Home Bibles 2 ದಿನವೃತ್ತಾಂತ 29:20 · ಕನ್ನಡ ಬೈಬಲ್
2 ದಿನವೃತ್ತಾಂತ 29:20 · ಕನ್ನಡ ಬೈಬಲ್

ಆಗ ಅರಸನಾದ ಹಿಜ್ಕೀಯನು ಉದಯದಲ್ಲಿ ಎದ್ದು ಪಟ್ಟಣದ ಪ್ರಧಾನರನ್ನು ಕೂಡಿಸಿ ಕರ್ತನ ಆಲಯಕ್ಕೆ ಹೋದನು.

Cross references

ಆದಿಕಾಂಡ 21:14

ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಕಾಡಿನಲ್ಲಿ ಅಲೆದಾಡುವವ ಳಾದಳು.

ಆದಿಕಾಂಡ 22:3

ಅಬ್ರಹಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಗೆ ತಡಿಹಾಕಿಸಿ ತನ್ನ ಯುವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದು ಕೊಂಡು ದಹನಬಲಿಗಾಗಿ ಕಟ್ಟಿಗೆಗಳನ್ನು ಒಡಿಸಿ ಎದ್ದು ದೇವರು ತನಗೆ ಹೇಳಿದ ಸ್ಥಳಕ್ಕೆ ಹೋದನು.

ನಿರ್ಗಮಕಾಂಡ 24:4

ಮೋಶೆಯು ಕರ್ತನ ಮಾತುಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ಅನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.

ಯೆಹೋಶುವ 6:12

ಯೆಹೋಶುವನು ಬೆಳಿಗ್ಗೆ ಎದ್ದನು; ಯಾಜಕರು ಕರ್ತನ ಮಂಜೂಷವನ್ನು ತೆಗೆದುಕೊಂಡರು.

2 ದಿನವೃತ್ತಾಂತ 1:2

ಸೊಲೊಮೋ ನನು ಸಮಸ್ತ ಇಸ್ರಾಯೇಲ್ಯರೊಡನೆಯೂ ಸಹಸ್ರ ಶತಾಧಿಪತಿಗಳೊಡನೆಯೂ ನ್ಯಾಯಾಧಿಪತಿಗಳೊ ಡನೆಯೂ ಪ್ರಧಾನ ಪಿತೃಗಳೊಡನೆಯೂ ಇಸ್ರಾಯೇಲಿನಲ್ಲಿರುವ ಸಮಸ್ತ ಪ್ರಭುಗಳೊಡನೆಯೂ ಮಾತ ನಾಡಿದನು.

ಯೆರೆಮಿಯ 25:4

ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ನೀವು ನನಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟ ನನ್ನ ನ್ಯಾಯಪ್ರಮಾಣದಂತೆ ನಡ ಕೊಳ್ಳದೆ

Interlinear

Choose Theme