Home Bibles 2 ದಿನವೃತ್ತಾಂತ 31:4 · ಕನ್ನಡ ಬೈಬಲ್
2 ದಿನವೃತ್ತಾಂತ 31:4 · ಕನ್ನಡ ಬೈಬಲ್

ಯಾಜಕರೂ ಲೇವಿಯರೂ ಕರ್ತನ ನ್ಯಾಯಪ್ರಮಾಣದಲ್ಲಿ ಬಲ ಗೊಳ್ಳುವ ನಿಮಿತ್ತ ಅವರಿಗೆ ತಕ್ಕ ಭಾಗವನ್ನು ಕೊಡ ಬೇಕೆಂದು ಯೆರೂಸಲೇಮಿನಲ್ಲಿರುವ ಜನರಿಗೆ ಅವನು ಆಜ್ಞಾಪಿಸಿದನು.

Cross references

ಲೇವ್ಯಕಾಂಡ 27:30

ಭೂಮಿಯ ಬೀಜದಲ್ಲಾಗಲಿ ಮರದ ಫಲದ ಲ್ಲಾಗಲಿ ಹತ್ತನೇ ಪಾಲೆಲ್ಲಾ ಕರ್ತನದೇ. ಅದು ಕರ್ತನಿಗೆ ಪರಿಶುದ್ಧವಾದದ್ದು.

ಅಂಕೆಗಳ ಪುಸ್ತಕ 18:8

ಕರ್ತನು ಮಾತನಾಡಿ ಆರೋನನಿಗೆ--ಇಗೋ, ನಾನು ನಿನಗೆ ಎತ್ತುವ ಅರ್ಪಣೆಗಳ ಅಪ್ಪಣೆಗಳನ್ನು ಕೊಟ್ಟಿದ್ದೇನೆ. ಇಸ್ರಾಯೇಲ್‌ ಮಕ್ಕಳು ಪರಿಶುದ್ಧ ಮಾಡುವ ಎಲ್ಲಾದರಲ್ಲಿ ನಾನು ಅವುಗಳನ್ನು ಅಭಿಷೇಕ ಕ್ಕೋಸ್ಕರ ನಿನಗೂ ನಿನ್ನ ಮಕ್ಕಳಿಗೂ ನಿತ್ಯಕಟ್ಟಳೆಯಾಗಿ ಕೊಟ್ಟಿದ್ದೇನೆ.

ಅಂಕೆಗಳ ಪುಸ್ತಕ 18:26

ನೀನು ಲೇವಿಯರಿಗೆ ಹೀಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್‌ ಮಕ್ಕಳ ಕಡೆಯಿಂದ ನಾನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟ ಹತ್ತನೆಯ ಒಂದು ಪಾಲನ್ನು ತಕ್ಕೊಂಡರೆ ನೀವು ಅದರಲ್ಲಿ ಕರ್ತನಿಗೆ ಹತ್ತನೆಯ ದರಿಂದ ಹತ್ತನೆಯದನ್ನು ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.

ದ್ವಿತೀಯೋಪದೇಶಕಾಂಡ 18:8

ಅವರು ಪಿತ್ರಾರ್ಜಿತ ಆಸ್ತಿಯನ್ನು ಮಾರಿದ್ದಲ್ಲದೆ ಸಮವಾದ ಭಾಗಗಳನ್ನು ತಿನ್ನಬೇಕು.

2 ದಿನವೃತ್ತಾಂತ 31:16

ಲೆಕ್ಕ ದಲ್ಲಿ ಬರೆಯಲ್ಪಟ್ಟ ಮೂರು ವರುಷ ಪ್ರಾಯ ಮೊದಲು ಗೊಂಡು ಮೇಲಿರುವ ಗಂಡು ಮಕ್ಕಳು ಹೊರತಾಗಿ ಕರ್ತನ ಮನೆಯಲ್ಲಿ ಪ್ರವೇಶಿಸುವವರೆಲ್ಲರಿಗೆ ಅವರ ಕೆಲಸಗಳಲ್ಲಿ ಅವರ ಸರತಿಗಳ ಪ್ರಕಾರ ಅವರ ಸೇವೆಗೆ ಅವರವರ ದಿನದ ಭಾಗವನ್ನು ಕೊಡುವದಕ್ಕೂ

ನೆಹೆಮ್ಯ 13:10

ಲೇವಿಯರ ಪಾಲುಗಳು ಅವರಿಗೆ ಕೊಡಲಿಲ್ಲ ವೆಂದು ನನಗೆ ತಿಳಿಯಿತು. ಯಾಕಂದರೆ ಸೇವೆಯನ್ನು ಮಾಡುವ ಲೇವಿಯರೂ ಹಾಡುಗಾರರೂ ತಮ್ಮ ತಮ್ಮ ಹೊಲಕ್ಕೆ ಓಡಿಹೋಗುತ್ತಿದ್ದರು.

ನೆಹೆಮ್ಯ 13:12

ಆಗ ಯೆಹೂದದವರೆಲ್ಲರು ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಇವುಗಳಲ್ಲಿ ಹತ್ತರಲೊಂದು ಪಾಲು ಕೊಠಡಿ ಗಳಲ್ಲಿ ತಂದರು.

ಮಲಾಕಿ 2:7

ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.

ಮಲಾಕಿ 3:8

ಮನುಷ್ಯನು ದೇವರದನ್ನು ಕಳ್ಳತನ ಮಾಡುವನೋ? ಆದರೆ ನೀವು ನನ್ನದನ್ನು ಕಳ್ಳತನ ಮಾಡಿದ್ದೀರಿ; ಆದರೆ ನೀವು--ಯಾವದರಲ್ಲಿ ನಿನ್ನದನ್ನು, ಕಳ್ಳತನ ಮಾಡಿದ್ದೇವೆಂದು ಅನ್ನುತ್ತೀರಿ? ದಶಮಭಾಗ ಮತ್ತು ಅರ್ಪಣೆಗಳನ್ನೇ.

ಮಲಾಕಿ 3:10

ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

1 ಕೊರಿಂಥದವರಿಗೆ 9:9

ಕಣತುಳಿಯುವ ಎತ್ತಿನ ಬಾಯನ್ನು ನೀನು ಕಟ್ಟಬಾರದು ಎಂದು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದದೆ. ದೇವರು ಚಿಂತಿಸು ವದು ಎತ್ತುಗಳಿಗಾಗಿಯೋ?

ಗಲಾತ್ಯದವರಿಗೆ 6:6

ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶ ಮಾಡುವವನಿಗೆ ತನಿಗರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.

Interlinear

Choose Theme