ಇವನು ಅಮ್ಮೋನಿಯರ ಅರಸನ ಸಂಗಡ ಯುದ್ಧಮಾಡಿ ಅವ ನನ್ನು ಜಯಿಸಿದನು. ಆದ್ದರಿಂದ ಅಮ್ಮೋನನ ಮಕ್ಕಳು ಅದೇ ವರುಷದಲ್ಲಿ ನೂರು ಬೆಳ್ಳಿ ತಲಾಂತುಗಳನ್ನೂ ಹತ್ತುಸಾವಿರ ಅಳತೆಯ ಗೋಧಿಯನ್ನೂ ಹತ್ತು ಸಾವಿರ ಕೋರ್ ಜವೆ ಗೋಧಿಯನ್ನೂ ಅವನಿಗೆ ಕೊಟ್ಟರು. ಅಮ್ಮೋನನ ಮಕ್ಕಳು ಎರಡನೇ ವರುಷದಲ್ಲಿಯೂ ಮೂರನೇ ವರುಷದಲ್ಲಿಯೂ ಅದೇ ಪ್ರಕಾರ ಅವನಿಗೆ ಕೊಟ್ಟರು.
Cross references
ಕೆಲವು ದಿವಸಗಳಾದ ಮೇಲೆ ಆದದ್ದೇನಂದರೆ, ಅಮ್ಮೋನನ ಮಕ್ಕಳು ಇಸ್ರಾಯೇಲಿನ ಮೇಲೆ ಯುದ್ಧ ಮಾಡಿದರು.
ಇದರ ತರುವಾಯ ಏನಾಯಿತಂದರೆ, ಅಮ್ಮೋನನ ಮಕ್ಕಳ ಅರಸನು ಸತ್ತನು; ಅವನ ಮಗನಾದ ಹಾನೂನನು ಅವನಿಗೆ ಬದಲಾಗಿ ಅರಸನಾದನು.
ಇದರ ತರುವಾಯ ಏನಾಯಿತಂದರೆ, ಮೋವಾಬಿನ ಮಕ್ಕಳೂ ಅಮ್ಮೋನಿನ ಮಕ್ಕಳೂ ಅಮ್ಮೋನ್ಯರ ಕೊಡ ಇತರರೂ ಯೆಹೋ ಷಾಫಾಟನ ಮೇಲೆ ಯುದ್ಧಮಾಡಲು ಬಂದರು.
ಇದಲ್ಲದೆ ಅಮ್ಮೋನ್ಯರು ಉಜ್ಜೀಯನಿಗೆ ಕಾಣಿಕೆ ಗಳನ್ನು ಕೊಟ್ಟರು. ಆದದರಿಂದ ಅವನ ಹೆಸರು ಐಗುಪ್ತದ ಮೇರೆಯ ವರೆಗೂ ಬಹಳವಾಗಿ ಹಬ್ಬಿತು. ಅವನು ತನ್ನನ್ನು ಬಹಳವಾಗಿ ಬಲಪಡಿಸಿಕೊಂಡನು.
ಬಾಬೆಲಿಗೆ ವಿರೋಧವಾಗಿಯೂ ಕಸ್ದೀಯರ ದೇಶಕ್ಕೆ ವಿರೋಧವಾಗಿಯೂ ಕರ್ತನು ಪ್ರವಾದಿಯಾದ ಯೆರೆವಿಾಯನ ಮೂಲಕ ಹೇಳಿಸಿದ ವಾಕ್ಯವು.