Home Bibles 2 ದಿನವೃತ್ತಾಂತ 33:11 · ಕನ್ನಡ ಬೈಬಲ್
2 ದಿನವೃತ್ತಾಂತ 33:11 · ಕನ್ನಡ ಬೈಬಲ್

ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.

Cross references

ದ್ವಿತೀಯೋಪದೇಶಕಾಂಡ 28:36

ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ.

1 ಸಮುವೇಲ 13:6

ಆಗ ಇಸ್ರಾಯೇಲ್‌ ಜನರು ತಮಗೆ ಶ್ರಮೆ ಉಂಟಾದ್ದದರಿಂದ ತಾವು ಇಕ್ಕಟ್ಟಿನಲ್ಲಿ ಇರುವದನ್ನು ನೋಡಿ ಗವಿಗಳಲ್ಲಿಯೂ ಮುಳ್ಳಿನ ಪೊದೆಗಳಲ್ಲಿಯೂ ಗುಡ್ಡಗಳಲ್ಲಿಯೂ ದುರ್ಗಗಳಲ್ಲಿಯೂ ಕುಣಿಗಳಲ್ಲಿಯೂ ಅಡಗಿಕೊಂಡರು.

2 ಅರಸುಗಳು 20:18

ನಿನ್ನಿಂದ ಹುಟ್ಟುವ ನಿನ್ನ ಮಕ್ಕಳಲ್ಲಿ ಕೆಲವರನ್ನು ತೆಗೆದುಕೊಂಡು ಹೋಗುವರು. ಅವರು ಬಾಬೆಲಿನ ಅರಸನ ಮನೆಯಲ್ಲಿ ಕಂಚುಕಿಯರಾಗಿರು ವರು ಅಂದನು.

2 ಅರಸುಗಳು 23:33

ಆದರೆ ಅವನು ಯೆರೂಸಲೇಮಿನಲ್ಲಿ ಆಳದ ಹಾಗೆ ಫರೋಹನೆಕೋ ಎಂಬವನು ಹಮಾತ್‌ ದೇಶದ ರಿಬ್ಲಾದಲ್ಲಿ ಅವನನ್ನು ಬಂಧಿಸಿ ದೇಶದ ಮೇಲೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾ ಯಿತು.

2 ಅರಸುಗಳು 25:6

ಅವನ ದಂಡೆಲ್ಲಾ ಅವನ ಕಡೆಯಿಂದ ಚದರಿ ಹೋಯಿತು. ಅವರು ಅರಸನನ್ನು ಹಿಡಿದು ಕೊಂಡು, ರಿಬ್ಲದಲ್ಲಿರುವ ಬಾಬೆಲಿನ ಅರಸನ ಬಳಿಗೆ ತಕ್ಕೊಂಡು ಬಂದು ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.

2 ದಿನವೃತ್ತಾಂತ 15:2

ಆಸನೇ, ಯೆಹೂದ ಬೆನ್ಯಾವಿಾನನ ಸಮಸ್ತರೇ, ನನ್ನ ಮಾತನ್ನು ಕೇಳಿರಿ. ನೀವು ಕರ್ತನ ಸಂಗಡ ಇರುವ ವರೆಗೂ ಆತನು ನಿಮ್ಮ ಸಂಗಡ ಇರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು;

2 ದಿನವೃತ್ತಾಂತ 36:6

ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬೆಲಿಗೆ ಒಯ್ಯುವ ಹಾಗೆ ಅವನಿಗೆ ಸಂಕೋಲೆಗಳನ್ನು ಹಾಕಿಸಿದನು.

ನೆಹೆಮ್ಯ 9:32

ಆದಕಾರಣ ನಮ್ಮ ದೇವರೇ, ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವಂಥ ಮಹಾಪರಾಕ್ರಮವು ಳ್ಳಂಥ ಭಯಂಕರನಾದ ದೇವರೇ, ಅಶ್ಶೂರಿನ ಅರಸು ಗಳ ಕಾಲ ಮೊದಲುಗೊಂಡು ಇಂದಿನ ವರೆಗೆ ನಮ್ಮ ಮೇಲೆಯೂ ಅರಸುಗಳ ಮೇಲೆಯೂ ಪ್ರಧಾನರ ಮೇಲೆಯೂ ಯಾಜಕರ ಮೇಲೆಯೂ ಪ್ರವಾದಿಗಳ ಮೇಲೆಯೂ ಪಿತೃಗಳ ಮೇಲೆಯೂ ನಿನ್ನ ಸಮಸ್ತ ಜನರ ಮೇಲೆಯೂ ಬಂದ ಶ್ರಮೆಯು ನಿನಗೆ ಅಲ್ಪ ವಾಗಿ ಕಾಣಲ್ಪಡದೆ ಇರಲಿ.

ನೆಹೆಮ್ಯ 9:37

ನಮ್ಮ, ಪಾಪಗಳಿಗೋಸ್ಕರ ನೀನು ನಮ್ಮ ಮೇಲೆ ಇಟ್ಟ ಅರಸುಗಳಿಗೆ ಅದರ ಹುಟ್ಟುವಳಿ ಬಹಳ ಹೋಗುತ್ತದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಶರೀರಗಳ ಮೇಲೆಯೂ ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ; ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.ಇದೆಲ್ಲಾದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ; ನಮ್ಮ ಪ್ರಧಾನರೂ ಲೇವಿಯರೂ ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ ಅಂದನು.

ಯೋಬ 12:18

ಆತನು ಅರಸರ ಬಂಧನಗಳನ್ನು ಬಿಡಿಸಿ ಅವರ ನಡುಗಳಿಗೆ ನಡುಕಟ್ಟನ್ನು ಕಟ್ಟುತ್ತಾನೆ.

ಯೋಬ 36:8

ಆದರೆ ಸಂಕೋಲೆ ಗಳಿಂದ ಕಟ್ಟಲ್ಪಟ್ಟಿದ್ದಾರೆ. ಬಾಧೆಯ ಬಂಧಗಳಿಂದ ಹಿಡಿಯಲ್ಪಟ್ಟಿದ್ದಾರೆ.

ಕೀರ್ತನೆಗಳು 107:10

ಕತ್ತಲಲ್ಲಿ ಮತ್ತು ಮರಣದ ನೆರಳಿ ನಲ್ಲಿ ಕೂತವರೂ ದೀನತೆಯಲ್ಲಿಯೂ ಕಬ್ಬಿಣದ ಬೇಡಿ ಯಲ್ಲಿ ಬಂಧಿತರೂ ಸೆರೆಬಿದ್ದವರೂ ಆದ ಇವರು

ಯೆಶಾಯ 5:26

ಆತನು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಅಂಚಿನಿಂದ ಅವರಿಗೆ ಸಿಳ್ಳುಹಾಕುವನು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು;

ಯೆಶಾಯ 7:18

ಆ ದಿನದಲ್ಲಿ ಐಗುಪ್ತದ ನದಿಗಳ ಕಟ್ಟಕಡೆ ಯಿಂದ ನೊಣಕ್ಕೂ ಅಶ್ಯೂರ ದೇಶದ ಜೇನು ಹುಳಕ್ಕೂ ಕರ್ತನು ಸಿಳ್ಳುಹಾಕುವನು.

ಯೆಶಾಯ 7:19

ಅವು ಬಂದು ಹಾಳಾದ ಕಣಿವೆಗಳಲ್ಲಿಯೂ ಬಂಡೆಗಳ ಬಿರುಕುಗಳಲ್ಲಿಯೂ ಎಲ್ಲಾ ಮುಳ್ಳಿನ ಮೇಲೆಯೂ ಎಲ್ಲಾ ಪೊದೆಗಳಲ್ಲಿಯೂ ಮುತ್ತಿಕೊಳ್ಳುವವು.

ಯೆಶಾಯ 10:8

ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?

ಯೆಶಾಯ 36:9

ಇದಾಗದಿದ್ದರೆ ನನ್ನ ಯಜಮಾನನ ಸೇವಕ ರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯ ಮುಖವನ್ನು ಹೇಗೆ ತಿರುಗಿಸಿ ಬಿಡುವಿ? ಹೀಗಿರಲಾಗಿ ಕುದುರೆಗಳಿ ಗೋಸ್ಕರವೂ ರಾಹುತರಿಗೋಸ್ಕರವೂ ಐಗುಪ್ತದಲ್ಲಿ ನಂಬಿಕೊಳ್ಳುತ್ತೀ.

ವಿಲಾಪಗಳು 3:7

ನಾನು ಹೊರಗೆ ಬಾರದ ಹಾಗೆ ಆತನು ನನ್ನ ಸುತ್ತಲೂ ಬೇಲಿ ಹಾಕಿದ್ದಾನೆ; ಆತನು ನನ್ನ ಸಂಕೋಲೆಯ ಭಾರವನ್ನು ಹೆಚ್ಚಿಸಿದ್ದಾನೆ.

Interlinear

Choose Theme