Home Bibles ☰ Books 2 ದಿನವೃತ್ತಾಂತ 29:19 · ಕನ್ನಡ ಬೈಬಲ್
2 ದಿನವೃತ್ತಾಂತ 29:19 · ಕನ್ನಡ ಬೈಬಲ್

ಇದಲ್ಲದೆ ಅರಸನಾದ ಆಹಾಜನು ಆಳಿದಾಗ ತನ್ನ ಅಕೃತ್ಯದಿಂದ ಬಿಸಾಡಿದ ಎಲ್ಲಾ ಸಾಮಾನುಗಳನ್ನು ಸಿದ್ಧ ಮಾಡಿ ಪರಿಶುದ್ಧಮಾಡಿದೆವು; ಇಗೋ, ಅವು ಕರ್ತನ ಬಲಿಪೀಠದ ಮುಂದಿರುತ್ತವೆ ಎಂದು ಹೇಳಿದರು.

Cross references

2 ಅರಸುಗಳು 16:14

ಆದರೆ ಕರ್ತನ ಸಮ್ಮುಖದಲ್ಲಿದ್ದ ಹಿತ್ತಾಳೆಯ ಬಲಿಪೀಠವನ್ನು ಅವನು ಮನೆಯ ಮುಂಭಾಗದಿಂದಲೂ ಕರ್ತನ ಮನೆಗೂ ಬಲಿಪೀಠಕ್ಕೂ ಮಧ್ಯದಿಂದಲೂ ತಂದು ಅದನ್ನು ಈ ಬಲಿಪೀಠಕ್ಕೆ ಉತ್ತರ ಪಾರ್ಶ್ವದಲ್ಲಿ ಇಟ್ಟನು.

2 ಅರಸುಗಳು 16:17

ಇದ ಲ್ಲದೆ ಅರಸನಾದ ಆಹಾಜನು ಆಧಾರದ ಅಂಚುಗಳನ್ನು ಕೊಯ್ದು ಗಂಗಾಳವನ್ನು ಅದರ ಮೇಲಿನಿಂದ ತೆಗೆದು ಸಮುದ್ರ ಎಂಬ ಪಾತ್ರೆಯನ್ನು ಅದರ ಕೆಳಗಿರುವ ತಾಮ್ರದ ಎತ್ತುಗಳ ಮೇಲಿನಿಂದ ಇಳಿಸಿ ಅದನ್ನು ಕಲ್ಲುಗಳ ಕಟ್ಟೆಯ ಮೇಲೆ ಇಟ್ಟನು.

2 ದಿನವೃತ್ತಾಂತ 28:24

ಇದಲ್ಲದೆ ಆಹಾಜನು ದೇವರ ಮನೆಯ ಸಾಮಾನುಗಳನ್ನು ಕೂಡಿಸಿ ದೇವರ ಆಲಯದ ಸಾಮಾನುಗಳನ್ನು ತುಂಡುಗಳಾಗಿ ಕತ್ತರಿಸಿ ಕರ್ತನ ಮನೆಯ ಬಾಗಿಲುಗಳನ್ನು ಮುಚ್ಚಿಬಿಟ್ಟು ಯೆರೂ ಸಲೇಮಿನ ಸಮಸ್ತ ಮೂಲೆಗಳಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.

Interlinear

Choose Theme