Home Bibles 2 ದಿನವೃತ್ತಾಂತ 35:2 · ಕನ್ನಡ ಬೈಬಲ್
2 ದಿನವೃತ್ತಾಂತ 35:2 · ಕನ್ನಡ ಬೈಬಲ್

ಆಗ ಅವನು ಯಾಜಕರನ್ನು ಅವರವರ ಕೆಲಸಗಳಲ್ಲಿ ನಿಲ್ಲಿಸಿ ಕರ್ತನ ಆಲಯದ ಸೇವೆ ಮಾಡುವದಕ್ಕೆ ಅವರನ್ನು ದೃಢ ಪಡಿಸಿ,

Cross references

ಅಂಕೆಗಳ ಪುಸ್ತಕ 18:5

ಇಸ್ರಾಯೇಲ್‌ ಮಕ್ಕಳ ಮೇಲೆ ಇನ್ನು ಮುಂದೆ ಎಂದಿಗೂ ರೌದ್ರವು ಬಾರದಹಾಗೆ ಪರಿಶುದ್ಧ ಸ್ಥಳದ ಆಜ್ಞೆಯನ್ನೂ ಬಲಿಪೀಠದ ಆಜ್ಞೆಯನ್ನೂ ನೀವು ಕಾಪಾಡಬೇಕು.

1 ದಿನವೃತ್ತಾಂತ 22:19

ನಿಮ್ಮ ದೇವರಾದ ಕರ್ತನನ್ನು ಹುಡು ಕಲು ನಿಮ್ಮ ಹೃದಯವನ್ನೂ ಪ್ರಾಣವನ್ನೂ ಒಪ್ಪಿಸಿ ಕರ್ತನ ಒಡಂಬಡಿಕೆಯ ಮಂಜೂಷದ ದೇವರ ಪರಿ ಶುದ್ಧ ಪಾತ್ರೆಗಳನ್ನು ಕರ್ತನ ನಾಮಕ್ಕೆ ಕಟ್ಟಿಸಲ್ಪಡುವ ಮನೆಯೊಳಗೆ ತರುವ ಹಾಗೆ ಎದ್ದು ಕರ್ತನಾದ ದೇವ ರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ ಅಂದನು.

1 ದಿನವೃತ್ತಾಂತ 24:1

ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ;

2 ದಿನವೃತ್ತಾಂತ 23:8

ಹೀಗೆಯೇ ಲೇವಿಯರೂ ಸಮಸ್ತ ಯೆಹೂದದವರೂ ಯಾಜಕನಾದ ಯೆಹೋಯಾದನು ಆಜ್ಞಾಪಿಸಿದ ಎಲ್ಲಾ ದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್ತಿನಲ್ಲಿ ಒಳಗೆ ಬರಬೇಕಾದ ತನ್ನ ಮನುಷ್ಯರನ್ನೂ ಸಬ್ಬತ್ತಿ ನಲ್ಲಿ ಹೊರಟು ಹೋಗಬೇಕಾದವರನ್ನೂ ತೆಗೆದು ಕೊಂಡನು. ಯಾಜಕನಾದ ಯೆಹೋಯಾದನು ಅವ ರನ್ನು ಕಳುಹಿಸಿ ಬಿಡಲಿಲ್ಲ.

2 ದಿನವೃತ್ತಾಂತ 23:18

ಇದಲ್ಲದೆ ಯೆಹೋ ಯಾದನು ಕರ್ತನ ಆಲಯದ ಪರಿಚಾರಕರನ್ನು ನೇಮಿ ಸಿದನು. ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿ ರುವ ಹಾಗೆ ಸಂತೋಷದಿಂದಲೂ ಸಂಗೀತದಿಂದಲೂ ದಾವೀದನಿಂದ ನೇಮಿಸಲ್ಪಟ್ಟ ಹಾಗೆ ದಾವೀದನು ಕರ್ತನ ದಹನಬಲಿಗಳನ್ನು ಅರ್ಪಿಸುವದಕ್ಕೆ ಕರ್ತನ ಆಲಯ ದಲ್ಲಿ ವಿಭಾಗಿಸಿದ ಲೇವಿಯರಾದ ಯಾಜಕರಿಂದ ಅವರನ್ನು ನೇಮಿಸಿದನು.

2 ದಿನವೃತ್ತಾಂತ 29:5

ಲೇವಿಯರೇ, ನನ್ನ ಮಾತನ್ನು ಕೇಳಿರಿ; ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನಿಮ್ಮ ಪಿತೃಗಳ ಕರ್ತನಾದ ದೇವರ ಮನೆಯನ್ನು ಪರಿಶುದ್ಧಮಾಡಿ ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.

2 ದಿನವೃತ್ತಾಂತ 31:2

ಹಿಜ್ಕೀಯನು ಅವನವನ ಸೇವೆಯ ಪ್ರಕಾರ ಯಾಜ ಕರ ಲೇವಿಯರ ಸರತಿಗಳನ್ನು ನೇಮಿಸಿದನು. ದಹನ ಬಲಿಗಳನ್ನು ಮತ್ತು ಸಮಾಧಾನದ ಬಲಿಗಳನ್ನು ಅರ್ಪಿ ಸುವದಕ್ಕೂ ಸೇವಿಸುವದಕ್ಕೂ ಕರ್ತನ ಗುಡಾರಗಳ ಬಾಗಲುಗಳಲ್ಲಿ ಸ್ತೋತ್ರ ಮಾಡುವದಕ್ಕೂ ಕೊಂಡಾ ಡುವದಕ್ಕೂ ಯಾಜಕರನ್ನೂ ಲೇವಿಯರನ್ನೂ ನೇಮಿಸಿ ದನು.

ಎಜ್ರಾ 6:18

ಮೋಶೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಯೆರೂ ಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆ ಗೋಸ್ಕರ ಯಾಜಕರನ್ನು ಅವರ ಸರತಿಯ ಪ್ರಕಾರವೂ ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು.

Interlinear

Choose Theme