Home Bibles 2 ದಿನವೃತ್ತಾಂತ 9:10 · ಕನ್ನಡ ಬೈಬಲ್
2 ದಿನವೃತ್ತಾಂತ 9:10 · ಕನ್ನಡ ಬೈಬಲ್

ಇದಲ್ಲದೆ ಓಫೀರಿನಿಂದ ಬಂಗಾರವನ್ನು ತಂದ ಹೂರಾಮನ ಸೇವಕರೂ ಸೊಲೊಮೋನನ ಸೇವ ಕರೂ ಅಲ್ಮಗ್‌ ಮರಗಳನ್ನೂ ಅಮೂಲ್ಯವಾದ ಕಲ್ಲುಗ ಳನ್ನೂ ತಂದರು.

Cross references

1 ಅರಸುಗಳು 9:27

ಹೀರಾಮನು ಹಡಗುಗಳಲ್ಲಿ ಸಮುದ್ರದ ಜ್ಞಾನವುಳ್ಳ ನಾವಿಕರಾಗಿರುವ ತನ್ನ ಸೇವಕರನ್ನು ಸೊಲೊಮೋನನ ಸೇವಕರ ಸಂಗಡ ಕಳುಹಿಸಿದನು.ಅವರು ಓಫಿರಿಗೆ ಹೋಗಿ ಅಲ್ಲಿಂದ ನಾನೂರ ಇಪ್ಪತ್ತು ಬಂಗಾರದ ತಲಾಂತು ಗಳನ್ನು ಅರಸನಾದ ಸೊಲೊಮೋನನಿಗೆ ತಕ್ಕೊಂಡು ಬಂದರು.

1 ಅರಸುಗಳು 10:11

ಇದಲ್ಲದೆ ಹೀರಾಮನ ಹಡಗುಗಳು ಓಫಿರಿನಿಂದ ಬಂಗಾರವನ್ನೂ ಅನೇಕ ಅಲ್ಮುಗ್‌ ಮರಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ತಂದವು.

1 ಅರಸುಗಳು 10:22

ಅರಸನಿಗೆ ತಾರ್ಷೀ ಷಿನ ಹಡಗುಗಳು ಹೀರಾಮನ ಹಡಗುಗಳ ಸಂಗಡ ಸಮುದ್ರದಲ್ಲಿ ಇದ್ದವು. ಮೂರು ವರುಷಕ್ಕೆ ಒಂದು ಸಾರಿ ತಾರ್ಷೀಷಿನ ಹಡಗುಗಳು ಬೆಳ್ಳಿಬಂಗಾರ ವನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.

2 ದಿನವೃತ್ತಾಂತ 8:18

ಹೂರಾಮನು ತನ್ನ ಸೇವಕರ ಕೈಯಿಂದ ಹಡಗುಗಳನ್ನೂ ಸಮುದ್ರ ತಿಳಿದ ವರಾದ ಸೇವಕರನ್ನೂ ಅವನ ಬಳಿಗೆ ಕಳುಹಿಸಿದನು. ಅವರು ಸೊಲೊಮೋನನ ಸೇವಕರ ಸಂಗಡ ಓಫೀರಿಗೆ ಹೋಗಿ ಅಲ್ಲಿಂದ ಸೊಲೊಮೋನನಿಗೆ ನಾನೂರೈವತ್ತು ತಲಾಂತು ತೂಕ ಬಂಗಾರವನ್ನು ತೆಗೆದುಕೊಂಡು ಬಂದರು.

ಸಾಮೇತಿಗಳು 31:14

ಆಕೆಯು ವರ್ತಕರ ಹಡಗುಗಳಂತೆ ಇದ್ದಾಳೆ; ಆಕೆಯು ದೂರದಿಂದ ತನ್ನ ಆಹಾರವನ್ನು ತರುತ್ತಾಳೆ.

Interlinear

Choose Theme