Home Bibles 2 ದಿನವೃತ್ತಾಂತ 5:13 · ಕನ್ನಡ ಬೈಬಲ್
2 ದಿನವೃತ್ತಾಂತ 5:13 · ಕನ್ನಡ ಬೈಬಲ್

ತುತೂರಿ ಊದುವವರೂ ಸಂಗೀತಗಾರರೂ ಕರ್ತನನ್ನು ಕೊಂಡಾ ಡುತ್ತಾ ಹೊಗಳುತ್ತಾ ಏಕವಾಗಿ ಒಂದೇ ಶಬ್ದ ಮಾಡಿ ದಾಗ ತುತೂರಿ ತಾಳ ಮೊದಲಾದ ಗೀತ ವಾದ್ಯಗಳಿಂದ ತಮ್ಮ ಶಬ್ದವನ್ನೆತ್ತಿ--ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇರುವದೆಂದೂ ಕರ್ತನನ್ನು ಕೀರ್ತಿಸುವಾಗ ಕರ್ತನ ಆಲಯವು ಮೇಘದಿಂದ ತುಂಬಲ್ಪಟ್ಟಿತು.ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.

Cross references

ನಿರ್ಗಮಕಾಂಡ 29:43

ಅಲ್ಲಿ ನಾನು ಇಸ್ರಾಯೇಲ್‌ ಮಕ್ಕಳನ್ನು ಸಂಧಿಸುವೆನು. ಗುಡಾರವು ನನ್ನ ಮಹಿಮೆಯಿಂದ ಪವಿತ್ರವಾಗುವದು.

ನಿರ್ಗಮಕಾಂಡ 40:34

ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು.

1 ಅರಸುಗಳು 8:10

ಯಾಜಕರು ಪರಿಶುದ್ಧ ಸ್ಥಳದಿಂದ ಬಂದಾಗ ಮೇಘವು ಕರ್ತನ ಮಂದಿರವನ್ನು ತುಂಬಿತ್ತು.

1 ದಿನವೃತ್ತಾಂತ 16:4

ಇದಲ್ಲದೆ ಕರ್ತನ ಮಂಜೂಷದ ಮುಂದೆ ಸೇವೆ ಮಾಡಲೂ ಇಸ್ರಾಯೇಲಿನ ದೇವರಾದ ಕರ್ತನನ್ನು ಸ್ಮರಿಸುವದಕ್ಕೂ ಕೊಂಡಾಡುವದಕ್ಕೂ ಹೊಗಳುವ ದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು.

1 ದಿನವೃತ್ತಾಂತ 16:34

ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು;ಆತನ ಕೃಪೆಯು ಯುಗಯುಗಕ್ಕೂ ಅವೆ.

2 ದಿನವೃತ್ತಾಂತ 7:1

ಸೊಲೊಮೋನನು ಪ್ರಾರ್ಥಿಸಿ ತೀರಿಸಿದಾಗ ಬೆಂಕಿಯು ಆಕಾಶದಿಂದ ಇಳಿದು ದಹನ ಬಲಿಗಳನ್ನೆಲ್ಲಾ ದಹಿಸಿಬಿಟ್ಟಿತು.

2 ದಿನವೃತ್ತಾಂತ 7:2

ಮಹಿಮೆಯು ಆಲಯವನ್ನು ತುಂಬಿತು. ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿದ್ದರಿಂದ ಯಾಜಕರು ಕರ್ತನ ಮನೆಯಲ್ಲಿ ಹೋಗಲಾರದೆ ಇದ್ದರು.

2 ದಿನವೃತ್ತಾಂತ 7:3

ಇಸ್ರಾಯೇ ಲಿನ ಮಕ್ಕಳೆಲ್ಲರೂ ಬೆಂಕಿಯು ಇಳಿದದ್ದನ್ನು ಮನೆಯ ಮೇಲೆ ಇರುವ ಕರ್ತನ ಮಹಿಮೆಯನ್ನು ಕಂಡಾಗ ನೆಲಕ್ಕೆ ತಮ್ಮ ಮುಖಗಳನ್ನು ಬಾಗಿಸಿ ಆರಾಧಿಸಿ ಕರ್ತ ನನ್ನು ಕೊಂಡಾಡಿ--ಆತನು ಒಳ್ಳೆಯವನು, ಆತನ ಕೃಪೆಯು ಯುಗಯುಗಕ್ಕೂ ಇರುವದು ಎಂದು ಹೇಳಿ ದರು.

2 ದಿನವೃತ್ತಾಂತ 7:6

ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಲ್ಲುತ್ತಿದ್ದರು; ಹಾಗೆಯೇ ದಾವೀ ದನು ತಮ್ಮ ಸೇವೆಗಾಗಿ ಹೊಗಳುತ್ತಾ ಕರ್ತನ ಕೃಪೆಯು ಯುಗಯುಗಕ್ಕೂ ಇರುವದೆಂದು ಅರಸನಾದ ದಾವೀ ದನು ಆತನನ್ನು ಕೊಂಡಾಡುವದಕ್ಕೆ ಮಾಡಿಸಿದ ಕರ್ತನ ಗೀತವಾದ್ಯಗಳನ್ನು ಲೇವಿಯರು ಹಿಡುಕೊಂಡಿದ್ದರು. ಯಾಜಕರು ಅವರ ಮುಂದೆ ತುತೂರಿಗಳನ್ನು ಊದಿ ದರು; ಸಮಸ್ತ ಇಸ್ರಾಯೇಲ್ಯರು ನಿಂತಿದ್ದರು.

2 ದಿನವೃತ್ತಾಂತ 20:21

ಅವನು ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಸೈನ್ಯದ ಮುಂದೆ ಅವರು ಹೊರಡುವಾಗ ಪರಿಶುದ್ಧತ್ವದ ಪ್ರಭೆಯನ್ನು ಸ್ತುತಿಸುವದಕ್ಕೆ ಕರ್ತನನ್ನು ಕೊಂಡಾಡಿರಿ, ಯಾಕಂದರೆ ಆತನ ಕೃಪೆಯು ಯುಗ ಯುಗಕ್ಕೂ ಇರುವದೆಂದು ಹೇಳುವದಕ್ಕೆ ಕರ್ತ ನಿಗೆ ಸಂಗೀತಗಾರರನ್ನು ನೇಮಿಸಿದನು.

2 ದಿನವೃತ್ತಾಂತ 20:22

ಅವರು ಹಾಡುವದಕ್ಕೂ ಸ್ತುತಿಸುವದಕ್ಕೂ ಆರಂಭಿಸಿದಾಗಲೇ ಕರ್ತನು ಯೆಹೂದದ ಮೇಲೆ ಬಂದ ಅಮ್ಮೋನ್‌, ಮೋವಾಬ್‌, ಸೇಯಾರ್‌ ಪರ್ವತಗಳ ಮಕ್ಕಳಿಗೆ ವಿರೋಧವಾಗಿ ಹೊಂಚಿಕೊಳ್ಳುವವರನ್ನು ಇಟ್ಟಿದ್ದ ರಿಂದ ಅವರು ಹೊಡೆಯಲ್ಪಟ್ಟಿದ್ದರು.

ಎಜ್ರಾ 3:11

ಆಗ ಅವರು ಕರ್ತನನ್ನು ಕೊಂಡಾಡಿ ಹೊಗಳಿ ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇಸ್ರಾಯೇಲಿನ ಮೇಲೆ ಉಂಟೆಂದೂ ಪರಸ್ಪರವಾಗಿ ಹಾಡಿದರು. ಅವರು ಕರ್ತನನ್ನು ಹೊಗ ಳಿದಾಗ ಕರ್ತನ ಮಂದಿರದ ಅಸ್ತಿವಾರವನ್ನು ಹಾಕುವ ನಿಮಿತ್ತ ಜನರೆಲ್ಲರು ಮಹಾಧ್ವನಿಯಿಂದ ಆರ್ಭಟಿಸಿ ದರು.

ನೆಹೆಮ್ಯ 12:27

ಯೆರೂಸಲೇಮಿನ ಗೋಡೆಯನ್ನು ಪ್ರತಿಷ್ಠೆ ಮಾಡುವಾಗ ಸ್ತುತಿಗಳಿಂದಲೂ ಹಾಡುವದರಿಂದಲೂ ತಾಳಗಳಿಂದಲೂ ವೀಣೆಗಳಿಂದಲೂ ಕಿನ್ನರಿಗಳಿಂದಲೂ ಪ್ರತಿಷ್ಠೆಯನ್ನು ಸಂತೋಷವಾಗಿ ಆಚರಿಸುವದಕ್ಕೆ ಲೇವಿ ಯರನ್ನು ಯೆರೂಸಲೇಮಿಗೆ ಬರಮಾಡುವ ನಿಮಿತ್ತವಾಗಿ ಅವರನ್ನು ಅವರ ಸಮಸ್ತ ಸ್ಥಳಗಳಲ್ಲಿ ಹುಡುಕಿದರು.

ಕೀರ್ತನೆಗಳು 22:4

ನಿನ್ನಲ್ಲಿ ನಮ್ಮ ಪಿತೃಗಳು ಭರವಸವಿಟ್ಟರು; ಅವರು ಭರವಸವಿಟ್ಟದ್ದರಿಂದ ನೀನು ಅವರನ್ನು ತಪ್ಪಿ ಸಿದಿ.

ಕೀರ್ತನೆಗಳು 68:25

ಹಾಡು ವವರು ಮುಂದಾಗಿಯೂ ಬಾರಿಸುವವರು ಹಿಂದಾ ಗಿಯೂ ಹೋದರು, ಅವರಲ್ಲಿ ದಮ್ಮಡಿ ಬಾರಿಸುವ ಕನ್ಯೆಯರು ಇದ್ದರು.

ಕೀರ್ತನೆಗಳು 81:2

ಕೀರ್ತನೆಯನ್ನು ಎತ್ತಿರಿ; ದಮ್ಮಡಿಯನ್ನೂ ರಮ್ಯವಾದ ಕಿನ್ನರಿಯನ್ನೂ ವೀಣೆಯ ಸಂಗಡ ತನ್ನಿರಿ.

ಕೀರ್ತನೆಗಳು 95:1

ಬನ್ನಿರಿ, ಕರ್ತನಿಗೆ ಉತ್ಸಾಹ ಧ್ವನಿಮಾಡುವಾ ನಮ್ಮ ರಕ್ಷಣೆಯ ಬಂಡೆಗೆ ಜಯಧ್ವನಿ ಮಾಡೋಣ.

ಕೀರ್ತನೆಗಳು 100:1

ಸಮಸ್ತ ಭೂಮಿಯೇ, ಕರ್ತನಿಗೆ ಜಯಧ್ವನಿ ಮಾಡಿರಿ,

ಕೀರ್ತನೆಗಳು 100:5

ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.

ಕೀರ್ತನೆಗಳು 136:1

ಕರ್ತನನ್ನು ಕೊಂಡಾಡಿರಿ, ಆತನು ಒಳ್ಳೆಯವನು; ಆತನ ಕರುಣೆಯು ಎಂದೆಂದಿಗೂ ಅದೆ.

ಕೀರ್ತನೆಗಳು 150:3

ತುತೂರಿಯ ಶಬ್ದ ದಿಂದ ಆತನನ್ನು ಸ್ತುತಿಸಿರಿ. ವೀಣೆಯಿಂದಲೂ ಕಿನ್ನರಿಯಿಂದಲೂ ಆತನನ್ನು ಸ್ತುತಿಸಿರಿ.

ಕೀರ್ತನೆಗಳು 150:5

ಜಲ್ಲರಿಯ ದೊಡ್ಡ ಶಬ್ದದಿಂದ ಆತನನ್ನು ಸ್ತುತಿಸಿರಿ; ಉತ್ಸಾಹದ ತಾಳಗಳಿಂದ ಆತನನ್ನು ಸ್ತುತಿಸಿರಿ.ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ.

ಯೆಶಾಯ 52:8

ನಿನ್ನ ಕಾವಲುಗಾರರು ಸ್ವರವನ್ನೆತ್ತುವರು; ಆ ಸ್ವರದೊಂದಿಗೆ ಒಟ್ಟಾಗಿ ಅವರು ಹಾಡುವರು; ಕರ್ತನು ಚೀಯೋನನ್ನು ತಿರಿಗಿ ತರು ವಾಗ ಅವರು ಕಣ್ಣಲ್ಲಿ ಕಣ್ಣು ಇಟ್ಟು ನೋಡುವರು.

ಯೆರೆಮಿಯ 33:11

ಅವರು ತರುವಾಯ ತಿರುಗಿಕೊಂಡು ತಾವು ಬಿಡುಗಡೆಯಾಗಿ ಕಳುಹಿಸಿಬಿಟ್ಟಿದ್ದ ದಾಸದಾಸಿ ಯರನ್ನು ತಿರಿಗಿ ಬರಮಾಡಿ ಅವರನ್ನು ದಾಸ ದಾಸಿಯ ರಾಗಿಯೂ ವಶಮಾಡಿಕೊಂಡರು.

ಅಪೋಸ್ತಲರ ಕೃತ್ಯಗಳು 4:32

ನಂಬಿದ್ದ ಸಮೂಹದವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು; ಇದಲ್ಲದೆ ಅವರಲ್ಲಿ ಯಾವನೂ ತನ್ನಗಿದ್ದ ಯಾವದೊಂದನ್ನೂ ತನ್ನ ಸ್ವಂತ ದ್ದೆಂದು ಹೇಳಲಿಲ್ಲ; ಆದರೆ ಎಲ್ಲವೂ ಅವರಿಗೆ ಹುದು ವಾಗಿತ್ತು.

ರೋಮಾಪುರದವರಿಗೆ 15:6

ಹೀಗೆ ನೀವು ಏಕ ಮನಸ್ಸಿನಿಂದಲೂ ಒಂದೇ ಬಾಯಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ.

ಪ್ರಕಟನೆ 5:8

ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.

Interlinear

Choose Theme