ಆದರೆ ಅವರು ತಮ್ಮ ಸಂಗಡ ಯುದ್ಧಕ್ಕೆ ಹೋಗದ ಹಾಗೆ ಅಮಚ್ಯನು ಹಿಂದಕ್ಕೆ ಕಳುಹಿಸಿದ ಗುಂಪಿನವರು ಯೆಹೂದದ ಪಟ್ಟಣಗಳ ಮೇಲೆ ಬಿದ್ದು ಸಮಾರ್ಯ ಮೊದಲುಗೊಂಡು ಬೇತ್ಹೋರೋನಿನ ಮಟ್ಟಿಗೂ ಮೂರು ಸಾವಿರ ಮಂದಿಯನ್ನು ಹೊಡೆದುಬಿಟ್ಟು ಬಹುಕೊಳ್ಳೆಯನ್ನು ತೆಗೆದುಕೊಂಡರು.
Cross references
ಆಗ ಕರ್ತನು ಅವರನ್ನು ಇಸ್ರಾಯೇಲಿನ ಮುಂದೆ ಗಲಿಬಿಲಿಮಾಡಿ ಅವರನ್ನು ಗಿಬ್ಯೋನಿನಲ್ಲಿ ದೊಡ್ಡ ಸಂಹಾರದಿಂದ ಸಂಹರಿಸಿ ಬೇತ್‌ಹೋರೋನಿಗೆ ಹೋಗುವ ಮಾರ್ಗದಲ್ಲಿ ಹಿಂದಟ್ಟಿ ಅಜೇಕ ಮಕ್ಕೇದದ ವರೆಗೂ ಹೊಡೆದನು.
ಹೀಗೆಯೇ ಸೊಲೊ ಮೋನನು ಗೆಜೆರನ್ನೂ ಕೆಳಗಿರುವ ಬೇತ್‌ಹೋರೋ ನನ್ನೂ ಬಾಲಾತನ್ನೂ ಅಡವಿಯಲ್ಲಿರುವ ತಾಮಾರನ್ನೂ ದೇಶದಲ್ಲಿ ಕಟ್ಟಿಸಿದನು.
ತಿರ್ಚದಲ್ಲಿ ಆರು ವರುಷ ಆಳಿದನು ಅವನು ಶೆಮೆರ್ ನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಸಮಾರ್ಯ ವೆಂಬ ಬೆಟ್ಟವನ್ನು ಕೊಂಡುಕೊಂಡು ಆ ಬೆಟ್ಟದ ಮೇಲೆ ಪಟ್ಟಣವನ್ನು ಕಟ್ಟಿಸಿ ಶೆಮೆರನೆಂಬ ಬೆಟ್ಟದ ಯಜಮಾನನ ಹೆಸರಿನ ಹಾಗೆ ತಾನು ಕಟ್ಟಿಸಿದ ಪಟ್ಟಣಕ್ಕೆ ಸಮಾರ್ಯ ವೆಂದು ಹೆಸರಿಟ್ಟನು.
ಯೆಹೂದದ ಅರಸನಾದ ಆಸನ ಮೂವ ತ್ತೆಂಟನೇ ವರುಷದಲ್ಲಿ ಒಮ್ರಿಯ ಮಗನಾದ ಅಹಾ ಬನು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಇಪ್ಪತ್ತೆರಡು ವರುಷ ಆಳಿದನು;
ಗೋಡೆಗಳೂ ಬಾಗಲುಗಳೂ ಅಗುಳಿಗಳೂ ಉಳ್ಳ ಕೋಟೆ ಪಟ್ಟಣಗಳಾದ ಮೇಲಿನ ಬೇತ್ಹೋರೋನನ್ನೂ ಕೆಳಗಿನ ಬೇತ್ಹೋರೋನನ್ನೂ ಬಾಲಾತೂರನ್ನೂ ಸೊಲೊಮೋನನಿಗೆ ಇದ್ದ ಸಮಸ್ತ ಉಗ್ರಾಣದ ಪಟ್ಟಣಗಳನ್ನೂ ಸಮಸ್ತ ರಥಗಳ ಪಟ್ಟಣ ಗಳನ್ನೂ ರಾಹುತರ ಪಟ್ಟಣಗಳನ್ನೂ ಕಟ್ಟಿಸಿದನು.