Home Bibles 2 ದಿನವೃತ್ತಾಂತ 26:8 · ಕನ್ನಡ ಬೈಬಲ್
2 ದಿನವೃತ್ತಾಂತ 26:8 · ಕನ್ನಡ ಬೈಬಲ್

ಇದಲ್ಲದೆ ಅಮ್ಮೋನ್ಯರು ಉಜ್ಜೀಯನಿಗೆ ಕಾಣಿಕೆ ಗಳನ್ನು ಕೊಟ್ಟರು. ಆದದರಿಂದ ಅವನ ಹೆಸರು ಐಗುಪ್ತದ ಮೇರೆಯ ವರೆಗೂ ಬಹಳವಾಗಿ ಹಬ್ಬಿತು. ಅವನು ತನ್ನನ್ನು ಬಹಳವಾಗಿ ಬಲಪಡಿಸಿಕೊಂಡನು.

Cross references

ಆದಿಕಾಂಡ 12:2

ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.

ಆದಿಕಾಂಡ 19:38

ಚಿಕ್ಕವಳು ಸಹ ಮಗನನ್ನು ಹೆತ್ತು ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಇಂದಿನ ವರೆಗೂ ಅಮ್ಮೋನನ ಮಕ್ಕಳಿಗೆ ಇವನೇ ತಂದೆ.

ದ್ವಿತೀಯೋಪದೇಶಕಾಂಡ 2:19

ನಾನು ಅಮ್ಮೋನನ ಮಕ್ಕಳ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ ಅಂದನು.

ನ್ಯಾಯಾಧಿಪತಿಗಳು 11:15

ಅವರಿಗೆ--ಯೆಫ್ತಾಹನು ಹೇಳುವ ಮಾತು ಇದೇ--ಇಸ್ರಾಯೇಲ್‌ ಮೋವಾಬಿನ ದೇಶವನ್ನಾ ದರೂ ಅಮ್ಮೋನನ ಮಕ್ಕಳ ದೇಶವನ್ನಾದರೂ ತಕ್ಕೊಂಡ ದ್ದಿಲ್ಲ.

1 ಸಮುವೇಲ 11:1

ಅಮ್ಮೋನಿಯನಾದ ನಾಹಾಷನು ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ವಿರೋಧ ವಾಗಿ ದಂಡು ಇರಿಸಿದನು. ಆಗ ಯಾಬೇಷಿನ ಜನರೆ ಲ್ಲರು ನಾಹಾಷನಿಗೆ--ನೀನು ನಮ್ಮ ಸಂಗಡ ಒಡಂಬ ಡಿಕೆ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು.

2 ಸಮುವೇಲ 8:2

ಇದಲ್ಲದೆ ಅವನು ಮೋವಾಬ್ಯರನ್ನು ಹೊಡೆದು ಅವರನ್ನು ಹಗ್ಗದಿಂದ ಅಳೆದು ನೆಲಕ್ಕೆ ಬೀಳಮಾಡಿದನು; ಅವರನ್ನು ಕೊಲ್ಲುವದಕ್ಕೆ ಎರಡು ದಾರಗಳಿಂದ, ಜೀವದಲ್ಲಿಡುವದಕ್ಕೆ ಒಂದು ಪೂರ್ಣ ವಾದ ಹಗ್ಗದಿಂದ ಅಳೆದನು. ಹಾಗೆಯೇ ಮೋವಾಬ್ಯರು ದಾವೀದನಿಗೆ ದಾಸರಾಗಿ ಅವನಿಗೆ ಕಪ್ಪವನ್ನು ತಂದರು.

2 ಸಮುವೇಲ 8:13

ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂತಿರುಗಿದಾಗ ಹೆಸರುಗೊಂಡನು.

1 ಅರಸುಗಳು 4:31

ಎಜ್ರಾಹಿಯಾದ ಎತಾನನು, ಮಹೋಲನನ ಮಕ್ಕಳಾದ ಹೆಮಾನನು, ಕಲ್ಕೋಲನು, ದರ್ದಾವನು ಮೊದಲಾದ ಎಲ್ಲಾ ಜನ ರಿಗಿಂತ ಅವನು ಜ್ಞಾನಿಯಾಗಿದ್ದನು. ಸುತ್ತಲಿರುವ ಸಕಲ ಜನಾಂಗಗಳಲ್ಲಿ ಅವನ ಕೀರ್ತಿ ಇತ್ತು.

1 ದಿನವೃತ್ತಾಂತ 14:17

ದಾವೀದನ ಕೀರ್ತಿಯು ಸಮಸ್ತ ದೇಶಗಳಿಗೆ ಹರಡಿತು; ಕರ್ತನು ಅವನ ಭಯವನ್ನು ಸಮಸ್ತ ಜನಾಂಗಗಳ ಮೇಲೆ ಬರಮಾಡಿದನು.

2 ದಿನವೃತ್ತಾಂತ 17:11

ಇದಲ್ಲದೆ ಫಿಲಿಷ್ಟಿಯರಲ್ಲಿ ಕೆಲವರು ಯೆಹೋ ಷಾಫಾಟನಿಗೆ ಕಾಣಿಕೆಗಳನ್ನೂ ಕಪ್ಪದ ಹಣವನ್ನೂ ತಂದರು, ಅರಬ್ಬಿ ದೇಶದವರು ತಮ್ಮ ಮಂದೆಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ ಏಳು ಸಾವಿರದ ಏಳು ನೂರು ಹೋತಗಳನ್ನೂ ತಂದರು.

2 ದಿನವೃತ್ತಾಂತ 20:1

ಇದರ ತರುವಾಯ ಏನಾಯಿತಂದರೆ, ಮೋವಾಬಿನ ಮಕ್ಕಳೂ ಅಮ್ಮೋನಿನ ಮಕ್ಕಳೂ ಅಮ್ಮೋನ್ಯರ ಕೊಡ ಇತರರೂ ಯೆಹೋ ಷಾಫಾಟನ ಮೇಲೆ ಯುದ್ಧಮಾಡಲು ಬಂದರು.

2 ದಿನವೃತ್ತಾಂತ 27:5

ಇವನು ಅಮ್ಮೋನಿಯರ ಅರಸನ ಸಂಗಡ ಯುದ್ಧಮಾಡಿ ಅವ ನನ್ನು ಜಯಿಸಿದನು. ಆದ್ದರಿಂದ ಅಮ್ಮೋನನ ಮಕ್ಕಳು ಅದೇ ವರುಷದಲ್ಲಿ ನೂರು ಬೆಳ್ಳಿ ತಲಾಂತುಗಳನ್ನೂ ಹತ್ತುಸಾವಿರ ಅಳತೆಯ ಗೋಧಿಯನ್ನೂ ಹತ್ತು ಸಾವಿರ ಕೋರ್‌ ಜವೆ ಗೋಧಿಯನ್ನೂ ಅವನಿಗೆ ಕೊಟ್ಟರು. ಅಮ್ಮೋನನ ಮಕ್ಕಳು ಎರಡನೇ ವರುಷದಲ್ಲಿಯೂ ಮೂರನೇ ವರುಷದಲ್ಲಿಯೂ ಅದೇ ಪ್ರಕಾರ ಅವನಿಗೆ ಕೊಟ್ಟರು.

ಮತ್ತಾಯ 4:24

ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.

Interlinear

Choose Theme