ಆದರೆ ನಿನಗೆ ನಿವಾಸದ ಆಲಯವನ್ನೂ ನೀನು ಯುಗಯುಗಾಂತರಗಳಿಗೂ ವಾಸಮಾಡತಕ್ಕ ಸ್ಥಾನವನ್ನೂ ನಾನು ಕಟ್ಟಿಸಿದ್ದೇನೆ ಅಂದನು.
Cross references
ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು.
ನಿನಗೆ ನಿವಾಸದ ಮಂದಿರವನ್ನು ನೀನು ಎಂದೆಂದಿಗೂ ಅದರಲ್ಲಿ ವಾಸವಾಗಿರುವ ಹಾಗೆ ಶಾಶ್ವತ ಸ್ಥಳವನ್ನು ನಿಜವಾಗಿಯೂ ಕಟ್ಟಿಸಿದ್ದೇನೆ ಎಂದು ಹೇಳಿದನು.
ಅವನು ನನಗೆ ಮನೆಯನ್ನು ಕಟ್ಟುವನು. ಅವನ ಸಿಂಹಾಸನವನ್ನು ಎಂದೆಂದಿಗೂ ಸ್ಥಿರಮಾಡುವೆನು.
ಅವನು ನನ್ನ ನಾಮಕ್ಕೆ ಮನೆಯನ್ನು ಕಟ್ಟಿಸುವನು. ಅವನು ನನ್ನ ಮಗನಾಗಿರುವನು, ನಾನು ಅವನಿಗೆ ತಂದೆ ಯಾಗಿರುವೆನು; ಇಸ್ರಾಯೇಲಿನ ಮೇಲೆ ಅವನ ರಾಜ್ಯದ ಸಿಂಹಾಸನವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು.
ಆತನು ನನ್ನ ಸಂಗಡ--ನಿನ್ನ ಮಗನಾದ ಸೊಲೊಮೋನನು ತಾನೇನನ್ನ ಮನೆಯನ್ನೂ ಅಂಗಳಗಳನ್ನೂ ಕಟ್ಟಿಸುವನು; ಅವನನ್ನು ನನಗೆ ಮಗನಾಗಿರಲು ಆದುಕೊಂಡೆನು. ನಾನು ಅವನಿಗೆ ತಂದೆಯಾಗಿರುವೆನು.
ದಾವೀದನು ತನ್ನ ಮಗನಾದ ಸೊಲೊಮೋನ ನಿಗೆ ಹೇಳಿದ್ದೇನಂದರೆ--ನೀನು ಬಲಗೊಂಡು ದೃಢ ಪಟ್ಟು ಮಾಡು; ಭಯಪಡಬೇಡ, ಹೆದರಬೇಡ; ಯಾಕಂದರೆ ನನ್ನ ದೇವರಾಗಿರುವ ಕರ್ತನಾದ ದೇವರು ನಿನ್ನ ಸಂಗಡ ಇರುವನು. ಕರ್ತನ ಮನೆಯ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವ ವರೆಗೂ ಆತನು ನಿನ್ನನ್ನು ವಿಸರ್ಜಿಸುವದಿಲ್ಲ, ಕೈ ಬಿಡುವದಿಲ್ಲ.ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.
ಇಗೋ, ನನ್ನ ದೇವರಾದ ಕರ್ತನಿಗೆ ಅದನ್ನು ಪ್ರತಿಷ್ಠೆ ಮಾಡುವದಕ್ಕೂ ಆತನ ಮುಂದೆ ಪರಿಮಳ ಧೂಪವನ್ನು ಸುಡುವದಕ್ಕೂ ನಿತ್ಯ ಸಮ್ಮುಖದ ರೊಟ್ಟಿ ಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆಗಳ ಲ್ಲಿಯೂ ಇಸ್ರಾಯೇಲಿಗೆ ನಿರಂತರವಾಗಿರಲು ನೇಮಿ ಸಿದ ನಮ್ಮ ದೇವರಾದ ಕರ್ತನ ಹಬ್ಬಗಳಲ್ಲಿಯೂ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋ ಸ್ಕರವೂ ಆತನ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.
ಅದರ ಸಂಗಡ ಯೆರೂಸ ಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕೋಸ್ಕರ ಜನರಿಂದಲೂ ಯಾಜಕರಿಂದಲೂ ಕೊಡಲ್ಪಟ್ಟ ಮನಃ ಪೂರ್ವಕವಾದ ಅರ್ಪಣೆಯನ್ನೂ ತಕ್ಕೊಂಡು ಹೋಗಿ
ನನ್ನ ಕಣ್ಣುಗಳಿಗೆ ನಿದ್ದೆಯನ್ನೂ ನನ್ನ ರೆಪ್ಪೆ ಗಳಿಗೆ ತೂಕಡಿಕೆಯನ್ನೂ ಕೊಡೆನು ಎಂಬದು.
ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ.
ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ.
ಅವರು ಒಳಗೆ ಹೋಗು ವಾಗ ಅವರ ಮಧ್ಯದಲ್ಲಿರುವ ಪ್ರಧಾನನು ಒಳಗೆ ಹೋಗಬೇಕು. ಹೊರಗೆ ಹೋಗುವಾಗ ಹೊರಗೆ ಬರಬೇಕು.
ಯೇಸು ಆಕೆಗೆ--ಸ್ತ್ರೀಯೇ, ನನ್ನನ್ನು ನಂಬು; ಈ ಬೆಟ್ಟದಲ್ಲಿಯಾಗಲೀ ಯೆರೂಸಲೇಮಿನಲ್ಲಿಯಾಗಲೀ ನೀವು ತಂದೆಯನ್ನು ಆರಾಧಿಸದೆ ಇರುವ ಗಳಿಗೆ ಬರುತ್ತದೆ.
ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ
ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ