ಈಗ ಕರ್ತನು ತಾನು ಹೇಳಿದ ವಾಕ್ಯವನ್ನು ನೆರ ವೇರಿಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ಹೆಸರಿಗೆ ಆಲಯ ವನ್ನು ಕಟ್ಟಿಸಿ
Cross references
ಆಗ ಸೊಲೊಮೋನನು ತನ್ನ ತಂದೆಯಾದ ದಾವೀ ದನ ಸಿಂಹಾಸನದ ಮೇಲೆ ಕುಳಿತನು; ಅವನ ರಾಜ್ಯವು ಬಹು ಸ್ಥಿರವಾಗಿತ್ತು.
ಅದಕ್ಕೆ ಸೊಲೊಮೋನನು--ನನ್ನ ತಂದೆಯಾಗಿರುವ ನಿನ್ನ ಸೇವಕನಾದ ದಾವೀದನು ನಿನ್ನ ಮುಂದೆ ಸತ್ಯದಿಂದಲೂ ನೀತಿಯಿಂದಲೂ ಯಥಾರ್ಥವಾದ ಹೃದಯವುಳ್ಳವ ನಾಗಿಯೂ ನಡೆದದ್ದರಿಂದ ನೀನು ಅವನಿಗೆ ಬಹು ದಯೆತೋರಿಸಿ ಈ ಮಹಾಕರುಣೆಯನ್ನು ಅವನಿ ಗೋಸ್ಕರ ಕಾದಿಟ್ಟಿದ್ದೀ. ಈ ಹೊತ್ತಿರುವ ಹಾಗೆಯೇ ತನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಒಬ್ಬ ಮಗನನ್ನು ಕೊಟ್ಟಿದ್ದೀ.
ನಿನ್ನ ದಿವಸಗಳು ತೀರಿದ ಮೇಲೆ ನೀನು ನಿನ್ನ ಪಿತೃಗಳ ಬಳಿಗೆ ಸೇರಿದಾಗ ಆಗುವದೇ ನಂದರೆ, ನಾನು ನಿನ್ನ ತರುವಾಯ ನಿನ್ನ ಪುತ್ರರಿಂದಾ ಗುವ ನಿನ್ನ ಸಂತತಿಯನ್ನು ಎಬ್ಬಿಸಿ ಅವನಿಗೆ ರಾಜ್ಯವನ್ನು ಸ್ಥಿರಮಾಡುವೆನು.
ಈಗ ನನ್ನ ಮಗನೇ, ಕರ್ತನು ನಿನ್ನನ್ನು ಕುರಿತು ಹೇಳಿದ ಪ್ರಕಾರ ನೀನು ಸಫಲವನ್ನು ಹೊಂದುವ ಹಾಗೆಯೂ ನೀನು ನಿನ್ನ ದೇವರಾದ ಕರ್ತನ ಮನೆಯನ್ನು ಕಟ್ಟಿಸುವ ಹಾಗೆಯೂ ಆತನು ನಿನ್ನ ಸಂಗಡ ಇರಲಿ.
ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು.
ನಾವು ನಿನ್ನ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಅವೆ; ನೆಲೆಯು ಇಲ್ಲ.
ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ, ಕರ್ತನ ಸಿಂಹಾಸನದ ಮೇಲೆ ಕುಳಿತುಕೊಂಡು ಸಫಲ ಹೊಂದಿದನು. ಸಮಸ್ತ ಇಸ್ರಾಯೇಲ್ಯರು ಅವನಿಗೆ ವಿಧೇಯರಾದರು.
ದಾವೀದನ ಮಗನಾದ ಸೊಲೊಮೋ ನನು ತನ್ನ ರಾಜ್ಯದಲ್ಲಿ ಬಲಗೊಂಡನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದು ಅವನನ್ನು ಅಧಿಕವಾಗಿ ಹೆಚ್ಚಿಸಿದನು.
ಒಂದು ಸಂತಾನವು ಗತಿಸುತ್ತದೆ, ಮತ್ತೊಂದು ಸಂತಾನವು ಬರುತ್ತದೆ; ಆದರೆ ಭೂಮಿಯು ಎಂದಿಗೂ ನಿಲ್ಲುತ್ತದೆ.
ಹೌದು, ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆಮಾಡಿದೆನು; ನನ್ನ ತರು ವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕು.