ಮನುಷ್ಯರ ಕೈ ಕೆಲಸವಾದ ಭೂಮಿಯ ಜನಗಳ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.
Cross references
ಅಲ್ಲಿ ನೀವು ಮನುಷ್ಯರ ಕೈಕೆಲಸವಾದ ಅಂದರೆ ನೋಡದೆಯೂ ಕೇಳದೆಯೂ ಉಣ್ಣದೆಯೂ ಮೂಸಿ ನೋಡದೆಯೂ ಇರುವಂಥ ಮರ ಕಲ್ಲುಗಳಾದ ದೇವರುಗಳನ್ನು ಸೇವಿಸುವಿರಿ.
ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್ ಎಂದು ಹೇಳಲಿ.
ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ ಆ ಕರಡಿಯನ್ನೂ ಕೊಂದು ಬಿಟ್ಟನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಪ್ರತಿಭಟಿಸಿದ್ದರಿಂದ ಅವುಗಳಲ್ಲಿ ಒಂದರ ಹಾಗೆ ಆಗುವನು ಅಂದನು.
ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾ ಯೇಲಿನ ಅರಸನಿಗೆ--ಕರ್ತನು ತಗ್ಗುಗಳ ದೇವರಾ ಗಿರದೆ ಪರ್ವತಗಳ ದೇವರಾಗಿದ್ದಾನೆಂಬದಾಗಿ ಅರಾ ಮ್ಯರು ಹೇಳಿದ್ದರಿಂದ ನಾನು ಕರ್ತನಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನೆಂದು ಕರ್ತನು ಹೇಳುತ್ತಾನೆ ಅಂದನು.
ಅವು ದೇವರುಗಳಲ್ಲ, ಮನುಷ್ಯನ ಕೈಕೆಲಸವಾದ ಕಟ್ಟಿಗೆಯೂ ಕಲ್ಲೂ ಆಗಿದ್ದವು.
ಆದರೆ ನನ್ನ ಹೆಸರು ಅಲ್ಲಿ ಇರುವ ಹಾಗೆ ಯೆರೂಸಲೇಮನ್ನೂ ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ಇರಲು ದಾವೀದನನ್ನೂ ಆದುಕೊಂಡಿದ್ದೇನೆ ಎಂದು ಹೇಳಿದ್ದಾನೆ.
ನಾನೂ ನನ್ನ ಪಿತೃಗಳೂ ದೇಶ ಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶ ಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವುಳ್ಳವುಗಳಾಗಿದ್ದವೋ?
ದೇವ ರಿಗೆ ವಿರೋಧವಾಗಿ ತನ್ನ ಕೈಚಾಚಿ, ಸರ್ವಶಕ್ತನಿಗೆ ವಿರೋಧವಾಗಿ ಬಲಗೊಂಡಿದ್ದಾನೆ.
ದುಷ್ಟನು ದೇವರನ್ನು ಅಲಕ್ಷ್ಯಮಾಡುವದು ಯಾಕೆ? --ನೀನು ಅದನ್ನು ವಿಚಾರಿಸುವದಿಲ್ಲವೆಂದು ಅವನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.
ಅವರು ಕೆಟ್ಟುಹೋದವರು. ಸಂಕಟ ಪಡುವವರ ವಿಷಯ ಕೆಟ್ಟದ್ದಾಗಿಯೂ ಗರ್ವದಿಂದಲೂ ಮಾತನಾಡುತ್ತಾರೆ.
ಓ ಕರ್ತನೇ, ವೈರಿಯು ನಿಂದಿಸಿ ಮೂರ್ಖರು ನಿನ್ನ ನಾಮವನ್ನು ದೂಷಿಸಿದ್ದನ್ನು ಜ್ಞಾಪಿಸಿಕೋ.
ದೇವರು ಯೆಹೂದದಲ್ಲಿ ಪ್ರಸಿದ್ಧವಾಗಿದ್ದಾನೆ; ಇಸ್ರಾಯೇಲಿನಲ್ಲಿ ಆತನ ಹೆಸರು ದೊಡ್ಡದಾಗಿದೆ.
ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು,
ಆತನ ಅಸ್ತಿವಾರವು ಪರಿಶುದ್ಧ ಪರ್ವತಗಳಲ್ಲಿ ಅದೆ.
ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ.
ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ.
ಅನ್ಯಜನಾಂಗಗಳ ವಿಗ್ರಹಗಳು ಬೆಳ್ಳಿ ಬಂಗಾರ ದಿಂದ ಮಾಡಿದ ಮನುಷ್ಯನ ಕೈ ಕೆಲಸವಾಗಿವೆ.
ಓ ದೇವರೇ, ನಿಶ್ಚಯವಾಗಿ ನೀನು ದುಷ್ಟನನ್ನು ಕೊಂದುಹಾಕುವಿ; ರಕ್ತ ಪ್ರಿಯರೇ, ನನ್ನಿಂದ ತೊಲ ಗಿರಿ.
ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ; ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನೇ ಆರಾಧಿಸುವರು.
ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
ಅವು ದೇವರುಗಳಲ್ಲ, ಮರ, ಕಲ್ಲು, ಮನುಷ್ಯರ ಕೈ ಕೆಲಸ ಗಳೇ ಆದದರಿಂದಲೇ ಅವರು ಅವುಗಳನ್ನು ಹಾಳು ಮಾಡಿದರು.
ಅದರ ಇನ್ನೊಂದು ಭಾಗದಲ್ಲಿ ಮಾಂಸವನ್ನು ಉಣ್ಣುವನು; ಮಾಂಸವನ್ನು ಸುಟ್ಟು ತೃಪ್ತಿಹೊಂದುವನು; ಹೌದು, ಅವನು ಚಳಿಕಾಯಿಸಿ ಕೊಳ್ಳುತ್ತಾ--ಆಹಾ! ಬೆಂಕಿ ಯನ್ನು ಕಂಡೆ, ಬೆಚ್ಚಗಾಯಿತು ಅಂದುಕೊಳ್ಳುವನು;
ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿ ದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯು ವೆನು.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಈ ಒಡಂಬಡಿಕೆಯ ಮಾತುಗಳಿಗೆ ವಿಧೇಯನಾಗದ ಮನುಷ್ಯನಿಗೆ ಶಾಪವಿರಲಿ.
ಇದಲ್ಲದೆ, ಕರ್ತನು ನನಗೆ ಹೇಳಿದ್ದೇನಂದರೆ-- ಯೆಹೂದದ ಮನುಷ್ಯರಲ್ಲಿಯೂ ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡು ಬಂದಿದೆ.
ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಮೋವಾಬು ಮತ್ತು ಸೇಯಾರು--ಇಗೋ, ಯೆಹೂ ದನ ಮನೆಯು ಸಮಸ್ತ ಅನ್ಯಜನಾಂಗಗಳ ಹಾಗಿದೆ ಎಂದು ಹೇಳುವರು.
ಹೀಗೆ ನಿಮ್ಮ ಬಾಯಿಂದ ನೀವು ನನಗೆ ವಿರೋಧವಾಗಿ ಕೊಚ್ಚಿದ್ದನ್ನೂ ನನಗೆ ವಿರೋಧವಾಗಿ ನಿಮ್ಮ ಮಾತುಗಳಿಂದ ಹೆಚ್ಚಿಸಿದ್ದನ್ನೂ ನಾನು ಕೇಳಿದ್ದೇನೆ.
ಓ ಸಮಾ ರ್ಯವೇ, ನಿನ್ನ ಬಸವನನ್ನು ನಾನು ತಳ್ಳಿಹಾಕಿದ್ದೇನೆ; ನನ್ನ ಕೋಪವು ಅವರ ಮೇಲೆ ಉರಿಯುತ್ತದೆ; ಅವರು ನಿರಪರಾಧಿಗಳಾಗದೆ ಇರುವದು ಎಷ್ಟರ ವರೆಗೆ?
ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ