ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ ಗತ್ ಗೋಡೆಯನ್ನೂ ಯಬ್ನೆಯ ಗೋಡೆಯನ್ನೂ ಅಷ್ಡೋದಿನ ಗೋಡೆಯನ್ನೂ ಕೆಡವಿ ಬಿಟ್ಟು ಫಿಲಿಷ್ಟಿಯರ ಮಧ್ಯದಲ್ಲಿ ಅಷ್ಡೋ ದಿನ ಬಳಿಯಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
Cross references
ಅಲ್ಲಿಂದ ಉತ್ತರಕ್ಕಿರುವ ಎಕ್ರೋನಿನ ಪಾರ್ಶ್ವವನ್ನು ಹಿಡಿದು ಶಿಕ್ಕೆರೋನಿಗೂ ಅಲ್ಲಿಂದ ಬಾಲಾ ಬೆಟ್ಟವನ್ನು ದಾಟಿ ಯೆಬ್ನೇಲಿಗೆ ಹೊರಟು ಸಮುದ್ರಕ್ಕೆ ಕಡೆಯಾಗುವದು.
ಅಷ್ಡೋದ್ ಅದರ ಪಟ್ಟಣಗಳೂ ಗ್ರಾಮಗಳೂ ಗಾಜಾ, ಅದರ ಪಟ್ಟಣಗಳೂ ಗ್ರಾಮಗಳೂ ಐಗುಪ್ತದ ನದಿ, ದೊಡ್ಡ ಸಮುದ್ರ, ಅದರ ಮೇರೆ, ಇವುಗಳ ವರೆಗೂ
ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಎಬೆನೆಜೆರಿನಿಂದ ಅಷ್ಡೋದಿಗೆ ತಂದರು.
ಆದರೆ ಕರ್ತನ ಕೈ ಅಷ್ಡೋದಿನವರ ಮೇಲೆ ಭಾರ ವಾಗಿದ್ದು ಅವರನ್ನು ನಾಶಮಾಡಿ ಅಷ್ಡೋದನ್ನೂ ಅದರ ಮೇರೆಗಳನ್ನೂ ಗಡ್ಡೆರೋಗದಿಂದ ಹೊಡೆದನು.
ಇದಾದ ಮೇಲೆ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ಅಣಗಿಸಿ ಅವರ ಕೈಯಿಂದ ಮೇತೆಗಮ್ಮವನ್ನು ತಕ್ಕೊಂಡನು.
ಇದರ ತರುವಾಯ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ತಗ್ಗಿಸಿ ಗತ್‌ನ್ನೂ ಅದರ ಗ್ರಾಮಗಳನ್ನೂ ಫಿಲಿಷ್ಟಿಯರ ಕೈಯೊಳಗಿಂದ ತೆಗೆದುಕೊಂಡನು.
ಅದುಲ್ಲಾಮ್ ಗತ್‌ಊರು ಮಾರೇಷ್
ಇದಲ್ಲದೆ ಕೂಷಿಯರ ಬಳಿಯಲ್ಲಿದ್ದ ಫಿಲಿಷ್ಟಿಯರ ಮತ್ತು ಅರಬ್ಬಿಯರ ಮನಸ್ಸನ್ನು ಯೆಹೋರಾಮನಿಗೆ ವಿರೋಧವಾಗಿ ಕರ್ತನು ಎಬ್ಬಿಸಿದನು.
ಸಮಸ್ತ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಆತನ ಕೋಲು ಮುರಿದುಹೋಯಿ ತೆಂದು ನೀವು ಉಲ್ಲಾಸಿಸಬೇಡಿರಿ; ಹಾವಿನ ಸಂತಾನ ದಿಂದ ವಿಷಸರ್ಪವು ಉಂಟಾಗುವದು; ಅದರ ಫಲವು ಹಾರುವ ಅಗ್ನಿಮಯ ಸರ್ಪವೇ.
ತರ್ತಾನನು ಅಶ್ಶೂರಿನ ಅರಸನಾದ ಸರ್ಗೋನನು ಅವನನ್ನು ಕಳುಹಿಸಿದ್ದದ ರಿಂದ ಅಷ್ಡೋದಿಗೆ ಬಂದ ವರ್ಷದಲ್ಲಿ ಅವನು ಅಷ್ಡೋದಿಗೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದಾಗ,