Home Bibles 2 ದಿನವೃತ್ತಾಂತ 6:34 · ಕನ್ನಡ ಬೈಬಲ್
2 ದಿನವೃತ್ತಾಂತ 6:34 · ಕನ್ನಡ ಬೈಬಲ್

ನಿನ್ನ ಜನರು ನೀನು ಅಟ್ಟಿಬಿಡುವ ಯಾವ ಸ್ಥಳ ದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧ ಮಾಡಲು ಹೊರಟು ಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿಗೆ ಕಟ್ಟಿಸಿದ ಈ ಆಲಯದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ

Cross references

ಅಂಕೆಗಳ ಪುಸ್ತಕ 31:2

ನೀನು ಮಿದ್ಯಾನ್ಯರ ಕಡೆಯಿಂದ ಇಸ್ರಾಯೇಲ್‌ ಮಕ್ಕಳ ಮುಯ್ಯನ್ನು ತೀರಿಸು, ತರು ವಾಯ ನಿನ್ನ ಜನರ ಸಂಗಡ ನೀನು ಕೂಡಿಸಲ್ಪಡುವಿ ಅಂದನು.

ದ್ವಿತೀಯೋಪದೇಶಕಾಂಡ 20:1

ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಕುದುರೆಗಳನ್ನೂ ರಥ ಗಳನ್ನೂ ನಿನಗಿಂತ ಹೆಚ್ಚಾದ ಜನರನ್ನೂ ನೋಡಿದರೆ ಅವರಿಗೆ ಭಯಪಡಬೇಡ; ಐಗುಪ್ತದೇಶದೊಳಗಿಂದ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ.

ಯೆಹೋಶುವ 1:2

ನನ್ನ ಸೇವಕನಾದ ಮೋಶೆಯು ಸತ್ತನು; ಈಗ ನೀನು ಈ ಜನರೆಲ್ಲರ ಸಹಿತವಾಗಿ ನಾನು ಇಸ್ರಾಯೇಲ್‌ ಮಕ್ಕಳಿಗೆ ಕೊಡುವ ದೇಶಕ್ಕೆ ಹೋಗು.

ಯೆಹೋಶುವ 8:1

ಆಗ ಕರ್ತನು ಯೆಹೋಶುವನಿಗೆ--ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ನೀನು ಸಮಸ್ತ ಯುದ್ಧಸ್ಥರಾದ ಜನರನ್ನು ಕೂಡಿಸಿಕೊಂಡು ಎದ್ದು ಆಯಿಗೆ ಏರಿ ಹೋಗು. ನೋಡು, ನಾನು ಆಯಿಯ ಅರಸನನ್ನೂ ಅವನ ಜನವನ್ನೂ ಪಟ್ಟಣ ವನ್ನೂ ಸೀಮೆಯನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.

ನ್ಯಾಯಾಧಿಪತಿಗಳು 1:1

ಯೆಹೋಶುವನು ಸತ್ತ ತರುವಾಯ ಆದದ್ದೇನಂದರೆ, ಇಸ್ರಾಯೇಲ್‌ ಮಕ್ಕಳು ಕರ್ತನಿಗೆ--ಕಾನಾನ್ಯರ ಮೇಲೆ ಮೊದಲು ನಮಗಾಗಿ ಯುದ್ಧಕ್ಕೆ ಹೋಗುವವರು ಯಾರು ಎಂದು ಕೇಳಿದರು.

1 ಸಮುವೇಲ 15:3

ಈಗ ನೀನು ಹೋಗಿ ಆ ಅಮಾಲೇಕ್ಯರನ್ನು ಹೊಡೆದು ಅವರಿಗೆ ಇದ್ದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿ ಅವರನ್ನು ಕನಿಕರಿಸದೆ ಪುರುಷರನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಮೊಲೆ ಕೂಸುಗಳನ್ನೂ ದನ ಕುರಿ ಒಂಟೆ ಕತ್ತೆಗಳನ್ನೂ ಕೊಂದುಹಾಕು ಎಂಬದು.

1 ಸಮುವೇಲ 15:18

ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ ಅವರು ತೀರಿಹೋಗುವ ವರೆಗೂ ಅವರ ಸಂಗಡ ಯುದ್ಧಮಾಡಬೇಕೆಂದು ಕರ್ತನು ನಿನ್ನನ್ನು ಕಳುಹಿಸಿದನು.

1 ಅರಸುಗಳು 8:13

ನಿನಗೆ ನಿವಾಸದ ಮಂದಿರವನ್ನು ನೀನು ಎಂದೆಂದಿಗೂ ಅದರಲ್ಲಿ ವಾಸವಾಗಿರುವ ಹಾಗೆ ಶಾಶ್ವತ ಸ್ಥಳವನ್ನು ನಿಜವಾಗಿಯೂ ಕಟ್ಟಿಸಿದ್ದೇನೆ ಎಂದು ಹೇಳಿದನು.

1 ಅರಸುಗಳು 8:44

ನಿನ್ನ ಜನರು ನೀನು ಕಳುಹಿಸುವ ಯಾವ ಸ್ಥಳದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧವನ್ನು ಮಾಡಲು ಹೊರಟುಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿ ಗೋಸ್ಕರ ಕಟ್ಟಿಸಿದ ಈ ಮನೆಯ ಮಾರ್ಗವಾಗಿಯೂ ಅವರು ಕರ್ತನಾದ ನಿನಗೆ ಪ್ರಾರ್ಥನೆ ಮಾಡಿದಾಗ

2 ದಿನವೃತ್ತಾಂತ 6:6

ಆದರೆ ನನ್ನ ಹೆಸರು ಅಲ್ಲಿ ಇರುವ ಹಾಗೆ ಯೆರೂಸಲೇಮನ್ನೂ ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ಇರಲು ದಾವೀದನನ್ನೂ ಆದುಕೊಂಡಿದ್ದೇನೆ ಎಂದು ಹೇಳಿದ್ದಾನೆ.

2 ದಿನವೃತ್ತಾಂತ 14:9

ಆದರೆ ಕೂಷಿಯನಾದ ಜೆರಹನು ಅವರಿಗೆ ವಿರೋ ಧವಾಗಿ ಹೊರಟು ಮಾರೇಷದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ರಾಣುವೆಯೂ ಮುನ್ನೂರು ರಥಗಳೂ ಇದ್ದವು.

2 ದಿನವೃತ್ತಾಂತ 18:31

ಆದದರಿಂದ ರಥಗಳ ಅಧಿಪತಿ ಗಳು ಯೆಹೋಷಾಫಾಟನನ್ನು ನೋಡಿದಾಗ--ನಿಶ್ಚ ಯವಾಗಿ ಇವನೇ ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಳ್ಳಲು ಕರ್ತನು ಅವ ನಿಗೆ ಸಹಾಯಕೊಟ್ಟನು. ಇದಲ್ಲದೆ ದೇವರು ಅವರನ್ನು ಅವನ ಕಡೆಯಿಂದ ತೊಲಗಿಸಿದನು.

2 ದಿನವೃತ್ತಾಂತ 20:4

ಆದದರಿಂದ ಯೆಹೂದ ದವರು ಕರ್ತನನ್ನು ಹುಡುಕಲು ಕೂಡಿಕೊಂಡರು. ನಿಶ್ಚಯವಾಗಿ ಸಮಸ್ತ ಯೆಹೂದದ ಪಟ್ಟಣಗಳಿಂದ ಕರ್ತನನ್ನು ಹುಡುಕಲು ಬಂದರು.

2 ದಿನವೃತ್ತಾಂತ 20:6

ಓ ಕರ್ತನೇ, ಪರಲೋಕದಲ್ಲಿರುವ ದೇವರು ನೀನಲ್ಲವೋ? ನೀನು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀಯಲ್ಲವೋ? ಯಾವನೂ ನಿನ್ನನ್ನು ಎದುರಿಸಕೂಡದ ಹಾಗೆ ನಿನ್ನ ಕೈಯಲ್ಲಿ ಶಕ್ತಿಯೂ ಪರಾಕ್ರಮವೂ ಇಲ್ಲವೋ?

2 ದಿನವೃತ್ತಾಂತ 32:20

ಇದರ ನಿಮಿತ್ತ ಅರಸನಾದ ಹಿಜ್ಕೀಯನೂ ಆಮೋ ಚನ ಮಗನಾಗಿರುವ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು.

ಯೆಶಾಯ 14:32

ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.

ದಾನಿಯೇಲ 6:10

ಯಾವಾಗ ಬರಹಕ್ಕೆ ರುಜುಹಾಕಿದ್ದಾ ಯಿತ್ತೆಂದು ದಾನಿಯೇಲನಿಗೆ ತಿಳಿಯಿತೋ ಆಗ ಅವನು ತನ್ನ ಮನೆಗೆ ಹೋದನು; ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆಯಲ್ಪಟ್ಟಿದ್ದ ರಿಂದ ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ಸ್ತೋತ್ರವನ್ನೂ ಸಲ್ಲಿಸಿ ದನು.

Interlinear

Choose Theme