Home Bibles 2 ದಿನವೃತ್ತಾಂತ 33:14 · ಕನ್ನಡ ಬೈಬಲ್
2 ದಿನವೃತ್ತಾಂತ 33:14 · ಕನ್ನಡ ಬೈಬಲ್

ಇದಾದ ತರುವಾಯ ಮನಸ್ಸೆಯು ದಾವೀದನ ಪಟ್ಟಣದ ಹೊರಭಾಗದಲ್ಲಿ ಗೀಹೋನಿನ ಪಶ್ಚಿಮ ಕಡೆಯ ತಗ್ಗಿನಲ್ಲಿ ವಿಾನುಬಾಗಲ ದ್ವಾರದ ವರೆಗೆ ಓಫೆಲ್‌ ಸುತ್ತಲೂ ಗೋಡೆಯನ್ನು ಕಟ್ಟಿಸಿ ಅದನ್ನು ಬಹಳ ಎತ್ತರ ಮಾಡಿ ಯೆಹೂದದ ಸಮಸ್ತ ಕೋಟೆ ಯುಳ್ಳ ಪಟ್ಟಣಗಳಲ್ಲಿ ಸೈನ್ಯದ ಅಧಿಪತಿಗಳನ್ನು ಇಟ್ಟನು.

Cross references

1 ಅರಸುಗಳು 1:33

ಅವರು ಅರಸನ ಸಮ್ಮುಖಕ್ಕೆ ಬಂದಾಗ ಅರಸನು ಅವರಿಗೆ--ನೀವು ನಿಮ್ಮ ಯಜಮಾನನ ಸೇವಕರನ್ನು ಕರಕೊಂಡುಹೋಗಿ ನನ್ನ ಮಗನಾದ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಅವ ನನ್ನು ಕರಕೊಂಡು ಹೋಗಿರಿ.

1 ಅರಸುಗಳು 1:45

ಅವರು ಅವನನ್ನು ಅರಸನ ಹೇಸರಕತ್ತೆಯ ಮೇಲೆ ಏರಿಸಿ ಯಾಜಕನಾದ ಚಾದೋಕನೂ ಪ್ರವಾದಿ ಯಾದ ನಾತಾನನೂ ಅವನನ್ನು ಗೀಹೋನಿನಲ್ಲಿ ಅರಸನಾಗಿರಲು ಅಭಿಷೇಕಿಸಿದ್ದಾರೆ; ಅವರು ಸಂತೋಷ ಪಡುತ್ತಾ ಅಲ್ಲಿಂದ ಬಂದ ಕಾರಣ ಪಟ್ಟಣವು ಗದ್ದಲ ವಾಯಿತು.

2 ದಿನವೃತ್ತಾಂತ 11:11

ಇದಲ್ಲದೆ ಅವನು ಕೋಟೆಗಳನ್ನು ಬಲ ಪಡಿಸಿ ಅವುಗಳಲ್ಲಿ ನಾಯಕರನ್ನೂ ಆಹಾರ ಎಣ್ಣೆ ದ್ರಾಕ್ಷಾರಸ ಇರುವ ಉಗ್ರಾಣಗಳನ್ನೂ ಇಟ್ಟನು.

2 ದಿನವೃತ್ತಾಂತ 17:19

ಅರಸನಿಂದ ಸಮಸ್ತ ಯೆಹೂದ ದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇರಿಸಲ್ಪಟ್ಟ ವರ ಹೊರತಾಗಿ ಇವರು ಅರಸನ ಬಳಿಯಲ್ಲಿ ಕಾಯುತ್ತಿದ್ದರು.

2 ದಿನವೃತ್ತಾಂತ 27:3

ಇವನು ಕರ್ತನ ಮಂದಿರದ ಎತ್ತರವಾದ ಬಾಗಲನ್ನು ಕಟ್ಟಿಸಿ ಓಫೇಲ್‌ ಎಂಬ ಗೋಡೆಯ ಮೇಲೆ ಬಹಳವಾಗಿ ಕಟ್ಟಿಸಿದನು.

2 ದಿನವೃತ್ತಾಂತ 32:5

ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು ಕೆಡವಲ್ಪಟ್ಟ ಗೋಡೆಯನ್ನೆಲ್ಲಾ ಕಟ್ಟಿಸಿ ಗೋಪುರಗಳ ಪರ್ಯಂತರ ಅದನ್ನು ಎತ್ತರ ಮಾಡಿ ಅದರ ಹೊರ ಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ ದಾವೀ ದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತುಮಾಡಿ ಈಟಿಗಳನ್ನೂ ಗುರಾಣಿಗಳನ್ನೂ ಬಹಳವಾಗಿ ಮಾಡಿಸಿ ದನು.

2 ದಿನವೃತ್ತಾಂತ 32:30

ಈ ಹಿಜ್ಕೀಯನು ಗೀಹೋನೆಂಬ ಮೇಲಿನ ಕಾಲುವೆಯನ್ನು ಮುಚ್ಚಿಬಿಟ್ಟು ಅದನ್ನು ದಾವೀದನ ಪಟ್ಟಣದಲ್ಲಿ ಪಶ್ಚಿಮ ದಿಕ್ಕಿಗೆ ಕಾಲುವೆಯಾಗಿ ಬರಮಾಡಿದನು. ಹೀಗೆಯೇ ಹಿಜ್ಕೀಯನು ತನ್ನ ಸಮಸ್ತ ಕ್ರಿಯೆಗಳಲ್ಲಿ ವೃದ್ಧಿಹೊಂದಿ ದನು.

ನೆಹೆಮ್ಯ 3:3

ಆದರೆ ವಿಾನಿನ ಬಾಗಲನ್ನು ಹಸ್ಸೆನಾಹನ ಮಕ್ಕಳು ಕಟ್ಟಿದರು; ಇವರು ಅದರ ತೊಲೆಗಳನ್ನು ಹೊಂದಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದರು.

ನೆಹೆಮ್ಯ 3:26

ಓಫೇಲಿನಲ್ಲಿ ವಾಸವಾಗಿರುವ ನೆತಿನಿಯರು ಮೂಡಣ ಪಾರ್ಶ್ವವಾಗಿರುವ ನೀರು ಬಾಗಲಿಗೆದುರಾದ ಹೊರಪಾರ್ಶ್ವದಲ್ಲಿರುವ ಗೋಪುರದ ವರೆಗೂ ಭದ್ರ ಪಡಿಸಿದರು.

ನೆಹೆಮ್ಯ 12:39

ಎಫ್ರಾಯಾಮಿನ ಬಾಗಲ ಮೇಲೆಯೂ ಹಳೇ ಬಾಗಲ ಮೇಲೇಯೂ ವಿಾನಿನ ಬಾಗಲ ಮೇಲೆಯೂ ಹಾದು ಹನನೇಲನ ಗೋಪುರವನ್ನೂ ಹಮ್ಮೋಯಾ ಗೋಪುರವನ್ನೂ ದಾಟಿ ಕುರಿಬಾಗಲ ವರೆಗೆ ಬಂದು ಸೆರೆಮನೆಯ ಬಾಗಲ ಬಳಿಯಲ್ಲಿ ನಿಂತರು.

ಯೆಶಾಯ 32:14

ಅರಮನೆಗಳು ಕೈಬಿಡಲ್ಪಡುವವು. (ವಿಸರ್ಜಿಸು ವವು) ಸಮೂಹಗಳಿಂದ ತುಂಬಿದ್ದ ಪಟ್ಟಣವು ನಿರ್ಜನ ವಾಗುವದು. ದುರ್ಗಗಳೂ ಕೋಟೆಗಳೂ ಯಾವಾ ಗಲೂ ಗುಹೆ (ಗವಿ)ಗಳಾಗಿಯೂ ಕಾಡುಕತ್ತೆಗಳಿಗೆ ಸಂತೋಷವಾಗಿಯೂ ಮಂದೆಗಳಿಗೆ ಮೇಯುವ ಸ್ಥಳವಾಗಿಯೂ ಇರುವವು.

ಸೆಫನ್ಯ 1:10

ಆ ದಿನದಲ್ಲಿ ಆಗುವದೇನಂದರೆ--ವಿಾನುಬಾಗಲಿಂದ ಕೂಗಿನ ಶಬ್ದವೂ ಮತ್ತೊಂದ ರಿಂದ ಗೋಳಾಟವೂ ಗುಡ್ಡಗಳ ಕಡೆಯಿಂದ ದೊಡ್ಡ ಮುರಿಯೋಣವೂ ಇರುವದು.

Interlinear

Choose Theme