Home Bibles 2 ದಿನವೃತ್ತಾಂತ 33:7 · ಕನ್ನಡ ಬೈಬಲ್
2 ದಿನವೃತ್ತಾಂತ 33:7 · ಕನ್ನಡ ಬೈಬಲ್

ದೇವರು--ಈ ಆಲಯದಲ್ಲಿಯೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಯೆರೂ ಸಲೇಮಿನಲ್ಲಿಯೂ ನಾನು ನನ್ನ ಹೆಸರನ್ನು ಯುಗ ಯುಗಕ್ಕೂ ಇರಿಸುವೆನೆಂದೂ ಮೋಶೆಯಿಂದ

Cross references

ನಿರ್ಗಮಕಾಂಡ 20:4

ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು.

ನ್ಯಾಯಾಧಿಪತಿಗಳು 17:3

ಅವನು ಆ ಸಾವಿರದ ನೂರು ರೂಪಾಯಿಗಳಷ್ಟು ಬೆಳ್ಳಿಯನ್ನು ತನ್ನ ತಾಯಿಗೆ ತಿರಿಗಿ ಕೊಟ್ಟಾಗ ಅವನ ತಾಯಿ--ನನ್ನ ಮಗನ ನಿಮಿತ್ತ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹವನ್ನೂ ಮಾಡುವದಕ್ಕೆ ನಾನು ನನ್ನ ಕೈಯಲ್ಲಿದ್ದ ಈ ಬೆಳ್ಳಿಯನ್ನು ಕರ್ತನಿಗೆ ಸಂಪೂರ್ಣವಾಗಿ ಪ್ರತಿಷ್ಠಿಸಿದೆನು; ಆದದರಿಂದ ನಾನು ಅದನ್ನು ನಿನಗೆ ತಿರಿಗಿ ಕೊಡುವೆನು ಅಂದಳು.

1 ಅರಸುಗಳು 8:29

ನಿನ್ನ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀನು ಕೇಳುವ ಹಾಗೆ ಅಲ್ಲಿ ನನ್ನ ಹೆಸರಿರುವದೆಂದು ನೀನು ಹೇಳಿದ ಸ್ಥಳವಾದ ಈ ಮಂದಿರದ ಮೇಲೆ ರಾತ್ರಿ ಹಗಲು ನಿನ್ನ ಕಟಾಕ್ಷವಿರಲಿ.

1 ಅರಸುಗಳು 8:44

ನಿನ್ನ ಜನರು ನೀನು ಕಳುಹಿಸುವ ಯಾವ ಸ್ಥಳದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧವನ್ನು ಮಾಡಲು ಹೊರಟುಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿ ಗೋಸ್ಕರ ಕಟ್ಟಿಸಿದ ಈ ಮನೆಯ ಮಾರ್ಗವಾಗಿಯೂ ಅವರು ಕರ್ತನಾದ ನಿನಗೆ ಪ್ರಾರ್ಥನೆ ಮಾಡಿದಾಗ

1 ಅರಸುಗಳು 8:48

ತಮ್ಮ ಪೂರ್ಣ ಪ್ರಾಣದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗ ವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗ ವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಈ ಮಂದಿರದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ

1 ಅರಸುಗಳು 11:13

ಇದಲ್ಲದೆ ರಾಜ್ಯವನ್ನೆಲ್ಲಾ ನಾನು ಕಸಕೊಳ್ಳದೆ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ನಾನು ಆದುಕೊಂಡ ಯೆರೂಸಲೇಮಿಗೋಸ್ಕರವಾಗಿಯೂ ನಿನ್ನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು ಅಂದನು.

1 ಅರಸುಗಳು 11:32

(ನನ್ನ ಸೇವಕನಾದ ದಾವೀದನಿಗೋಸ್ಕರವೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿಗೋಸ್ಕರವೂ ಅವನಿಗೆ ಒಂದು ಗೋತ್ರ ಇರುವದು.)

1 ಅರಸುಗಳು 12:28

ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು.

2 ಅರಸುಗಳು 21:7

ಈ ಮನೆಯಲ್ಲಿಯೂ ಇಸ್ರಾಯೇಲಿನ ಸಕಲ ಗೋತ್ರಗಳ ಲ್ಲಿಯೂ ನಾನು ಆದುಕೊಂಡ ಯೆರೂಸಲೇಮಿನ ಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನೆಂದು ಕರ್ತನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಯಾವದನ್ನು ಕುರಿತು ಹೇಳಿದ್ದನೋ ಆ ಮನೆಯಲ್ಲಿ ತಾನು ಮಾಡಿದ ತೋಪಿನ ಕೆತ್ತಿದ ವಿಗ್ರಹವನ್ನು ಇಟ್ಟನು.

2 ಅರಸುಗಳು 23:6

ಕರ್ತನ ಆಲಯದೊ ಳಗಿಂದ ವಿಗ್ರಹದ ತೋಪನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್‌ ಹಳ್ಳಕ್ಕೆ ಅದನ್ನು ತರಿಸಿ ಅವನು ಕಿದ್ರೋನ್‌ ಹಳ್ಳದ ಬಳಿಯಲ್ಲಿ ಸುಟ್ಟು ಧೂಳಾಗಿ ಪುಡಿಮಾಡಿ ಆ ಧೂಳಿನ ಪುಡಿಯನ್ನು ಜನರ ಸಮಾಧಿ ಗಳ ಮೇಲೆ ಹಾಕಿಸಿದನು.

2 ದಿನವೃತ್ತಾಂತ 6:5

ಆತನು ತನ್ನ ಬಾಯಿಂದ--ನನ್ನ ಜನ ರಾದ ಇಸ್ರಾಯೇಲನ್ನು ಐಗುಪ್ತದೇಶದಿಂದ ಬರ ಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವದಕ್ಕೆ ಇಸ್ರಾಯೇಲನ ಸಮಸ್ತ ಗೋತ್ರಗಳೊಳಗಿಂದ ಯಾವ ಪಟ್ಟಣವನ್ನೂ ಆದುಕೊಳ್ಳಲಿಲ್ಲ; ನನ್ನ ಜನರಾದ ಇಸ್ರಾ ಯೇಲಿನ ಮೇಲೆ ಆಳುವವನಾಗಿರಲು ನಾನು ಒಬ್ಬನ ನ್ನಾದರೂ ಆದುಕೊಳ್ಳಲಿಲ್ಲ.

2 ದಿನವೃತ್ತಾಂತ 6:6

ಆದರೆ ನನ್ನ ಹೆಸರು ಅಲ್ಲಿ ಇರುವ ಹಾಗೆ ಯೆರೂಸಲೇಮನ್ನೂ ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ಇರಲು ದಾವೀದನನ್ನೂ ಆದುಕೊಂಡಿದ್ದೇನೆ ಎಂದು ಹೇಳಿದ್ದಾನೆ.

2 ದಿನವೃತ್ತಾಂತ 7:16

ನನ್ನ ಹೆಸರು ಯುಗಯುಗಾಂತರಕ್ಕೂ ಅಲ್ಲಿ ಇರುವ ಹಾಗೆ ಈ ಮನೆಯನ್ನು ಆದುಕೊಂಡು ಪರಿಶುದ್ಧ ಮಾಡಿದ್ದೇನೆ; ನನ್ನ ಕಣ್ಣುಗಳೂ ನನ್ನ ಹೃದಯವೂ ಅಲ್ಲಿ ಯಾವಾಗಲೂ ಇರುವವು.

2 ದಿನವೃತ್ತಾಂತ 33:4

ಇದ ಲ್ಲದೆ--ಯೆರೂಸಲೇಮಿನಲ್ಲಿ ನನ್ನ ಹೆಸರು ಯುಗ ಯುಗಕ್ಕೂ ಇರುವದೆಂದು ಕರ್ತನು ಹೇಳಿದ ಕರ್ತನ ಆಲಯದಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.

2 ದಿನವೃತ್ತಾಂತ 33:15

ಇದಲ್ಲದೆ ಅವನು ಅನ್ಯ ದೇವರುಗಳನ್ನೂ ಕರ್ತನ ಆಲಯದಲ್ಲಿರುವ ವಿಗ್ರಹವನ್ನೂ ಕರ್ತನ ಆಲಯದ ಪರ್ವತದಲ್ಲಿಯೂ ಯೆರೂಸಲೇಮಿನ ಲ್ಲಿಯೂ ತಾನು ಕಟ್ಟಿಸಿದ ಸಮಸ್ತ ಬಲಿಪೀಠಗಳನ್ನೂ ತೆಗೆದುಹಾಕಿ ಅವುಗಳನ್ನು ಪಟ್ಟಣದ ಹೊರಗೆ ಬಿಸಾಡಿ ಬಿಟ್ಟನು.

ಕೀರ್ತನೆಗಳು 78:68

ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್‌ ಪರ್ವತವನ್ನೂ ಆದುಕೊಂಡು,

ಕೀರ್ತನೆಗಳು 132:13

ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ.

Interlinear

Choose Theme