Home Bibles 2 ದಿನವೃತ್ತಾಂತ 5:11 · ಕನ್ನಡ ಬೈಬಲ್
2 ದಿನವೃತ್ತಾಂತ 5:11 · ಕನ್ನಡ ಬೈಬಲ್

ಇದಲ್ಲದೆ ಅಲ್ಲಿ ಇದ್ದ ಸಮಸ್ತ ಯಾಜಕರು ಪರಿಶುದ್ಧ ವಾಗಿದ್ದು ಸರದಿಗಳ ಪ್ರಕಾರ ಕಾಯದೆ ಇದ್ದದರಿಂದ

Cross references

ನಿರ್ಗಮಕಾಂಡ 19:10

ಆಗ ಕರ್ತನು ಮೋಶೆಗೆ--ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು, ಅವರು ತಮ್ಮ ವಸ್ತ್ರಗಳನ್ನು ತೊಳಕೊಳ್ಳಲಿ.

ನಿರ್ಗಮಕಾಂಡ 19:14

ಆಗ ಮೋಶೆಯು ಬೆಟ್ಟದಿಂದಿಳಿದು ಜನರನ್ನು ಶುದ್ಧಿಮಾಡಿದನು. ಅವರು ತಮ್ಮ ವಸ್ತ್ರಗಳನ್ನು ತೊಳೆದು ಕೊಂಡರು.

1 ದಿನವೃತ್ತಾಂತ 15:14

ಆಗ ಇಸ್ರಾಯೇಲಿನ ದೇವರಾದ ಕರ್ತನ ಮಂಜೂ ಷವನ್ನು ತರುವದಕ್ಕೆ ಯಾಜಕರೂ ಲೇವಿಯರೂ ತಮ್ಮನ್ನು ಪರಿಶುದ್ಧ ಮಾಡಿಕೊಂಡರು.

1 ದಿನವೃತ್ತಾಂತ 24:1

ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ;

2 ದಿನವೃತ್ತಾಂತ 29:5

ಲೇವಿಯರೇ, ನನ್ನ ಮಾತನ್ನು ಕೇಳಿರಿ; ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನಿಮ್ಮ ಪಿತೃಗಳ ಕರ್ತನಾದ ದೇವರ ಮನೆಯನ್ನು ಪರಿಶುದ್ಧಮಾಡಿ ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.

2 ದಿನವೃತ್ತಾಂತ 29:15

ಇವರು ತಮ್ಮ ಸಹೋ ದರರನ್ನು ಕೂಡಿಸಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ವಾಕ್ಯದಿಂದ ಅರಸನ ಆಜ್ಞೆಯ ಪ್ರಕಾರ ಕರ್ತನ ಆಲಯವನ್ನು ಶುಚಿಮಾಡಲು ಬಂದರು.

2 ದಿನವೃತ್ತಾಂತ 29:34

ಯಾಜಕರು ಸ್ವಲ್ಪ ಜನರಾಗಿದ್ದು ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದದ್ದರಿಂದ ಕೆಲಸವು ತೀರುವ ವರೆಗೂ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವ ವರೆಗೂ ಲೇವಿ ಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಯಾಕಂದರೆ ತಮ್ಮನ್ನು ಪರಿಶುದ್ಧಮಾಡಿ ಕೊಳ್ಳಲು ಯಾಜಕರಿಗಿಂತ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು.

2 ದಿನವೃತ್ತಾಂತ 30:15

ಎರಡನೇ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಪಸ್ಕ ವನ್ನು ವಧಿಸಿದರು. ಯಾಜಕರೂ ಲೇವಿಯರೂ ಲಜ್ಜೆ ಯನ್ನು ಹೊಂದಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ಮನೆಯೊಳಗೆ ದಹನಬಲಿಗಳನ್ನು ತಂದರು.

2 ದಿನವೃತ್ತಾಂತ 30:17

ಯಾಕಂದರೆ ಸಭೆಯಲ್ಲಿ ಅನೇಕರು ಅಪರಿಶುದ್ಧರಾಗಿದ್ದರು, ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಕರ್ತನಿಗೆ ಪರಿಶುದ್ಧ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವದಕ್ಕೆ ಇದ್ದರು.

2 ದಿನವೃತ್ತಾಂತ 35:4

ಇದಲ್ಲದೆ ಇಸ್ರಾ ಯೇಲಿನ ಅರಸನಾದ ದಾವೀದನ ಬರಹದ ಪ್ರಕಾರ ವಾಗಿಯೂ ಅವನ ಮಗನಾದ ಸೊಲೊಮೋನನ ಬರಹದ ಪ್ರಕಾರವಾಗಿಯೂ ನಿಮ್ಮ ಸರತಿಗಳಲ್ಲಿ ನಿಮ್ಮ ಪಿತೃಗಳ ಮನೆಗಳ ಪ್ರಕಾರ ಸಿದ್ಧಮಾಡಿಕೊಂಡು

2 ದಿನವೃತ್ತಾಂತ 35:6

ಪಸ್ಕವನ್ನು ವಧಿಸಿ ನಿಮ್ಮನ್ನು ಪರಿಶುದ್ಧ ಮಾಡಿ ಕೊಂಡು ಕರ್ತನು ಮೋಶೆಯ ಮುಖಾಂತರವಾಗಿ ಹೇಳಿದ ವಾಕ್ಯದ ಪ್ರಕಾರ ನಿಮ್ಮ ಸಹೋದರರು ಮಾಡುವ ಹಾಗೆ ಅವರನ್ನು ಸಿದ್ಧಮಾಡಿರಿ ಅಂದನು.

ಯೋಬ 1:5

ಔತಣದ ದಿನಗಳು ಮುಗಿದ ಬಳಿಕ ಯೋಬನು ಅವರನ್ನು ಕರೆಕಳುಹಿಸಿ ಅವರನ್ನು ಶುದ್ಧಿ ಮಾಡಿ ಬೆಳಿಗ್ಗೆ ಎದ್ದು ಅವರೆಲ್ಲರ ಲೆಕ್ಕದ ಪ್ರಕಾರ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಯೋಬನುಒಂದುವೇಳೆ ನನ್ನ ಕುಮಾರರು ಪಾಪ ಮಾಡಿ ತಮ್ಮ ಹೃದಯಗಳಲ್ಲಿ ದೇವರನ್ನು ಶಪಿಸಿರಬಹುದು ಅಂದು ಕೊಂಡನು. ಹೀಗೆಯೇ ಯೋಬನು ಕ್ರಮವಾಗಿ ಮಾಡುತ್ತಿದ್ದನು.

Interlinear

Choose Theme