Home Bibles 2 ದಿನವೃತ್ತಾಂತ 28:20 · ಕನ್ನಡ ಬೈಬಲ್
2 ದಿನವೃತ್ತಾಂತ 28:20 · ಕನ್ನಡ ಬೈಬಲ್

ಆಗ ಅಶ್ಶೂರಿನ ಅರಸನಾದ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು ಅವನನ್ನು ಬಲಪಡಿಸದೆ ಬಾಧೆಪಡಿಸಿ ದನು.

Cross references

2 ಅರಸುಗಳು 15:29

ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.

2 ಅರಸುಗಳು 16:7

ಆದರೆ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇ ಸೆರನಿಗೆ--ನಾನು ನಿನ್ನ ಸೇವಕನೂ ನಿನ್ನ ಮಗನೂ ಆಗಿದ್ದೇನೆ; ನನಗೆ ವಿರೋಧವಾಗಿ ಎದ್ದ ಅರಾಮ್ಯರ ಅರಸನ ಕೈಗೂ ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ ರಕ್ಷಿಸುವ ಹಾಗೆ ಬರ ಹೇಳು ಅಂದನು.

2 ಅರಸುಗಳು 17:5

ಆಗ ಅಶ್ಶೂರಿನ ಅರಸನು ದೇಶವೆಲ್ಲಾದರ ಮೇಲೆ ಬಂದು, ಸಮಾರ್ಯಕ್ಕೆ ಹೋಗಿ ಅದನ್ನು ಮೂರು ವರುಷಗಳ ವರೆಗೂ ಮುತ್ತಿಗೆ ಹಾಕಿದನು.

1 ದಿನವೃತ್ತಾಂತ 5:26

ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್‌ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.

ಯೆಶಾಯ 7:20

ಅದೇ ದಿನದಲ್ಲಿ ಕರ್ತನು ನದಿಯ ಆಚೆಗಿರುವ ಅಶ್ಯೂರದ ರಾಜನೆಂಬವನಿಂದ ಬಾಡಿಗೆ ಕ್ಷೌರದ ಕತ್ತಿ ಯಿಂದ (ಯೆಹೂದದ) ತಲೆಯನ್ನು ಕಾಲುಕೂದ ಲನ್ನು ಬೋಳಿಸುವನು ಗಡ್ಡವನ್ನು ತೆಗೆದುಬಿಡುವನು.

ಯೆಶಾಯ 30:3

ಆದಕಾರಣ ಫರೋಹನ ಬಲವು ನಿಮಗೆ ನಾಚಿಕೆಯೂ ಐಗುಪ್ತದ ನೆರಳಿನ ಭರವಸದಿಂದ ನಿಮ ಗೆ ನಿಂದೆಯೂ ಉಂಟಾಗುವದು.

ಯೆಶಾಯ 30:16

ಆದರೆ ನೀವು ಬೇಡವೇ ಬೇಡ, ನಾವು ಕುದುರೆಗಳ ಮೇಲೆ ಓಡುವೆವು ಅಂದುಕೊಂಡಿದ್ದರಿಂದ ನೀವು ಓಡೇ ಹೋಗುವಿರಿ, ಮತ್ತು--ನಾವು ವೇಗವಾಗಿ ಸವಾರಿ ಮಾಡುವೆವು ಅಂದುಕೊಂಡದ್ದರಿಂದ ಆ ವೇಗ ಗಳೇ ನಿಮ್ಮನ್ನು ಅಟ್ಟಿಬಿಡುವವು.

ಯೆರೆಮಿಯ 2:37

ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.

ಹೊಶೇಯ 5:13

ಎಫ್ರಾಯಾಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ ಎಫ್ರಾಯೀಮ್‌ ಅಶ್ಯೂರಕ್ಕೆ ಹೋಗಿ ಅರಸನಾದ ಯಾರೇಬನ ಬಳಿಗೆ ಕಳುಹಿಸಿತು; ಆದಾಗ್ಯೂ ಅವನು ನಿಮ್ಮನ್ನು ಸ್ವಸ್ಥಮಾಡ ಲಿಲ್ಲ, ಇಲ್ಲವೆ ನಿಮ್ಮ ಗಾಯವನ್ನು ಗುಣಪಡಿಸಲೂ ಇಲ್ಲ.

Interlinear

Choose Theme