Home Bibles 2 ದಿನವೃತ್ತಾಂತ 9:9 · ಕನ್ನಡ ಬೈಬಲ್
2 ದಿನವೃತ್ತಾಂತ 9:9 · ಕನ್ನಡ ಬೈಬಲ್

ಅವಳು ಅರಸನಿಗೆ ನೂರಿಪ್ಪತ್ತು ತಲಾಂತು ತೂಕ ಬಂಗಾರವನ್ನೂ ಬಹು ಹೆಚ್ಚಾದ ಸುಗಂಧಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಂಥ ಸುಂಗಧಗಳು ತರುವಾಯ ಬಂದದ್ದಿಲ್ಲ.

Cross references

ಆದಿಕಾಂಡ 43:11

ಆಗ ಅವರ ತಂದೆಯಾದ ಇಸ್ರಾಯೇಲನು ಅವರಿಗೆ--ನೀವು ಹೀಗೆ ಮಾಡಿರಿ, ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮ ಸಾಮಾನು ಗಳಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆ ಯಾಗಿ ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಅಕ್ರೋಡು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.

ನಿರ್ಗಮಕಾಂಡ 30:34

ಕರ್ತನು ಮೋಶೆಗೆ--ನೀನು ಪರಿಮಳಗಳನ್ನು ಅಂದರೆ ಹಾಲುಮಡ್ಡಿ ಗುಗ್ಗುಲ ಗಂಧದ ಚೆಕ್ಕೆ ಎಂಬ ಪರಿಮಳಗಳನ್ನೂ ಶುದ್ಧವಾದ ಸಾಂಬ್ರಾಣಿಯನ್ನೂ ತೆಗೆದುಕೋ. ಅವು ಸಮತೂಕವಾಗಿರಲಿ.

1 ಅರಸುಗಳು 9:14

ಹೀರಾಮನು ಅರಸನಿಗೆ ನೂರ ಇಪ್ಪತ್ತು ತಲಾಂತುಗಳ ಚಿನ್ನವನ್ನು ಕಳುಹಿಸಿದನು.

1 ಅರಸುಗಳು 10:10

ಅವಳು ಅರಸನಿಗೆ ನೂರ ಇಪ್ಪತ್ತು ತಲಾಂತು ಚಿನ್ನವನ್ನೂ ಬಹುಸಮೃದ್ಧಿಯಾದ ಸುಗಂಧದ್ರವ್ಯಗ ಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಅಪರಿಮಿತವಾದ ಸುಗಂಧಗಳ ಹಾಗೆ ಇನ್ನೆಂದೂ ಬಂದದ್ದಿಲ್ಲ.

2 ದಿನವೃತ್ತಾಂತ 9:1

ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿದಾಗ ಒಗಟುಗಳಿಂದ ಅವನನ್ನು ಶೋಧಿಸಲು ಅವಳು ಮಹಾಗುಂಪಿನ ಸಂಗಡ ಸುಗಂಧಗಳನ್ನೂ ಬಹು ಬಂಗಾರವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಅವನ ಸಂಗಡ ಮಾತಾ ಡಿದಳು.

2 ದಿನವೃತ್ತಾಂತ 9:24

ಅವರವರು ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಿದ್ದರು.

ಕೀರ್ತನೆಗಳು 72:10

ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.

ಕೀರ್ತನೆಗಳು 72:15

ಅವನು ಬಾಳುವನು; ಅವನಿಗೆ ಶೆಬಾದ ಚಿನ್ನ ವನ್ನು ಕೊಡುವರು; ಅವನಿಗೋಸ್ಕರ ಯಾವಾಗಲೂ ಪ್ರಾರ್ಥನೆ ಮಾಡುವರು; ಪ್ರತಿದಿನ ಅವನನ್ನು ಕೊಂಡಾಡುವರು.

Interlinear

Choose Theme