ಆದರೆ ದೇಶದ ಜನರು ಅರಸನಾದ ಆಮೋನನ ಮೇಲೆ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ ಅವನ ಮಗನಾದ ಯೋಷೀಯನನ್ನು ಅವನಿಗೆ ಬದ ಲಾಗಿ ಅರಸನನ್ನಾಗಿ ಮಾಡಿದರು.
Cross references
ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು.
ಸಾಯತಕ್ಕ ಕೊಲೆ ಪಾತಕನ ಪ್ರಾಣಕ್ಕೋಸ್ಕರ ಈಡನ್ನು ತಕ್ಕೊಳ್ಳಬೇಡಿರಿ; ಯಾಕಂದರೆ ಅವನು ನಿಜವಾಗಿಯೂ ಸಾಯಬೇಕು.
ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
ರಾಜ್ಯವು ಅವನಿಗೆ ಸ್ಥಿರಮಾಡಲ್ಪಟ್ಟ ತರುವಾಯ ಅವನು ಅರಸನಾದ ತನ್ನ ತಂದೆಯನ್ನು ಸಂಹರಿಸಿದ ತನ್ನ ಸೇವಕರನ್ನು ಕೊಂದುಹಾಕಿದನು.
ಆಗ ಯೆಹೂದ ಜನರೆಲ್ಲರು ಹದಿನಾರು ವರುಷದವನಾದ ಉಜ್ಜೀಯನನ್ನು ತಕ್ಕೊಂಡು ಅವನನ್ನು ಅವನ ತಂದೆಯಾದ ಅಮಚ್ಯ ನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.
ಯೋಷೀಯನು ಆಳಲು ಆರಂಭಿಸಿದಾಗ ಎಂಟು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಮೂವತ್ತೊಂದು ವರುಷ ಆಳಿದನು.
ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು, ತಕ್ಕೊಂಡು ಯೆರೂಸಲೇಮಿನಲ್ಲಿ ಅವನ ತಂದೆಗೆ ಬದ ಲಾಗಿ ಅವನನ್ನು ಅರಸನಾಗಿ ಮಾಡಿದರು.