Home Bibles 2 ದಿನವೃತ್ತಾಂತ 28:3 · ಕನ್ನಡ ಬೈಬಲ್
2 ದಿನವೃತ್ತಾಂತ 28:3 · ಕನ್ನಡ ಬೈಬಲ್

ಇದಲ್ಲದೆ ಅವನು ಬೆನ್‌ಹಿನ್ನೋಮ ಮಗನ ತಗ್ಗಿನಲ್ಲಿ ಧೂಪವನ್ನರ್ಪಿಸಿ ಕರ್ತನು ಇಸ್ರಾ ಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯರ ಅಸಹ್ಯಗಳ ಪ್ರಕಾರ ಬೆಂಕಿಯಲ್ಲಿ ತನ್ನ ಮಕ್ಕಳನ್ನು ಸುಟ್ಟನು.

Cross references

ಲೇವ್ಯಕಾಂಡ 18:21

ನಿನ್ನ ದೇವರ ಹೆಸರನ್ನು ಅಶುದ್ಧಪಡಿಸುವಂತೆ ನಿನ್ನ ಸಂತಾನವನ್ನು ಮೋಲೆಕನಿಗೆ ಬೆಂಕಿಯ ಮೂಲಕ ಅರ್ಪಿಸಬಾರದು; ನಾನೇ ಕರ್ತನು.

ದ್ವಿತೀಯೋಪದೇಶಕಾಂಡ 12:31

ನಿನ್ನ ದೇವರಾದ ಕರ್ತ ನಿಗೆ ಹಾಗೆ ಮಾಡಬೇಡ. ಯಾಕಂದರೆ ಕರ್ತನು ಅಸಹ್ಯಿಸಿ ಹಗೆಮಾಡುವದನ್ನೆಲ್ಲಾ ಅವರು ತಮ್ಮ ದೇವರುಗಳಿಗೆ ಮಾಡಿದ್ದಾರೆ; ತಮ್ಮ ಕುಮಾರ ಕುಮಾರ್ತೆ ಯರನ್ನು ಸಹ ತಮ್ಮ ದೇವರುಗಳಿಗೆ ಬೆಂಕಿಯಲ್ಲಿ ಸುಟ್ಟುಬಿಟ್ಟಿದ್ದಾರೆ.ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.

ದ್ವಿತೀಯೋಪದೇಶಕಾಂಡ 18:9

ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದಾಗ ಆ ಜನಾಂಗಗಳು ಮಾಡುವ ಅಸಹ್ಯಗಳ ಪ್ರಕಾರ ಮಾಡುವದಕ್ಕೆ ನೀನು ಕಲಿಯ ಬಾರದು.

ದ್ವಿತೀಯೋಪದೇಶಕಾಂಡ 18:10

ತನ್ನ ಮಗನನ್ನು ಇಲ್ಲವೆ ಮಗಳನ್ನು ಬೆಂಕಿದಾಟಿಸುವವನೂ ಕಣಿಹೇಳುವವನೂ ಮೇಘಮಂತ್ರದವನೂ ಸರ್ಪಮಂತ್ರದವನೂ ಮಾಟಗಾರನೂ

ಯೆಹೋಶುವ 15:8

ಅಲ್ಲಿಂದ ಯೆಬೂಸಿ ಯರು ವಾಸವಾಗಿರುವ ಯೆರೂಸಲೇಮಿಗೆ ದಕ್ಷಿಣ ಪಾರ್ಶ್ವವಾಗಿ ಹಿನ್ನೋಮನ ತಗ್ಗನ್ನು ದಾಟಿ ಉತ್ತರಕ್ಕಿರುವ ಯೆಬೂಸಿಯರ ತಗ್ಗಿನ ಕಡೆಯಲ್ಲಿ ಪಶ್ಚಿಮಕ್ಕಾಗಿ ಹಿನ್ನೋಮ್‌ ತಗ್ಗಿನ ಮುಂದಿರುವ ಬೆಟ್ಟದ ತುದಿ ವರೆಗೂ

ನ್ಯಾಯಾಧಿಪತಿಗಳು 2:11

ಇಸ್ರಾಯೇಲ್‌ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ಬಾಳನನ್ನು ಸೇವಿಸಿ

ನ್ಯಾಯಾಧಿಪತಿಗಳು 2:13

ಅವರು ಕರ್ತನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದರು.

2 ಅರಸುಗಳು 16:3

ಅವನು ತನ್ನ ತಂದೆಯಾದ ದಾವೀದನ ಹಾಗೆ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಒಳ್ಳೇಯದನ್ನು ಮಾಡದೆ ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯಜನಾಂಗಗಳ ಅಸಹ್ಯವಾದವುಗಳ ಪ್ರಕಾರ ಅವನು ತನ್ನ ಮಗನನ್ನು ಬೆಂಕಿ ತುಳಿಯ ಮಾಡಿದನು.

2 ಅರಸುಗಳು 23:10

ಯಾವನೂ ತನ್ನ ಮಗನನ್ನಾದರೂ ಮಗಳನ್ನಾದರೂ ಮೋಲೆಕನಿ ಗೋಸ್ಕರ ಬೆಂಕಿದಾಟಿಸದ ಹಾಗೆ ಹಿನ್ನೋಮನ ಮಕ್ಕಳ ತಗ್ಗಿನಲ್ಲಿದ್ದ ತೋಫೆತನ್ನು ಹೊಲೆಮಾಡಿದನು.

2 ದಿನವೃತ್ತಾಂತ 33:2

ಆದರೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಜನಾಂಗಗಳ ಅಸಹ್ಯಗಳ ಪ್ರಕಾರವೇ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.

2 ದಿನವೃತ್ತಾಂತ 33:6

ಬೆನ್‌ ಹಿನ್ನೋಮ್‌ ಮಗನ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬೆಂಕಿ ದಾಟುವಂತೆ ಮಾಡಿದನು; ಮೇಘಮಂತ್ರ ಸರ್ಪ ಮಂತ್ರಗಳನ್ನೂ ಮಾಟವನ್ನು ಮಾಡಿದನು; ಯಕ್ಷಿಣಿ ಗಾರರ ಮಂತ್ರಗಾರರ ಬಳಿಯಲ್ಲೂ ವಿಚಾರಿಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸುವಂತೆ ಆತನ ಸಮ್ಮುಖ ದಲ್ಲಿ ಬಹಳವಾಗಿ ಕೆಟ್ಟತನವನ್ನು ಮಾಡಿದನು.

2 ದಿನವೃತ್ತಾಂತ 36:14

ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.

ಕೀರ್ತನೆಗಳು 106:37

ತಮ್ಮ ಗಂಡು ಹೆಣ್ಣು ಮಕ್ಕಳನ್ನೂ ದೆವ್ವಗಳಿಗೆ ಅರ್ಪಿಸಿದರು.

ಯೆರೆಮಿಯ 2:34

ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ.

ಯೆರೆಮಿಯ 19:2

ಆಗ ಪಷ್ಹೂರನು ಪ್ರವಾದಿಯಾದ ಯೆರೆವಿಾಯನನ್ನು ಹೊಡೆದು ಅವನನ್ನು ಕರ್ತನ ಆಲಯದ ಬಳಿಯಲ್ಲಿದ್ದ ಬೆನ್ಯಾವಿಾ ನನ ಮೇಲ್ಭಾಗಲಲ್ಲಿದ್ದ ಕೋಳದಲ್ಲಿ ಹಾಕಿಸಿದನು.

ಯೆರೆಮಿಯ 19:13

ಕರ್ತನಿಗೆ ಹಾಡಿರಿ; ಕರ್ತನನ್ನು ಸ್ತುತಿ ಸಿರಿ; ಆತನು ಬಡವನ ಪ್ರಾಣವನ್ನು ಕೇಡು ಮಾಡುವ ವರ ಕೈಯಿಂದ ತಪ್ಪಿಸಿದ್ದಾನೆ.

ಯೆಹೆಜ್ಕೇಲ 16:20

ಇದಾದ ಮೇಲೆ ನನಗೆ ಹುಟ್ಟಿದ್ದ ನನ್ನ ಕುಮಾರರನ್ನೂ ಕುಮಾರ್ತೆ ಯರನ್ನೂ ಅವರ ಆಹಾರಕ್ಕಾಗಿ ಅರ್ಪಿಸಿದಿ. ಈ ನಿನ್ನ ವ್ಯಭಿಚಾರ ಸಾಮಾನ್ಯವಾದದ್ದಲ್ಲ,

ಯೆಹೆಜ್ಕೇಲ 16:21

ನೀನು ನನ್ನ ಮಕ್ಕಳನ್ನು ಕೊಂದು ಅವರಿಗೆ ಬೆಂಕಿಯನ್ನು ದಾಟುವ ಹಾಗೆ ಒಪ್ಪಿಸಿದಿಯಲ್ಲಾ;

ಮೀಕ 6:7

ಸಾವಿರ ಟಗರುಗಳಿಗಾದರೂ ಎಣ್ಣೆಯ ಹತ್ತು ಸಾವಿರ ನದಿಗಳಿಗಾದರೂ ಕರ್ತನು ಮೆಚ್ಚು ವನೋ? ನನ್ನ ದ್ರೋಹಕ್ಕಾಗಿ ನನ್ನ ಚೊಚ್ಚಲ ಮಗ ನನ್ನೂ ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲ ವನ್ನೂ ಕೊಡಲೋ?

Interlinear

Choose Theme