Home Bibles ☰ Books 2 ದಿನವೃತ್ತಾಂತ 35:26 · ಕನ್ನಡ ಬೈಬಲ್
2 ದಿನವೃತ್ತಾಂತ 35:26 · ಕನ್ನಡ ಬೈಬಲ್

ಆದರೆ ಯೋಷೀಯನ ಮಿಕ್ಕಾದ ಕ್ರಿಯೆಗಳು, ಕರ್ತನ ನ್ಯಾಯಪ್ರಮಾಣದಲ್ಲಿ ಬರೆಯಲ್ಪಟ್ಟ ಹಾಗೆ ಅವನು ಮಾಡಿದ ಉಪಕಾರಗಳೂಅವನ ಕ್ರಿಯೆಗಳೂ ಮೊದಲನೆಯವುಗಳೂ ಕಡೆ ಯವುಗಳೂ ಇಸ್ರಾಯೇಲ್‌ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.

Cross references

2 ದಿನವೃತ್ತಾಂತ 31:20

ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಉತ್ತಮವಾದ ದ್ದನ್ನೂ ಸರಿಯಾದದ್ದನ್ನೂ ಸತ್ಯವಾದದ್ದನ್ನೂ ನಡಿಸಿ ದನು.ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.

2 ದಿನವೃತ್ತಾಂತ 32:32

ಹಿಜ್ಕೀಯನ ಮಿಕ್ಕಾದ ಕಾರ್ಯಗಳೂ ಅವನ ಒಳ್ಳೆಯತನವೂ ಇಗೋ, ಅವು ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ದರ್ಶನದ ಪುಸ್ತಕ ದಲ್ಲಿಯೂ ಯೆಹೂದ ಇಸ್ರಾಯೇಲ್‌ ಅರಸುಗಳ ಪುಸ್ತಕದಲ್ಲಿಯೂ ಬರೆಯಲ್ಪಟ್ಟಿವೆ.ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದದರಲ್ಲಿ ಅವ ನನ್ನು ಹೂಣಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗನಾದ ಮನ ಸ್ಸೆಯು ಅವನಿಗೆ ಬದಲಾಗಿ ಆಳಿದನು.

ಯೆರೆಮಿಯ 22:15

ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.

Interlinear

Choose Theme