Home Bibles 2 ದಿನವೃತ್ತಾಂತ 32:29 · ಕನ್ನಡ ಬೈಬಲ್
2 ದಿನವೃತ್ತಾಂತ 32:29 · ಕನ್ನಡ ಬೈಬಲ್

ಇದಲ್ಲದೆ ತನಗೆ ಪಟ್ಟಣಗಳನ್ನೂ ದನಕುರಿಗಳ ಸ್ವಾಸ್ತ್ಯವನ್ನೂ ಬಹಳವಾಗಿ ಮಾಡಿಕೊಂಡನು. ದೇವರು ಅವನಿಗೆ ಬಹು ಹೆಚ್ಚಾಗಿ ಸಂಪತ್ತನ್ನು ಕೊಟ್ಟನು.

Cross references

ಆದಿಕಾಂಡ 13:2

ಅಬ್ರಾಮನು ದನಗಳಲ್ಲಿಯೂ ಬೆಳ್ಳಿಯಲ್ಲಿಯೂ ಬಂಗಾರದಲ್ಲಿಯೂ ಬಹು ಧನವಂತನಾಗಿದ್ದನು.

ದ್ವಿತೀಯೋಪದೇಶಕಾಂಡ 8:18

ನಿನ್ನ ದೇವ ರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳಬೇಕು; ಈ ಹೊತ್ತು ಇರುವಂತೆ ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ತನ್ನ ಒಡಂಬಡಿಕೆಯನ್ನು ಸ್ಥಾಪಿಸುವ ಹಾಗೆ ಆಸ್ತಿಯನ್ನು ಸಂಪಾದಿಸುವ ಬಲವನ್ನು ನಿನಗೆ ಕೊಡುವಾತನು ಆತನೇ.

1 ಸಮುವೇಲ 2:7

ಕರ್ತನು ಬಡತನವನ್ನು ಐಶ್ವರ್ಯ ವನ್ನು ಕೊಡುವಾತನೂ ತಗ್ಗಿಸುವಾತನೂ ಉನ್ನತಮಾಡು ವಾತನೂ ಆಗಿದ್ದಾನೆ.

1 ದಿನವೃತ್ತಾಂತ 27:29

ಶಾರೋನಿನಲ್ಲಿ ಮೇಯಿಸುವ ದನಗಳ ಮೇಲೆ ಶಾರೋನಿನವನಾದ ಶಿಟ್ರೈ ಇದ್ದನು; ತಗ್ಗುಗಳಲ್ಲಿರುವ ದನಗಳ ಮೇಲೆ ಅದ್ಲೈಯ ಮಗನಾದ ಶಾಫಾಟನು ಇದ್ದನು.

1 ದಿನವೃತ್ತಾಂತ 29:12

ನೀನು ಸಮಸ್ತವನ್ನು ಆಳುವಾತ ನಾಗಿದ್ದೀ. ಶಕ್ತಿಯೂ ಪರಾಕ್ರಮವೂ ನಿನ್ನ ಕೈಯಲ್ಲಿ ಅವೆ. ಎಲ್ಲರಿಗೂ ದೊಡ್ಡಸ್ತಿಕೆಯನ್ನೂ ಬಲವನ್ನೂ ಕೊಡುವದಕ್ಕೆ ನಿನ್ನ ಕೈಯಲ್ಲಿ ಅದೆ.

1 ದಿನವೃತ್ತಾಂತ 29:28

ಅವನು ದಿನಗಳು ತುಂಬಿದವನಾಗಿ ಐಶ್ವರ್ಯದಿಂದಲೂ ಘನದಿಂದಲೂ ತುಂಬಲ್ಪಟ್ಟು ಒಳ್ಳೇ ವೃದ್ಧಪ್ರಾಯದಲ್ಲಿ ಸತ್ತುಹೋದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಆಳಿದನು.

2 ದಿನವೃತ್ತಾಂತ 17:5

ಆದದರಿಂದ ಕರ್ತನು ರಾಜ್ಯವನ್ನು ಅವನ ಕೈಯಲ್ಲಿ ಸ್ಥಿರಪಡಿಸಿದನು. ಯೆಹೂದ ವೆಲ್ಲವೂ ಯೆಹೋಷಾಫಾಟನಿಗೆ ಕಾಣಿಕೆಯನ್ನು ಕೊಟ್ಟ ದ್ದರಿಂದ ಅವನಿಗೆ ಐಶ್ವರ್ಯವೂ ಘನತೆಯೂ ಅಧಿಕ ವಾಗಿ ದೊರಕಿತು.

2 ದಿನವೃತ್ತಾಂತ 25:9

ಆಗ ಅಮಚ್ಯನು ದೇವರ ಮನುಷ್ಯನಿಗೆ--ಆದರೆ ಇಸ್ರಾಯೇಲಿನ ದಂಡಿಗೆ ನಾನು ಕೊಟ್ಟ ನೂರು ತಲಾಂತುಗಳಿಗೋಸ್ಕರ ಏನು ಮಾಡಬೇಕು ಅಂದನು. ಅದಕ್ಕೆ ದೇವರ ಮನುಷ್ಯನು--ಕರ್ತನು ಇದಕ್ಕಿಂತ ಅಧಿಕವಾಗಿ ನಿನಗೆ ಕೊಡಲು ಶಕ್ತನು ಅಂದನು.

2 ದಿನವೃತ್ತಾಂತ 26:10

ಅವನು ಅರಣ್ಯದಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿ ದನು; ತಗ್ಗಿನ ದೇಶದಲ್ಲಿಯೂ ಬೈಲು ದೇಶದಲ್ಲಿಯೂ ಅವನಿಗೆ ಬಹು ಕುರಿದನಗಳಿದ್ದವು. ಹಾಗೆಯೇ ಪರ್ವತ ಗಳಲ್ಲಿಯೂ ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿ ಗರೂ ದ್ರಾಕ್ಷೇ ವ್ಯವಸಾಯದವರೂ ಇದ್ದರು. ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.

ಯೋಬ 1:3

ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.

ಯೋಬ 1:9

ಆಗ ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆ--ಯೋಬನು ಸುಮ್ಮನೆ ದೇವರಿಗೆ ಭಯಪಡುತ್ತಾನೋ?

ಯೋಬ 42:12

ಇದಲ್ಲದೆ ಕರ್ತನು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಹೆಣ್ಣು ಕತ್ತೆಗಳೂ ಇದ್ದವು.

ಸಾಮೇತಿಗಳು 10:22

ಕರ್ತನ ಆರ್ಶೀ ವಾದವು ಐಶ್ವರ್ಯವನ್ನುಂಟು ಮಾಡುವದು. ಅದ ರೊಂದಿಗೆ ಆತನು ಯಾವ ದುಃಖವನ್ನೂ ಸೇರಿಸುವ ದಿಲ್ಲ.

1 ತಿಮೋಥೆಯ 6:17

ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ

Interlinear

Choose Theme