ಅವರು ಮೊದಲನೇ ತಿಂಗಳಿನ ಮೊದಲನೇ ದಿವಸ ದಲ್ಲಿ ಪರಿಶುದ್ಧ ಮಾಡಲು ಆರಂಭಿಸಿ ಆ ತಿಂಗಳ ಎಂಟನೇ ದಿವಸದಲ್ಲಿ ಕರ್ತನ ದ್ವಾರಾಂಗಳದ ವರೆಗೂ ಬಂದರು. ಹೀಗೆಯೇ ಎಂಟು ದಿವಸಗಳಲ್ಲಿ ಕರ್ತನ ಮನೆಯನ್ನು ಪರಿಶುದ್ಧಮಾಡಿ ಅದನ್ನು ಮೊದಲನೇ ತಿಂಗಳಿನ ಹದಿನಾರನೇ ದಿವಸದಲ್ಲಿ ತೀರಿಸಿದರು.
Cross references
ಈ ತಿಂಗಳೇ ನಿಮಗೆ ಆದಿಮಾಸವಾಗಿರಬೇಕು. ಇದು ನಿಮಗೆ ವರುಷದ ಮೊದಲನೆಯ ತಿಂಗಳಾಗಿರುವದು.
ಮನೆಯ ಮಂದಿರದ ಮುಂದೆ ದ್ವಾರಾಂಗಳವೂ ಇತ್ತು ಅದು ಮನೆಯ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು; ಮನೆಯ ಮುಂದೆ ಇರುವ ಅದರ ಅಗಲವು ಹತ್ತು ಮೊಳವು.
ಆಗ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ -- ದ್ವಾರಾಂಗಳದ ಮಾದರಿಯನ್ನೂ ಅದರ ಮನೆಗಳು, ಉಗ್ರಾಣಗಳು, ಮೇಲಿನ ಕೊಠಡಿ ಗಳು, ಅಂತರಂಗದ ಕೊಠಡಿಗಳು, ಕೃಪಾಸನದ ಸ್ಥಾನವು,
ಮುಂದೆ ಇರುವ ದ್ವಾರಾಂಗಳ ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು. ಮತ್ತು ನೂರ ಇಪ್ಪತ್ತು ಮೊಳ ಎತ್ತರವಾಗಿತ್ತು. ಅವನು ಅದನ್ನು ಒಳಗಡೆ ಶುದ್ಧ ಬಂಗಾರದಿಂದ ಹೊದಿಗಿಸಿದನು.
ಅವನು ತನ್ನ ಆಳ್ವಿಕೆಯ ಮೊದಲನೇ ವರುಷದ ಮೊದಲನೇ ತಿಂಗಳಲ್ಲಿ ಕರ್ತನ ಮನೆಯ ಬಾಗಲು ಗಳನ್ನು ತೆರೆದು ಅವುಗಳನ್ನು ಭದ್ರಮಾಡಿಸಿದನು.
ಇದಲ್ಲದೆ ಅವರು ದ್ವಾರಾಂಗಳದ ಬಾಗಲುಗಳನ್ನು ಮುಚ್ಚಿ ದೀಪಗಳನ್ನು ಆರಿಸಿ ಇಸ್ರಾಯೇಲಿನ ದೇವರಿಗೆ ಪರಿಶುದ್ಧ ಸ್ಥಾನದಲ್ಲಿ ಧೂಪವನ್ನು ಸುಡದೆ, ದಹನಬಲಿಗಳನ್ನು ಅರ್ಪಿ ಸದೆ ಹೋದರು.