Home Bibles ☰ Books 2 ಕೊರಿಂಥದವರಿಗೆ 1:8 · ಕನ್ನಡ ಬೈಬಲ್
2 ಕೊರಿಂಥದವರಿಗೆ 1:8 · ಕನ್ನಡ ಬೈಬಲ್

ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು.

Cross references

1 ಸಮುವೇಲ 20:3

ಆಗ ದಾವೀದನು ಪ್ರಮಾಣಮಾಡಿ--ನಿನ್ನ ಕಣ್ಣು ಮುಂದೆ ನನಗೆ ದಯೆದೊರಕೀತೆಂದು ನಿನ್ನ ತಂದೆಯು ನಿಶ್ಚಯವಾಗಿ ಬಲ್ಲನು; ಆದಕಾರಣ ಯೋನಾತಾನನು ವ್ಯಥೆಪಡದ ಹಾಗೆ--ಅವನು ಇದನ್ನು ತಿಳಿಯಬಾರದು ಎಂದು ಅನ್ನುತ್ತಾನೆ. ನಿಶ್ಚಯವಾಗಿ ಕರ್ತನಾಣೆ, ನಿನ್ನ ಪ್ರಾಣದಾಣೆ, ನನಗೂ ಮರಣಕ್ಕೂ ಒಂದು ಹೆಜ್ಜೆ ದೂರ ಮಾತ್ರವದೆ ಅಂದನು.

1 ಸಮುವೇಲ 27:1

ದಾವೀದನು ತನ್ನ ಹೃದಯದಲ್ಲಿ--ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಮಡಿದುಹೋಗುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿಹೋಗುವ ದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು ಅಂದು ಕೊಂಡನು.

ಅಪೋಸ್ತಲರ ಕೃತ್ಯಗಳು 19:23

ಅದೇ ಸಮಯದಲ್ಲಿ ಆ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.

ಅಪೋಸ್ತಲರ ಕೃತ್ಯಗಳು 19:41

ಅವನು ಆ ಗುಂಪನ್ನು ಹಾಗೆ ಕಳುಹಿಸಿಬಿಟ್ಟನು.

1 ಕೊರಿಂಥದವರಿಗೆ 4:8

ಈಗಾಗಲೇ ನೀವು ತೃಪ್ತರಾದಿರಿ, ಈಗಾಗಲೇ ಐಶ್ವರ್ಯವಂತರಾದಿರಿ, ನಾವಿಲ್ಲದೆ ನೀವು ಅರಸರಂತೆ ಆಳಿದಿರಿ; ನೀವು ಆಳುವಂತೆ ದೇವರು ಮಾಡಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು; ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೆವು.

1 ಕೊರಿಂಥದವರಿಗೆ 15:32

ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧ ಮಾಡಿದ್ದು ಕೇವಲ ಮನುಷ್ಯರೀತಿಯಾಗಿದ್ದು ಸತ್ತವರು ಎದ್ದು ಬರುವದಿಲ್ಲವಾದರೆ ಅದರಿಂದ ನನಗೇನು ಪ್ರಯೋಜನ? ಹಾಗಾದರೆ ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.

1 ಕೊರಿಂಥದವರಿಗೆ 16:9

ಕಾರ್ಯಸಾಧಕವಾಗುವ ದೊಡ್ಡದೊಂದು ಬಾಗಲು ನನಗೋಸ್ಕರ ತೆರೆಯಲ್ಪಟ್ಟಿದೆ, ಅನೇಕ ವಿರೋಧಿಗಳು ಇದ್ದಾರೆ.

2 ಕೊರಿಂಥದವರಿಗೆ 4:7

ಬಲಾಧಿಕ್ಯವು ನಮ್ಮದಲ್ಲ, ಅದು ದೇವರದಾಗಿ ರುವ ಹಾಗೆ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.

Interlinear

Choose Theme