ಆಗ ಹೆಸರಿನಿಂದ ಹೇಳಲ್ಪಟ್ಟ ಆ ಮನು ಷ್ಯರು ಎದ್ದು ಸೆರೆಯವರನ್ನು ತೆಗೆದುಕೊಂಡು ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವದಕ್ಕೂ ಕುಡಿಯುವದಕ್ಕೂ ಕೊಟ್ಟು ಅವರ ತಲೆಗಳಿಗೆ ಎಣ್ಣೆ ಯನ್ನು ಹಚ್ಚಿ ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ಕರಕೊಂಡು ಹೋಗಿ ಸಮಾರ್ಯಕ್ಕೆ ಹಿಂತಿರುಗಿದರು.
Cross references
ದಕ್ಷಿಣವನ್ನೂ ಖರ್ಜೂರಗಳ ಪಟ್ಟಣ ವಾದ ಯೆರಿಕೋವಿನ ತಗ್ಗೆಂಬ ಬೈಲನ್ನೂ ಚೋಗ ರೂರಿನ ಪರ್ಯಂತರಕ್ಕೆ ತೋರಿಸಿದನು.
ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು ಯೂದನ ಮಕ್ಕಳ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೂದದ ಅರಣ್ಯಕ್ಕೆ ಬಂದು ಜನರ ಸಂಗಡ ವಾಸವಾಗಿದ್ದರು.
ಅದಕ್ಕವನು--ಹೊಡೆಯಬೇಡ; ನೀನು ನಿನ್ನ ಕತ್ತಿಯಿಂದಲೂ ನಿನ್ನ ಬಿಲ್ಲಿನಿಂದಲೂ ಸೆರೆಯಾಗಿ ತೆಗೆದುಕೊಳ್ಳುವವರನ್ನು ಹೊಡೆಯುತ್ತೀ ಯೋ? ರೊಟ್ಟಿಯನ್ನೂ ನೀರನ್ನೂ ಇವರ ಮುಂದೆ ಇಡು; ಅವರು ತಿಂದು ಕುಡಿದು ತಮ್ಮ ಯಜಮಾನನ ಬಳಿಗೆ ಹೋಗಲಿ ಅಂದನು.
ಆಗ ಅರಸನು ಅವರಿಗೋಸ್ಕರ ದೊಡ್ಡ ಔತಣ ಮಾಡಿಸಿದನು. ಅವರು ತಿಂದು ಕುಡಿದ ತರುವಾಯ ಅವರನ್ನು ಕಳುಹಿಸಿ ಬಿಟ್ಟನು. ಅವರು ತಮ್ಮ ಯಜಮಾನನ ಬಳಿಗೆ ಹೋದರು. ಅರಾಮ್ಯರ ದಂಡುಗಳು ಇಸ್ರಾಯೇಲ್ ದೇಶದಲ್ಲಿ ತಿರಿಗಿ ಬಾರದೆ ಹೋದವು.
ಆಗ ಎಫ್ರಾಯಾಮನ ಮಕ್ಕಳ ಶ್ರೇಷ್ಠರಲ್ಲಿ ಕೆಲವರಾಗಿರುವ ಯೆಹೋಹಾನಾನನ ಮಗನಾದ ಅಜರ್ಯನೂ ಮೆಷಿ ಲ್ಲೇಮೋತನ ಮಗನಾದ ಬೆರಕ್ಯನೂ ಶಲ್ಲೂಮನ ಮಗನಾದ ಹಿಜ್ಕಿಯನೂ ಹದ್ಲೈಯನ ಮಗನಾದ ಅಮಾಸನೂ ಯುದ್ಧದಿಂದ ಬಂದವರಿಗೆ ವಿರೋಧ ವಾಗಿ ಎದ್ದು
ಗರ್ಭದಲ್ಲಿ ನನ್ನನ್ನು ಉಂಟುಮಾಡಿ ದಾತನು ಅವನನ್ನೂ ಉಂಟು ಮಾಡಿದ್ದಾನಲ್ಲಾ? ನಮ್ಮನ್ನು ಗರ್ಭದಲ್ಲಿ ರೂಪಿಸಿದಾತನು ಒಬ್ಬನೇ ಅಲ್ಲವೋ?
ನಿನ್ನ ಶತ್ರು ಹಸಿದಿದ್ದರೆ ತಿನ್ನುವ ದಕ್ಕೆ ಅವನಿಗೆ ರೊಟ್ಟಿ ಕೊಡು; ಅವನು ಬಾಯಾರಿದ್ದರೆ ಕುಡಿಯುವದಕ್ಕೆ ನೀರು ಕೊಡು.
ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?
ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ;
ಆದರೆ ಕೇಳುವವರಾದ ನಿಮಗೆ ನಾನು ಹೇಳುವ ದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ.
ಆತನು ದಡಕ್ಕೆ ಸೇರಿದಾಗ ಬಹು ಕಾಲದಿಂದ ದೆವ್ವಗಳು ಹಿಡಿದು ಬಟ್ಟೆ ಧರಿಸಿಕೊಳ್ಳದೆಯೂ ಯಾವ ಮನೆಯಲ್ಲಿ ವಾಸಿ ಸದೆಯೂ ಸಮಾಧಿಗಳಲ್ಲಿ ಇದ್ದ ಒಬ್ಬ ಮನುಷ್ಯನು ಪಟ್ಟಣದೊಳಗಿಂದ ಹೊರಗೆ ಬಂದು ಅಲ್ಲಿ ಆತನನ್ನು ಸಂಧಿಸಿದನು.
ಆಗ ಜನರು ನಡೆದ ಸಂಗತಿ ಏನೆಂದು ನೋಡುವದಕ್ಕಾಗಿ ಹೊರಟು ಹೋಗಿ ಯೇಸುವಿನ ಬಳಿಗೆ ಬಂದು ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿ ಯುಳ್ಳವನಾಗಿ ಯೇಸುವಿನ ಪಾದಗಳ ಬಳಿಯಲ್ಲಿ ಕೂತಿರುವದನ್ನು ಕಂಡು ಭಯಪಟ್ಟರು.
ಪೇತ್ರನು ಎದು ಅವರ ಜೊತೆಯಲ್ಲಿ ಹೋದನು. ಅವನು ಬಂದಾಗ ಅವರು ಅವನನ್ನು ಮೇಲಂತಸ್ತಿನ ಕೊಠಡಿಗೆ ಕರೆದು ಕೊಂಡುಹೋದರು. ಅಲ್ಲಿ ವಿಧವೆಯರೆಲ್ಲರೂ ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಮೇಲಂಗಿಗಳನ್ನೂ ಒಳಂಗಿಗಳನ್ನೂ ತೋರಿಸಿ
ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
ಆದದರಿಂದ ಬಲವುಳ್ಳವರಾದ ನಾವು ನಮ್ಮನ್ನೇ ಸಂತೋಷಪಡಿಸಿಕೊಳ್ಳದೆ ದುರ್ಬಲರ ಬಲಹೀನತೆಗಳನ್ನು ಸಹಿಸಿಕೊಳ್ಳತಕ್ಕದ್ದು.
ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡ ವಳೂ ಆಗಿರಬೇಕು; ಆಕೆಯು ಮಕ್ಕಳನ್ನು ಸಾಕಿದವಳಾ ಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ಪರಿಶುದ್ಧರ ಪಾದಗಳನ್ನು ತೊಳೆದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯ ಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲಿ ಆಸಕ್ತಿಯುಳ್ಳವಳಾಗಲಿ ಆಗಿರ
ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ
ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?