ್ರಾಯೇಲಿನ ಸಭೆಯೂ ಸಾಕ್ಷಿಯ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆ ಯನ್ನು ಯೆಹೂದದಿಂದಲೂ ಯೆರೂಸಲೇಮಿ ನಿಂದಲೂ ಬರುವಂತೆ ಮಾಡಲು ನೀನು ಲೇವಿಯ ರನ್ನು ಯಾಕೆ ವಿಚಾರಿಸಲಿಲ್ಲ?

Cross references

ನಿರ್ಗಮಕಾಂಡ 30:12

ನೀನು ಇಸ್ರಾಯೇಲ್‌ ಮಕ್ಕಳ ಲೆಕ್ಕವನ್ನು ಅದರ ಸಂಖ್ಯೆಗೆ ಸರಿಯಾಗಿ ಎಣಿಸಿದಾಗ ಅವರಲ್ಲಿ ವ್ಯಾಧಿ ಉಂಟಾಗದ ಹಾಗೆ ಅವರನ್ನು ಕ್ರಮವಾಗಿ ಎಣಿಸಿ ಒಬ್ಬೊಬ್ಬನು ತನ್ನ ಪ್ರಾಣದ ವಿಮೋಚನೆಯ ಕ್ರಮವನ್ನು ಕರ್ತನಿಗೆ ಕೊಡಬೇಕು.

ನಿರ್ಗಮಕಾಂಡ 30:16

ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲ್‌ ಮಕ್ಕಳಿಂದ ತೆಗೆದುಕೊಂಡು ಸಭೆಯ ಗುಡಾರದ ಕೆಲಸಕ್ಕಾಗಿ ಪ್ರತ್ಯೇ ಕಿಸಬೇಕು. ಇದೇ ಕರ್ತನ ಮುಂದೆ ಇಸ್ರಾಯೇಲ್‌ ಮಕ್ಕಳಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿಯೂ ಇರುವದು ಅಂದನು.

ಅಂಕೆಗಳ ಪುಸ್ತಕ 1:50

ಆದರೆ ನೀನು ಲೇವಿಯರನ್ನು ಸಾಕ್ಷಿಯ ಗುಡಾರ ಕ್ಕೋಸ್ಕರವೂ ಅದರ ಎಲ್ಲಾ ವಸ್ತುಗಳಿಗೋಸ್ಕರವೂ ಅದಕ್ಕೆ ಬೇಕಾದ ಎಲ್ಲವುಗಳಿಗೋಸ್ಕರವೂ ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ವಸ್ತುಗಳನ್ನೂ ಹೊತ್ತುಕೊಳ್ಳುವರು, ಇದರ ಸೇವೆಮಾಡಿ ಗುಡಾರದ ಸುತ್ತಮುತ್ತಲೂ ಇಳಿದುಕೊಳ್ಳಬೇಕು.

ಅಂಕೆಗಳ ಪುಸ್ತಕ 17:7

ಆಗ ಮೋಶೆಯು ಆ ಕೋಲುಗಳನ್ನು ಸಾಕ್ಷಿಯ ಗುಡಾರ ದೊಳಗೆ ಕರ್ತನ ಸಮ್ಮುಖದಲ್ಲಿ ಇಟ್ಟನು.

ಅಂಕೆಗಳ ಪುಸ್ತಕ 18:2

ನಿಮ್ಮ ಪಿತೃವಾದ ಲೇವಿಯ ಗೋತ್ರದವರಾದ ನಿನ್ನ ಸಹೋದರರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಅವರು ನಿನ್ನ ಕೂಡ ಇದ್ದು ನಿನಗೆ ಸೇವೆ ಮಾಡಬೇಕು, ಆದರೆ ನೀನು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷೀ ಗುಡಾರದ ಮುಂದೆ ಸೇವೆಮಾಡಬೇಕು;

2 ಸಮುವೇಲ 24:3

ಆಗ ಯೋವಾಬನು ಅರಸನಿಗೆ-- ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ನೋಡುವ ಹಾಗೆ ನಿನ್ನ ದೇವರಾದ ಕರ್ತನು ಈಗ ಇರುವದಕ್ಕಿಂತ ಜ ರನ್ನು ನೂರರಷ್ಟಾಗಿ ಹೆಚ್ಚು ಮಾಡಲಿ; ಆದರೆ ಅರಸ ನಾದ ನನ್ನ ಒಡೆಯನು ಈ ಕಾರ್ಯವನ್ನು ಆಶಿಸುವ ದೇನು ಅಂದನು. ಆದಾಗ್ಯೂ ಅರಸನ ಮಾತು ಯೋವಾಬನಿಗೂ ಸೈನ್ಯಾಧಿಪತಿಗಳಿಗೂ ವಿರೋಧವಾಗಿ ಪ್ರೇರೇಪಿಸಿತು.

ಅಪೋಸ್ತಲರ ಕೃತ್ಯಗಳು 7:44

ಸಾಕ್ಷೀಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದಾತನು ಅವನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸ ಬೇಕೆಂದು ನೇಮಿಸಿದ್ದನು.

Interlinear

Choose Theme